ಹಠದಿಂದ ಮಾನಕಳ್ಕೊಂಡ ACC- ಸೆಂಡ್ ಆಫ್ ಕೊಟ್ಟು ಕೆಟ್ಟ ಕ್ರಾಂತಿ

ಹಠದಿಂದ ಮಾನಕಳ್ಕೊಂಡ ACC- ಸೆಂಡ್ ಆಫ್ ಕೊಟ್ಟು ಕೆಟ್ಟ ಕ್ರಾಂತಿ

ಕ್ರಿಕೆಟ್ ಲೋಕದ ಇಂಟ್ರೆಸ್ಟಿಂಗ್ ಸುದ್ದಿಗಳು

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಇಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ. ಮೊದಲ ಪಂದ್ಯ ಗೆದ್ದಿರುವ ಭಾರತ, ಇಂದಿನ ಪಂದ್ಯದಲ್ಲೂ ಗೆದ್ದು ಸರಣಿ ವಶಪಡಿಸಿಕೊಳ್ಳುವ ವಿಶ್ವಾಸದಲ್ಲಿದೆ. ಆರಂಭಿಕ ಜೋಡಿ ಹಾಗೂ ಮಧ್ಯಮ ಕ್ರಮಾಂಕದಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ.                                                     

ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯ ಗೆದ್ದ ಬೆನ್ನಲ್ಲೇ ಭಾರತ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ತಂಡದ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಗಾಯದ ಕಾರಣ ಸರಣಿಯ ಉಳಿದ ಪಂದ್ಯಗಳಿಂದ ಹೊರಬಿದ್ದಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ ನಾಲ್ಕು ಓವರ್ ಬೌಲ್ ಮಾಡಿದ ಬಳಿಕ ವರುಣ್‌ಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

ಸತತ ಅವಕಾಶಗಳು ಸಿಗುತ್ತಿದ್ದರೂ ದೊಡ್ಡ ಇನ್ನಿಂಗ್ಸ್ ಆಡಲು ವಿಫಲರಾಗುತ್ತಿರುವ ಸಂಜು ಸ್ಯಾಮ್ಸನ್‌ಗೆ ಎರಡನೇ ಪಂದ್ಯದಲ್ಲೂ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ. 2026ರ ಟಿ20 ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಂಜು, ಬಳಿಕ ಕೊನೆಯ ಐದು ಇನ್ನಿಂಗ್ಸ್‌ಗಳಲ್ಲಿ ಕೇವಲ 43 ರನ್ ಗಳಿಸಿದ್ದಾರೆ. ಹೀಗಾಗಿ ಇಂದಿನ ಪಂದ್ಯ ಅವರ ಪಾಲಿಗೆ ಮಹತ್ವದ್ದಾಗಿದೆ.

ಶ್ರೀಲಂಕಾ ವಿರುದ್ಧ ನಡೆದ ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ICC ನೀತಿ ಸಂಹಿತೆ ಉಲ್ಲಂಘಿಸಿದ ಭಾರತ ತಂಡದ ವೇಗಿ ಕ್ರಾಂತಿ ಗೌಡ್ ಅವರಿಗೆ ದಂಡ ವಿಧಿಸಲಾಗಿದೆ. ಪಂದ್ಯದ ಶುಲ್ಕದ ಶೇಕಡಾ 10ರಷ್ಟು ದಂಡದ ಜೊತೆಗೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ. ಲೆವೆಲ್-1 ಉಲ್ಲಂಘನೆಗೆ ಸಂಬಂಧಿಸಿದ ಆರ್ಟಿಕಲ್ 2.5 ಅಡಿಯಲ್ಲಿ ಕ್ರಾಂತಿ ಗೌಡ್ ತಪ್ಪಿತಸ್ಥರೆಂದು ಪರಿಗಣಿಸಲಾಗಿದೆ.

ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಕೇವಲ 32 ಎಸೆತಗಳಲ್ಲಿ 82 ರನ್ ಸಿಡಿಸಿ ಮಿಂಚಿದರು. ಈ ಇನ್ನಿಂಗ್ಸ್ ವೇಳೆ ಅವರು ಟಿ20 ಕ್ರಿಕೆಟ್‌ನಲ್ಲಿ 6,000 ರನ್‌ಗಳ ಮೈಲಿಗಲ್ಲು ತಲುಪಿದರು. ಕೇವಲ 3,420 ಎಸೆತಗಳಲ್ಲಿ 6 ಸಾವಿರ ರನ್ ಪೂರೈಸಿದ ಅಭಿಷೇಕ್, ಈ ಸಾಧನೆ ಮಾಡಿದ ವಿಶ್ವದ ಎರಡನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಹಾರ್ದಿಕ್ ಪಾಂಡ್ಯ ಅವರ ಗಾಯದ ಸಮಸ್ಯೆಗಳು ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಭಾರತ ತಂಡದಲ್ಲಿ ವೇಗದ ಬೌಲಿಂಗ್ ಆಲ್‌ರೌಂಡರ್ ಕೊರತೆ ಮತ್ತೆ ಚರ್ಚೆಗೆ ಬಂದಿದೆ. ಯುವ ಆಟಗಾರ ನಿತೀಶ್ ಕುಮಾರ್ ರೆಡ್ಡಿ ಈ ಸ್ಥಾನಕ್ಕೆ ಪ್ರಮುಖ ಆಯ್ಕೆಯಾಗಿ ಕಾಣಿಸಿಕೊಂಡಿದ್ದಾರೆ. ಮುಂದಿನ ಸರಣಿಗಳು ಮತ್ತು ಪ್ರಮುಖ ಟೂರ್ನಿಗಳ ದೃಷ್ಟಿಯಿಂದ ನಿತೀಶ್ ಅವರ ಪ್ರದರ್ಶನದ ಮೇಲೆ ಆಯ್ಕೆದಾರರು ಗಮನ ಹರಿಸುತ್ತಿದ್ದಾರೆ.

ಇದನ್ನೂ ಓದಿ: RCB ಬ್ಯಾಟಿಂಗ್ ಬೆಸ್ಟ್.. ಬೌಲಿಂಗ್ – ಜಿತೇಶ್ ಗೆ ಬ್ಯಾಕಪ್ ಕೀಪರ್ ಯಾರು?

ಮಹಿಳಾ ಟಿ20 ಏಷ್ಯಾಕಪ್ ಟ್ರೋಫಿ ವಿವಾದಕ್ಕೆ ಸಂಬಂಧಿಸಿದಂತೆ, ಪಂದ್ಯಕ್ಕೂ ಮೊದಲೇ BCCI ನೀಡಿದ್ದ ಸಲಹೆಯನ್ನು ACC ತಿರಸ್ಕರಿಸಿತ್ತು ಎಂಬ ಮಾಹಿತಿ ಹೊರಬಿದ್ದಿದೆ. ACC ಉಪಾಧ್ಯಕ್ಷ ಖಾಲಿದ್ ಸಾಹಬ್ ಅವರಿಂದ ಟ್ರೋಫಿ ಹಸ್ತಾಂತರಿಸುವಂತೆ BCCI ಮನವಿ ಮಾಡಿತ್ತು ಎನ್ನಲಾಗಿದೆ. ಆದರೆ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರೇ ಟ್ರೋಫಿ ಹಸ್ತಾಂತರಿಸಬೇಕು ಎಂಬ ನಿಲುವು ಹೊಂದಿದ್ದರು ಎಂದು ವರದಿಯಾಗಿದೆ.

ಟೀಂ ಇಂಡಿಯಾ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ ಬಳಿಕ ಮೈದಾನದಿಂದ ಹೊರಹೋದ ACC ಅಧ್ಯಕ್ಷ ಮೊಹ್ಸಿನ್ ನಖ್ವಿ ವಿರುದ್ಧ ಅಭಿಮಾನಿಗಳು ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ. ನಖ್ವಿ ಮೈದಾನದಿಂದ ಹೊರಹೋಗುವಾಗ ಕೆಲ ಅಭಿಮಾನಿಗಳು ‘ಟ್ರೋಫಿ ಚೋರ್’ ಎಂದು ಕೂಗಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಘಟನೆ ಇದೀಗ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಎಡ್ಜ್‌ಬಾಸ್ಟನ್ ಟೆಸ್ಟ್‌ನಲ್ಲಿ ನಿಧಾನಗತಿಯ ಓವರ್ ರೇಟ್ ಪಾಕಿಸ್ತಾನಕ್ಕೆ ದುಬಾರಿಯಾಗಿ ಪರಿಣಮಿಸಿದೆ. ಐಸಿಸಿ ತಂಡಕ್ಕೆ ಪಂದ್ಯ ಶುಲ್ಕದ 50% ನಷ್ಟು ದಂಡ ವಿಧಿಸಿದೆ ಮತ್ತು ಅವರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್   2025-27 ಅಂಕಗಳಿಂದ 11 ಅಂಕಗಳನ್ನು ಕಡಿತಗೊಳಿಸಿದೆ. ಐಸಿಸಿ ನಿಯಮಗಳ ಪ್ರಕಾರ, ನಿಗದಿತ ಸಮಯಕ್ಕಿಂತ ಕಡಿಮೆ ಓವರ್ ಆಡುವ ಪ್ರತಿ ಓವರ್‌ಗೆ ಆಟಗಾರರಿಗೆ ಪಂದ್ಯ ಶುಲ್ಕದ ಶೇಕಡಾ 5 ರಷ್ಟು ದಂಡ ವಿಧಿಸಲಾಗುತ್ತದೆ. ಆದರೆ, ಗರಿಷ್ಠ ಮಿತಿ ಶೇಕಡಾ 50 ಆಗಿದೆ. ಪಾಕಿಸ್ತಾನ 11 ಓವರ್‌ಗಳು ಕಡಿಮೆ ಇದ್ದ ಕಾರಣ ಅವರಿಗೆ ಗರಿಷ್ಠ ಶೇಕಡಾ 50 ರಷ್ಟು ದಂಡ ವಿಧಿಸಲಾಗಿದೆ.

ಸೆಪ್ಟೆಂಬರ್ 22ರಂದು ಜಪಾನ್‌ನ ಸಾನೋದಲ್ಲಿ ಭಾರತ ಮತ್ತು ಜಪಾನ್ ನಡುವೆ ಐತಿಹಾಸಿಕ ಟಿ20 ಪಂದ್ಯ ನಡೆಯಲಿದೆ. ICC ಪೂರ್ಣ ಸದಸ್ಯ ರಾಷ್ಟ್ರವಾಗಿರುವ ಭಾರತದ ವಿರುದ್ಧ ಜಪಾನ್ ಮೊದಲ ಬಾರಿಗೆ ಮುಖಾಮುಖಿಯಾಗಲಿದೆ. ಜಪಾನ್‌ನಲ್ಲಿ ಕ್ರಿಕೆಟ್‌ನ್ನು ಮತ್ತಷ್ಟು ಜನಪ್ರಿಯಗೊಳಿಸುವ ಪ್ರಯತ್ನದ ಭಾಗವಾಗಿ ಈ ಪಂದ್ಯಕ್ಕೆ ವಿಶೇಷ ಮಹತ್ವ ನೀಡಲಾಗಿದೆ.

Kishor KV

Leave a Reply

Your email address will not be published. Required fields are marked *