ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತಗಳ ಹೆಚ್ಚಳ – ಫೀಲ್ಡಿಗಿಳಿದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತಗಳ ಹೆಚ್ಚಳ – ಫೀಲ್ಡಿಗಿಳಿದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಹೆಚ್ಚುತ್ತಿರುವ ಅಪಘಾತಗಳಿಗೆ ಬ್ರೇಕ್ ಹಾಕಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಎಲ್ಲಾ ರೀತಿಯಲ್ಲೂ ಕ್ರಮ ಕೈಗೊಳ್ಳಲು ಮುಂದಾಗಿದೆ. ಕಳೆದ 9 ತಿಂಗಳಿನಲ್ಲಿ ಎಕ್ಸ್‌ಪ್ರೆಸ್ ಹೈವೇನಲ್ಲಿ 550ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಇದೀಗ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಫೀಲ್ಡಿಗಿಳಿದಿದ್ದು, ಅಪಘಾತಗಳ ನಿಯಂತ್ರಣಕ್ಕೆ ಮುಂದಾಗಿದೆ.

ಇದನ್ನೂ ಓದಿ: ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಸ್ಪೀಡ್‌ಗೆ ಬ್ರೇಕ್ – ಗಂಟೆಗೆ 100 ಕಿ.ಮೀ. ವೇಗದ ಮಿತಿ ನಿಗದಿ..!

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಅಪಘಾತಗಳು ಹೆಚ್ಚಾಗಿರುವುದರ ಬಗ್ಗೆ ಪರಿಶೀಲನೆ ನಡೆಸಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ವಿಶೇಷ ಸಮಿತಿಯೊಂದನ್ನು ರಚನೆ ಮಾಡಿದೆ. ಮೂವರು ತಜ್ಞರನ್ನೊಳಗೊಂಡ ಸಮಿತಿ ಇದಾಗಿದೆ. ರಸ್ತೆ ಸುರಕ್ಷತೆ ಸಲಹೆಗಾರ ಸುದರ್ಶನ್ ಕೆ.ಪೊಪ್ತಿ, ಎನ್‌ಹೆಚ್‌ಎಐ ಉಪ ವ್ಯವಸ್ಥಾಪಕ ಪ್ರವೀಣ್ ಕುಮಾರ್, ಜೈವರ್ಧನ್ ಸಿಂಗ್ ಅವರು ಸಮಿತಿಯ ಸದಸ್ಯರಾಗಿದ್ದಾರೆ. ಈ ಸಮಿತಿಯು ಜುಲೈ 20 ರೊಳಗೆ ಎಕ್ಸ್ ಪ್ರೆಸ್ ಹೈವೇಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿ 10 ದಿನದೊಳಗೆ ವರದಿ ನೀಡುವಂತೆ ಪ್ರಾಧಿಕಾರದ ರಸ್ತೆ ಸುರಕ್ಷತೆ ವಿಭಾಗದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುನೀಲ್ ಜಿಂದಾಲ್ ಸಮಿತಿಗೆ ಸೂಚನೆ ನೀಡಿದ್ದಾರೆ. ಕಳೆದ 9 ತಿಂಗಳಿನಲ್ಲಿ ಎಕ್ಸ್‌ಪ್ರೆಸ್ ಹೈವೇಯಲ್ಲಿ 550ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಈ ಅಪಘಾತಗಳಲ್ಲಿ ಮೃತಪಟ್ಟವರ ಬಗ್ಗೆ ಮಾಹಿತಿ ನೀಡುವಂತೆಯೂ ಪ್ರಾಧಿಕಾರ ಆದೇಶಿಸಿದೆ.

suddiyaana