ಬೆಂಗಳೂರು – ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಅಪಘಾತ ಹೆಚ್ಚಳ – ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ  ಸಿದ್ದರಾಮಯ್ಯ

ಬೆಂಗಳೂರು – ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಅಪಘಾತ ಹೆಚ್ಚಳ – ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ  ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಸಂಚಾರ ಆರಂಭವಾದಾಗಿನಿಂದ ಒಂದಿಲ್ಲೊಂದು ವಿವಾದಗಳಿಂದ ಸುದ್ದಿಯಾಗುತ್ತಿದೆ. ಅವೈಜ್ಞಾನಿಕ ಕಾಮಗಾರಿ, ಅಪಘಾತಗಳ ಸಂಖ್ಯೆ ಹೆಚ್ಚಳವಾಗುತ್ತಿದೆ ಎಂದು ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರೇ ಖುದ್ದಾಗಿ ಮೈಸೂರು – ಬೆಂಗಳೂರು ಎಕ್ಸ್ ಪ್ರೆಸ್‌ವೇ ಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಪೋಲೀಸರು ಹಾಗೂ ಅಧಿಕಾರಿಗಳೊಂದಿಗೆ ಆಗಮಿಸಿ ಮೊದಲ ಬಾರಿಗೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ವೀಕ್ಷಿಸಿದರು. ಬಳಿಕ ಎಕ್ಸ್​ಪ್ರೆಸ್ ವೇಯಲ್ಲಿ ಅಪಘಾತ ತಡೆಗೆ ಪೊಲೀಸ್ ಇಲಾಖೆ ತೆಗೆದುಕೊಂಡ ಕ್ರಮಗಳು, ಅತಿ ವೇಗದ ಚಾಲನೆ ಗುರುತಿಸಿ ಸಂಚಾರ ನಿಯಮ ಉಲ್ಲಂಘನೆಗೆ ದಂಡ ಹಾಕಲು ಕ್ಯಾಮರಾಗಳ ಅಳವಡಿಕೆ ಕ್ರಮಗಳ ಕುರಿತಂತೆ ಅಧಿಕಾರಿಗಳು ಹಾಗೂ ಪೊಲೀಸರ ಮಾಹಿತಿ ಪಡೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ನಿಯಮ ಉಲ್ಲಂಘಿಸಿದರೆ ಫಾಸ್ಟ್‌ಟ್ಯಾಗ್‌ ಮೂಲಕವೇ ದಂಡ

ಹೆದ್ದಾರಿ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರು, ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸ್ಪೀಡ್ ಡಿಟೆಕ್ಟರ್ ಗಳನ್ನು ಅಳವಡಿಸಿರಲಿಲ್ಲ. ಹಾಗಾಗಿ ಅಪಘಾತಗಳು ಹೆಚ್ಚಾಗಿದ್ದವು. ಜುಲೈ ತಿಂಗಳಲ್ಲಿ ಅಪಘಾತಗಳು ಕಡಿಮೆ ಯಾಗಿವೆ. ಜೂನ್ ತಿಂಗಳಲ್ಲಿ 20 ಅಪಘಾತಗಳಾಗಿದ್ದರೆ, ಜುಲೈನಲ್ಲಿ 5 ಅಪಘಾತಗಳು ಸಂಭವಿಸಿವೆ. ಸ್ಪೀಡ್ ಡಿಟೆಕ್ಟರ್ ಗಳನ್ನು 10 ಕಿಮೀ ಅಂತರದಲ್ಲಿ ಅಳವಡಿಸಿದರೆ ಅಪಘಾತಗಳನ್ನು ಕಡಿಮೆ ಮಾಡಲು ಸಾಧ್ಯ ಎಂದು ಹೇಳಿದ್ದಾರೆ.

ಮುಖ್ಯ ಕಾರ್ಯದರ್ಶಿಗಳು ಎನ್.ಹೆಚ್.ಎ. ಐ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ನನ್ನ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಎಕ್ಸ್ ಪ್ರೆಸ್ ವೇ ನಲ್ಲಿ ಕೆಲವು ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕಿದ್ದು ಅದಕ್ಕಾಗಿಯೇ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಸರ್ವಿಸ್ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ. ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು,ಮಂಡ್ಯ, ಶ್ರೀರಂಗಪಟ್ಟಣ, ಬೈಪಾಸ್ ರಸ್ತೆಗಳಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಪ್ರವೇಶ ಮತ್ತು ನಿರ್ಗಮನ ರಸ್ತೆಗಳನ್ನು ಮಾರ್ಚ್ ನಲ್ಲಿ ಪೂರ್ಣ ಗೊಳಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

suddiyaana