ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಸೊನ್ನೆಗೆ ಔಟ್

ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಸೊನ್ನೆಗೆ ಔಟ್

ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗಿದ್ದಾರೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ  ಬಲಗೈ ವೇಗಿ ಕ್ಸೇವಿಯರ್ ಬಾರ್ಟ್ಲೆಟ್ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆಗಿ ಹೊರ ನಡೆದರು.

ಇದನ್ನೂ ಓದಿ: ತ್ಯಾಗದ ಮೂಲಕ ಮನೆ ಮಂದಿ ಮನಸ್ಸು ಗೆದ್ದ ಸೂರಜ್‌! – ರಿಷಾ,  ರಘು ಸ್ವಾರ್ಥ.. ಮನೆ ಮಂದಿ ಆಕ್ರೋಶ!

ಇದಕ್ಕೂ ಮುನ್ನ ಪರ್ತ್​ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಮಿಚೆಲ್ ಸ್ಟಾರ್ಕ್​​ ಎಸೆತದಲ್ಲಿ ಶೂನ್ಯಕ್ಕೆ ಕ್ಯಾಚಿತ್ತು ನಿರ್ಗಮಿಸಿದ್ದರು. ಇದೀಗ ಮತ್ತೊಮ್ಮೆ ಸೊನ್ನೆ ಸುತ್ತುವ ಮೂಲಕ ನಿರಾಸೆ ಮೂಡಿಸಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಮೊದಲು ಬ್ಯಾಟ್ ಮಾಡುತ್ತಿರುವ ಟೀಮ್ ಇಂಡಿಯಾ ಶುಭ್​​ಮನ್ ಗಿಲ್ (9) ಹಾಗೂ ವಿರಾಟ್ ಕೊಹ್ಲಿ (0) ವಿಕೆಟ್ ಕಳೆದುಕೊಂಡಿದೆ. ರೋಹಿತ್ ಶರ್ಮಾ 73 ರನ್‌ಗಳಿಸಿ ಔಟ್ ಆಗಿದ್ದಾರೆ. 31 ಓವರ್​ಗಳ ಮುಕ್ತಾಯದ ವೇಳೆಗೆ ಭಾರತ ತಂಡವು 3 ವಿಕೆಟ್ ನಷ್ಟಕ್ಕೆ ಕೇವಲ  144  ರನ್ ಕಲೆಹಾಕಿದೆ.

Kishor KV