ಸಾಲು ಸಾಲು ಸೋಲುಗಳಿಂದ ಕಂಗೆಟ್ಟ ಶ್ರೇಯಸ್ ಪಡೆ – ಟೀಂ ಇಂಡಿಯಾ ವಿರುದ್ಧ ಟಿ20 ಸರಣಿ ಗೆದ್ದ ಇಂಗ್ಲೆಂಡ್

ಶ್ರೇಯಸ್ ಅಯ್ಯರ್ ಪಡೆ ಟಿ20ಐನಲ್ಲಿ ಹೀನಾಯ ಪ್ರದರ್ಶನ ನೀಡುತ್ತಿದ್ದು, ಇಂಗ್ಲೆಂಡ್ ವಿರುದ್ಧದ 4ನೇ ಟಿ20ಐ ಪಂದ್ಯದಲ್ಲೂ ಕಳಪೆ ನೀಡಿದೆ. ಇಂಗ್ಲೆಂಡ್ ಐದು ಪಂದ್ಯಗಳ ಟಿ20 ಸರಣಿಯ 4ನೇ ಟಿ20 ಪಂದ್ಯದಲ್ಲಿ 9 ವಿಕೆಟ್‌ಗಳಿಂದ ಟೀಮ್ ಇಂಡಿಯಾವನ್ನು ಮಣಿಸಿ, ಸರಣಿಯಲ್ಲಿ 3-0 ಮುನ್ನಡೆ ಸಾಧಿಸಿದೆ. ಈ ಮೂಲಕ ಇಂಗ್ಲೆಂಡ್ ಇನ್ನು ಒಂದು ಪಂದ್ಯ ಬಾಕಿ ಇರುವಂತೆ ಸರಣಿಯನ್ನು ತನ್ನ ವಶಕ್ಕೆ ಮಾಡಿಕೊಂಡಿದೆ.
ಟೀಮ್ ಇಂಡಿಯಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರವನ್ನು ಮಾಡಿತು. ವೈಭವ್ ಸೂರ್ಯವಂಶಿ (15) ಹಾಗೂ ಅಭಿಷೇಕ್ ಶರ್ಮಾ (16) ಜೋಡಿ ಮೊದಲ ವಿಕೆಟ್‌ಗೆ 2.4 ಓವರ್‌ಗಳಲ್ಲಿ 23 ರನ್ ಸೇರಿಸಿತು. ಇಶಾನ್ ಕಿಶನ್ (4) ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ನಾಲ್ಕನೇ ವಿಕೆಟ್‌ಗೆ ಶಿವಂ ದುಬೆ ಹಾಗೂ ಶ್ರೇಯಸ್ ಅಯ್ಯರ್ ಜೋಡಿ 43 ಎಸೆತಗಳಲ್ಲಿ 53 ರನ್ ಸೇರಿಸಿತು. ಈ ಹಂತದಲ್ಲಿ ಶಿವಂ ದುಬೆ 22 ರನ್ ಬಾರಿಸಿ ಔಟ್ ಆದರು. ಉಳಿದ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ಎಡವಿದರು. ನಾಯಕ ಶ್ರೇಯಸ್ ಅಯ್ಯರ್ 49 ಎಸೆತಗಳಲ್ಲಿ 4 ಬೌಂಡರಿ, 5 ಸಿಕ್ಸರ್ ಸಹಾಯದಿಂದ ಅಜೇಯ 80 ರನ್ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಸಿದರು. ಅಂತಿಮವಾಗಿ ಭಾರತ, 20 ಓವರ್‌ಗಳಲ್ಲಿ 7 ವಿಕೆಟ್‌ಗೆ 158 ರನ್ ಸೇರಿಸಿತು.
ಇದನ್ನೂ ಓದಿ: ನಿಮ್ಮ ಮನೆಯ ದೇವರ ಕೋಣೆಯಲ್ಲಿ ಈ ವಸ್ತು ಇದ್ಯಾ? – ಈಗಲೇ ತೆಗೆದು ಬಿಡಿ
ಟೀಂ ಇಂಡಿಯಾ ನೀಡಿದ 159 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡದ ಆರಂಭ ಕಳಪೆಯಾಗಿತ್ತು. ಸ್ಫೋಟಕ ಆಟಗಾರ ಜೋಸ್ ಬಟ್ಲರ್ (8) ಒಂದು ಸಿಕ್ಸರ್ ಬಾರಿಸಿ ಔಟ್ ಆದರು. ಇವರ ವಿಕೆಟ್ ಪಡೆಯುವಲ್ಲಿ ಅರ್ಷದೀಪ್ ಸಿಂಗ್ ಸಫಲರಾದರು. 2.3 ಓವರ್‌ಗಳಲ್ಲಿ ಇಂಗ್ಲೆಂಡ್ ಮೊದಲ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.
ಇಂಗ್ಲೆಂಡ್ ಪರ ನಾಯಕ ಫಿಲ್ ಸಾಲ್ಟ್ ಭರ್ಜರಿ ಬ್ಯಾಟಿಂಗ್ ನಡೆಸಿದರು. ಇವರು 42 ಎಸೆತಗಳಲ್ಲಿ 9 ಬೌಂಡರಿ, 1 ಸಿಕ್ಸರ್ ಸಹಾಯದಿಂದ ಅಜೇಯ 59 ರನ್ ಸಿಡಿಸಿ ಜಯದಲ್ಲಿ ಮಿಂಚಿದರು. ನಾಯಕ ಹ್ಯಾರಿ ಬ್ರೂಕ್ 8 ಬೌಂಡರಿ, 4 ಸಿಕ್ಸರ್ ಸಹಿತ ಅಜೇಯ 79 ರನ್ ಸಿಡಿಸಿದರು. ಅಂತಿಮವಾಗಿ ಇಂಗ್ಲೆಂಡ್ 13.5 ಓವರ್‌ಗಳಲ್ಲಿ 1 ವಿಕೆಟ್‌ಗೆ 159 ರನ್ ಸೇರಿಸಿತು. ಟೀಂ ಇಂಡಿಯಾ ಟಿ20ಐನಲ್ಲಿ ಸಾಲು ಸಾಲು ಸೋಲುಗಳನ್ನ ಕಾಣುತ್ತಿದ್ದು, ಶ್ರೇಯಸ್ ಅಯ್ಯರ್ ಕ್ಯಾಪ್ಟನ್ ಆದ ಮೇಲೆ ಒಂದೇ ಒಂದು ಪಂದ್ಯವನ್ನ ಗೆದ್ದಿಲ್ಲ.

ನೋಡಿರಿ

