ಭಾರತದಲ್ಲಿ ಮತ್ತೆ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಳ! – ಒಂದೇ ದಿನದಲ್ಲಿ 250ಕ್ಕೂ ಹೆಚ್ಚು ಪಾಸಿಟಿವ್‌ ಕೇಸ್‌

ಭಾರತದಲ್ಲಿ ಮತ್ತೆ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಳ! – ಒಂದೇ ದಿನದಲ್ಲಿ 250ಕ್ಕೂ ಹೆಚ್ಚು ಪಾಸಿಟಿವ್‌ ಕೇಸ್‌

ಎರಡು ವರ್ಷಗಳ ಕಾಲ ಇಡೀ ವಿಶ್ವವನ್ನು ತಲ್ಲಣಗೊಳಿಸಿದ್ದ ಕೊರೋನಾ ಮತ್ತೆ ಭಾರತಕ್ಕೆ ವಕ್ಕರಿಸಿದೆ. ಕಳೆದ ಕೆಲವು ದಿನಗಳಿಂದ ಭಾರತದಲ್ಲಿ ಕೊರೊನಾ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಗುರುವಾರ ಒಂದೇ ದಿನ ದೇಶಾದ್ಯಂತ 252 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಸಂಸತ್ ಭವನದಲ್ಲಿ ಸೆಕ್ಯೂರಿಟಿ ಸಿಸ್ಟಂಗೆ ಏನಾಗಿದೆ? – ಆರು ಮಂದಿಗೂ ಇರುವುದು ಒಂದೇ ಲಿಂಕ್..!

ಹೌದು, ದೇಶಾದ್ಯಂತ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಗುರುವಾರ ಒಂದೇ ದಿನ 252 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದೆ. ಈ ವರ್ಷ ಜೂನ್ 2 ರಿಂದೀಚೆಗೆ ಇದು ದಿನವೊಂದರಲ್ಲಿ ದಾಖಲಾದ ಗರಿಷ್ಟ ಪ್ರಮಾಣದ ಸೋಂಕು ಪ್ರಕರಣಗಳಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗುರುವಾರ ಪತ್ತೆಯಾದ ಪಾಸಿಟಿವ್‌ ಪ್ರಕರಣಗಳ ಸಂಖ್ಯೆಯೂ ಸೇರಿದಂತೆ ದೇಶದಲ್ಲಿ ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ 1,091 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ಅಂತೆಯೇ ದೇಶದ ಒಟ್ಟಾರೆ ಕೋವಿಡ್ ಪ್ರಕರಣಗಳ ಸಂಖ್ಯೆ 4.50 ಕೋಟಿ (4,50,03,593) ದಾಟಿದ್ದು, ಸಾವಿನ ಸಂಖ್ಯೆ 5,33,308 ಕ್ಕೆ ದಾಖಲಾಗಿದೆ ಎಂದು ದತ್ತಾಂಶಗಳಿಂದ ತಿಳಿದುಬಂದಿದೆ.

Shwetha M