ಮಧ್ಯಮ ವರ್ಗದ ಜನತೆಗೆ ಬಿಗ್‌ ರಿಲಿಫ್‌! – ಆದಾಯ ತೆರಿಗೆ ವಿನಾಯಿತಿ ಮಿತಿ 7 ಲಕ್ಷ ರೂ.ಗೆ ವಿಸ್ತರಣೆ!

ಮಧ್ಯಮ ವರ್ಗದ ಜನತೆಗೆ ಬಿಗ್‌ ರಿಲಿಫ್‌! – ಆದಾಯ ತೆರಿಗೆ ವಿನಾಯಿತಿ ಮಿತಿ 7 ಲಕ್ಷ ರೂ.ಗೆ ವಿಸ್ತರಣೆ!

ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರ ಬಿಗ್‌ ರಿಲೀಫ್‌ ನೀಡಿದೆ. ಹೊಸ ತೆರಿಗೆ ವಿಧಾನದ ಅಡಿಯಲ್ಲಿ ವೈಯಕ್ತಿಕ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 7 ಲಕ್ಷ ರೂ.ಗೆ ವಿಸ್ತರಣೆಯನ್ನು ಅಧಿಕೃತವಾಗಿ ಜಾರಿ ಮಾಡಲಾಗಿದೆ.

ಕೇಂದ್ರ ಬಜೆಟ್‌ನಲ್ಲಿ  7 ಲಕ್ಷ ರೂ. ವೈಯಕ್ತಿಕ ಆದಾಯಕ್ಕೆ ತೆರಿಗೆ ವಿನಾಯಿತಿಯನ್ನು ಘೋಷಿಸಿದ್ದ ಸರ್ಕಾರ ಈಗ ಆದಾಯ ತೆರಿಗೆ ಕಾಯ್ದೆಗೆ ತಿದ್ದುಪಡಿ ಮಾಡಿ ಈ ಪ್ರಸ್ತಾಪವನ್ನು ಅಧಿಕೃತವಾಗಿ ಜಾರಿ ಮಾಡಿದೆ. ಈ ಬಗ್ಗೆ ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.

ಇದನ್ನೂ ಓದಿ: ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಿಂದ ಯತೀಂದ್ರ ಸ್ಪರ್ಧಿಸುತ್ತಾರಾ? – ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಹಿತಿ ನೀಡಿರುವ ಕೇಂದ್ರ ಹಣಕಾಸು ಸಚಿವಾಲಯ, ಆದಾಯ ತೆರಿಗೆ ಕಾಯ್ದೆ  2023 ಸೆಕ್ಷನ್‌ 87ಕ್ಕೆ ತಿದ್ದುಪಡಿ ಮಾಡಿ ವಾರ್ಷಿಕ ಬಜೆಟ್​ನಲ್ಲಿ ಪ್ರಕಟಿಸಿದ ಘೋಷಣೆಯನ್ನು ಜಾರಿ ಮಾಡಲಾಗಿದೆ ಎಂದು ತಿಳಿಸಿದೆ.

ಆದಾಯ 7 ಲಕ್ಷ ರೂಪಾಯಿಯ ತನಕ ಇದ್ದಲ್ಲಿ ಇನ್ನು ಮುಂದೆ ಆದಾಯ ತೆರಿಗೆ ಸಲ್ಲಿಸುವಾಗ ಕಟ್ಟಿರುವ ತೆರಿಗೆಯನ್ನು ರಿಬೇಟ್​ ಅಥವಾ ವಾಪಸ್​ ಪಡೆದುಕೊಳ್ಳುವ ಅವಕಾಶ ಲಭ್ಯವಿರುತ್ತದೆ. ಈ ಹಿಂದೆ 5 ಲಕ್ಷ ರೂ. ತನಕ ಆದಾಯ ಇದ್ದವರಿಗೆ ಈ ವಿನಾಯಿತಿ ನೀಡಲಾಗುತ್ತಿತ್ತು. 2023ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಈ ಅವಕಾಶವನ್ನು 7 ಲಕ್ಷ ರೂ. ಆದಾಯ ಇರುವವರಿಗೂ ವಿಸ್ತರಿಸಿದ್ದರು.

Shwetha M