ಕೊಹ್ಲಿ ಎಂಟ್ರಿ.. ಜೈಸ್ವಾಲ್ ಔಟ್  – ಆಂಗ್ಲರನ್ನು ಮಣಿಸಲು ಹೇಗಿದೆ ಪ್ಲಾನ್?

ಕೊಹ್ಲಿ ಎಂಟ್ರಿ.. ಜೈಸ್ವಾಲ್ ಔಟ್  – ಆಂಗ್ಲರನ್ನು ಮಣಿಸಲು ಹೇಗಿದೆ ಪ್ಲಾನ್?

ನಾಗ್ಪುರದಲ್ಲಿ ನಡೆದಿದ್ದ ಮೊದಲ ಪಂದ್ಯವನ್ನು 4 ವಿಕೆಟ್​ಗಳಿಂದ ಗೆದ್ದು ಬೀಗಿದ್ದ ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆಯಲ್ಲಿದೆ. ಹೀಗಾಗಿ ಎರಡನೇ ಪಂದ್ಯವನ್ನು ರೋಹಿತ್ ಪಡೆ ಗೆದ್ದುಕೊಂಡರೆ, ಟಿ20 ಸರಣಿಯ ಜೊತೆಗೆ ಏಕದಿನ ಸರಣಿಯೂ ಕೈವಶವಾಗುತ್ತೆ. ಇತ್ತ ಇಂಗ್ಲೆಂಡ್ ಪಡೆ ಕೂಡ ಎರಡನೇ ಏಕದಿನ ಪಂದ್ಯವನ್ನು ಗೆದ್ದು ಏಕದಿನ ಸರಣಿಯನ್ನು 1-1 ರಿಂದ ಸಮಬಲಗೊಳಿಸೋಕೆ ಸರ್ವಸನ್ನದ್ಧವಾಗಿದೆ. ಹೀಗಾಗಿ ಕಟಕ್‌ನಲ್ಲಿ ನಡೆಯಲ್ಲಿರುವ ಎರಡನೇ ಏಕದಿನ ಪಂದ್ಯ ಉಭಯ ತಂಡಗಳಿಗೂ ತುಂಬಾನೇ ಇಂಪಾರ್ಟೆಂಟ್.

ಇದನ್ನೂ ಓದಿ : ಟೀಂ ಇಂಡಿಯಾಗೆ ಪಾಂಡ್ಯ ಕ್ಯಾಪ್ಟನ್ – ರೋಹಿತ್ ನಿವೃತ್ತಿ ಕನ್ಫರ್ಮ್ ಆಯ್ತಾ?

ಎರಡನೇ ಪಂದ್ಯಕ್ಕೆ ಪ್ಲೇಯಿಂಗ್ 11ನಲ್ಲಿ ಒಂದಷ್ಟು ಬದಲಾವಣೆ ಮಾಡಲಾಗ್ತಿದೆ. ಮೊಣಕಾಲು ನೋವಿನಿಂದಾಗಿ ಕೊನೆಯ ಕ್ಷಣದಲ್ಲಿ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ಕಟಕ್ ಏಕದಿನ ಪಂದ್ಯದಲ್ಲಿ ಮತ್ತೆ ತಂಡಕ್ಕೆ ಮರಳುವ ಸಾಧ್ಯತೆ ಇದೆ. ಕಂಪ್ಲೀಟ್ ಫಿಟ್ ಆಗಿದ್ದಾರೆ ಎಂದು ಬಿಸಿಸಿಐ ಮೂಲಗಳೂ ಮಾಹಿತಿ ನೀಡಿವೆ. ಹಾಗೇನಾದ್ರೂ ಕೊಹ್ಲಿ ಆಡುವ 11ರ ಬಳಗಕ್ಕೆ ಬಂದ್ರೆ ಮೊದಲ ಪಂದ್ಯದಲ್ಲಿ ಡೆಬ್ಯೂ ಮಾಡಿದ್ದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅವರನ್ನು ಕೈಬಿಡಲಾಗುತ್ತದೆ. ಇನ್ನು ಕಳೆದ ಪಂದ್ಯದಲ್ಲಿ ಕೊಹ್ಲಿ ಬದಲಿಗೆ ತಂಡಕ್ಕೆ ಬಂದ ಶ್ರೇಯಸ್ ಅಯ್ಯರ್ ಅತ್ಯುತ್ತಮ ಬ್ಯಾಟಿಂಗ್ ಮೂಲಕ ಅರ್ಧಶತಕ ಗಳಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಹಾಗಾಗಿ ಅವರಿಗೆ 4 ನೇ ಸ್ಥಾನದಲ್ಲಿ ಮುಂದುವರಿಸುವ ಸಾಧ್ಯತೆ ಇದೆ. ಅಯ್ಯರ್​ ತಂಡದಲ್ಲಿ ಉಳಿಸಿಕೊಳ್ಳುವುದು  ಕನ್ಫರ್ಮ್ ಇರೋದ್ರಿಂದ  ಕೊಹ್ಲಿಯನ್ನು ಆಡಿಸಲು ಜೈಸ್ವಾಲ್ ಅವರನ್ನು ಅನಿವಾರ್ಯವಾಗಿ ಕೈಬಿಡಬೇಕಾಗುತ್ತದೆ. ನಂತರ ರೋಹಿತ್ ಶರ್ಮಾ ಮತ್ತು ಶುಭ್​ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.

ಇನ್ನು ಏಕದಿನ ಸರಣಿಗೆ ಕೊನೇ ಮೂಮೆಂಟ್​ನಲ್ಲಿ ವರುಣ್ ಚಕ್ರವರ್ತಿಯವ್ರನ್ನ ಌಡ್ ಮಾಡಲಾಗಿತ್ತು. ಹೀಗಾಗಿ ಭಾನುವಾರದ ಪಂದ್ಯದಲ್ಲಿ ಬೌಲಿಂಗ್ ವಿಭಾಗದಲ್ಲಿ ವರುಣ್ ಚಕ್ರವರ್ತಿ ಅವರನ್ನು ಕಣಕ್ಕಿಳಿಸಿದ್ರೆ ಕುಲದೀಪ್ ಯಾದವ್ ಅವರನ್ನು ಹೊರಗಿಡುವ ಸಾಧ್ಯತೆ ಇದೆ. ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಿದರೆ ಅರ್ಶ್‌ದೀಪ್ ಸಿಂಗ್ ಅಂತಿಮ ತಂಡಕ್ಕೆ ಸ್ಥಾನ ಪಡೆಯಲಿದ್ದಾರೆ. ಆದರೆ ಬೌಲಿಂಗ್ ವಿಭಾಗದಲ್ಲಿ ಚೇಂಜಸ್ ಮಾಡೋದು ಡೌಟಿದೆ. ಹಾಗೇ 2025 ರ ಚಾಂಪಿಯನ್ಸ್ ಟ್ರೋಫಿಗಾಗಿ ಪ್ರಯೋಗ ಮಾಡಲು ಬಯಸಿದರೆ, ರಿಷಭ್ ಪಂತ್ ಅವರನ್ನು ತಂಡದಲ್ಲಿ ಆಡಿಸುವ ಸಾಧ್ಯತೆ ಇದೆ. ಹಾಗೇನಾದ್ರೂ ಪಂತ್​ಗೆ ಒಂದು ಚಾನ್ಸ್ ಕೊಟ್ರೆ ಕೆಎಲ್ ರಾಹುಲ್​ರನ್ನ ಹೊರಗಿಡಬಹುದು. ಆದ್ರೆ ರಾಹುಲ್ ಬದಲಾವಣೆ ಸಾಧ್ಯತೆ ತೀರಾ ಕಡಿಮೆ. ಸೋ ಅಂತಿಮವಾಗಿ ಪ್ಲೇಯಿಂಗ್ 11ನಲ್ಲಿ  ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ ಆಡುವ ಸಾಧ್ಯತೆ ಇದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ನಡೆಯಲಿರುವ ಕಟಕ್‌ನ ಬಾರಾಬತಿ ಕ್ರೀಡಾಂಗಣದ ಪಿಚ್​ನಲ್ಲಿ ಸ್ಪಿನ್ ಬೌಲರ್‌ಗಳು ಮೇಲುಗೈ ಸಾಧಿಸಲಿದ್ದಾರೆ. ಈ ಪಿಚ್​ನಲ್ಲಿ ಬ್ಯಾಟ್ಸ್‌ಮನ್‌ಗಳು ರನ್ ಗಳಿಸುವುದು ಸ್ವಲ್ಪ ಕಷ್ಟ. ಸ್ಪಿನ್ನರ್‌ಗಳ ಜೊತೆಗೆ, ವೇಗದ ಬೌಲರ್‌ಗಳು ಪ್ರಾಬಲ್ಯ ಮೆರೆಯೋ ಚಾನ್ಸಸ್ ಇದೆ.   ಬಾರಾಬತಿ ಕ್ರೀಡಾಂಗಣದಲ್ಲಿ ಇಲ್ಲಿಯವರೆಗೆ ಒಟ್ಟು 27 ಏಕದಿನ ಪಂದ್ಯಗಳನ್ನು ಆಡಲಾಗಿದೆ. ಇವುಗಳಲ್ಲಿ 11 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಗೆದ್ದಿದ್ದರೆ, 16 ಪಂದ್ಯಗಳಲ್ಲಿ ರನ್ ಬೆನ್ನಟ್ಟಿದ ತಂಡ ಗೆಲುವು ಸಾಧಿಸಿದೆ. ಅಂದರೆ ಈ ಮೈದಾನದಲ್ಲಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಬಹುದು. ಮೊದಲ ಇನ್ನಿಂಗ್ಸ್‌ನಲ್ಲಿ ಸರಾಸರಿ ಸ್ಕೋರ್ 229 ಆಗಿದ್ದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಸರಾಸರಿ ಸ್ಕೋರ್ 201 ಆಗಿದೆ. ಇದೇ ಮೈದಾನದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ 50 ಓವರ್‌ಗಳಲ್ಲಿ 381 ರನ್ ಕಲೆಹಾಕಿತ್ತು. ಇದು ಈ ಮೈದಾನದಲ್ಲಿ ದಾಖಲಾದ ಅತ್ಯಧಿಕ ಸ್ಕೋರ್ ಕೂಡ ಆಗಿದೆ. 2017 ರಲ್ಲಿ ಇಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಉಭಯ ತಂಡಗಳು ಕೊನೆಯ ಬಾರಿಗೆ ಮುಖಾಮುಖಿಯಾಗಿದ್ದವು, ಆ ಪಂದ್ಯದಲ್ಲಿ ಭಾರತ 15 ರನ್‌ಗಳಿಂದ ಜಯಗಳಿಸಿತ್ತು.

Shantha Kumari

Leave a Reply

Your email address will not be published. Required fields are marked *