3 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಡೆಂಘೀಯಿಂದ 7 ಜನ ಸಾವು – ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

3 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಡೆಂಘೀಯಿಂದ 7 ಜನ ಸಾವು – ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಕರ್ನಾಟಕದಲ್ಲಿ ಇತ್ತೀಚೆಗೆ ಡೆಂಘೀ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತೀಚೆಗಷ್ಟೇ ಆರೋಗ್ಯ ಸಚಿವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದರು. ಹಾಗೂ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಸಲಹೆ ನೀಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಸಹ ಡೆಂಘೀ ರೋಗ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ.

ಕೆಲ ದಿನಗಳಿಂದ ಡೆಂಘೀ ಪ್ರಕರಣಗಳು ಹೆಚ್ಚಾಗಿದ್ದು, ಸುಮಾರು 7 ಸಾವಿರಕ್ಕೂ ಅಧಿಕ ಡೆಂಘೀ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಡೆಂಘೀ ವೇಗವಾಗಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಹಾಗೂ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಔಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ. ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ. ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ. ಡೆಂಘೀ ಬಗ್ಗೆ ಭಯ ಬೇಡ, ಜಾಗೃತೆಯಿರಲಿ ಎಂದರು.

ಇದನ್ನೂ ಓದಿ : ಬೆಂಗಳೂರಿಗೆ ಬಂದ್ ಬಿಸಿ – ಆಟೋ-ಕ್ಯಾಬ್ ಸಿಗದೆ ಜನರ ಪರದಾಟ!

ಈಗಾಗಲೇ ಡೆಂಘೀ ರೋಗದಿಂದ ಕಳೆದ ಮೂರು ತಿಂಗಳಲ್ಲಿ ನಗರದಲ್ಲಿ ಏಳು ಜನ ಮೃತಪಟ್ಟಿದ್ದರು. ಕಳೆದ ಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಕಳೆದ ಒಂದು ತಿಂಗಳಿನಿಂದ ನಗರದಲ್ಲಿ ಡೆಂಘೀ ರೋಗ ಆತಂಕಕಾರಿಯಾಗಿ ಏರಿಕೆ ಕಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅಧಿಕಾರಿಗಳ ಪ್ರಕಾರ, ನಗರದಲ್ಲಿ ಈ ವರ್ಷ ಸೆ.08ರವರೆಗೆ 5,000 ಡೆಂಘೀ ರೋಗ ಪ್ರಕರಣಗಳು ವರದಿಯಾಗಿದ್ದವು. ಆಗಸ್ಟ್‌ನಲ್ಲಿ 2,374 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದವು.

suddiyaana