ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಅರ್ಧಶತಕ – 2ನೇ T20I ನ್ಯೂಜಿಲೆಂಡ್ ವಿರುದ್ಧ ಗೆದ್ದ ಭಾರತ

ಎರಡನೇ ಟಿ20ಐ ಪಂದ್ಯದಲ್ಲಿಯೂ ಭಾರತ ನ್ಯೂಜಿಲೆಂಡ್ ವಿರುದ್ಧ 7 ವಿಕೆಟ್ಗಳ ಭರ್ಜರಿ ಗೆಲುವು ಪಡೆದಿದೆ. ಈ ಮೂಲಕ ಎರಡು ಪಂದ್ಯಗಳ ಅಂತ್ಯಕ್ಕೆ ಟೀಮ್ ಇಂಡಿಯಾ ಟಿ20ಐ ಸರಣಿಯಲ್ಲಿ 2-0 ಮುನ್ನಡೆಯನ್ನು ಪಡೆದಿದೆ. ಇನ್ನು 200ಕ್ಕೂ ಅಧಿಕ ರನ್ಗಳ ಗುರಿಯನ್ನು ನೀಡಿದ್ದರ ಹೊರತಾಗಿಯೂ ಬೌಲಿಂಗ್ ವೈಫಲ್ಯದಿಂದ ಕಿವೀಸ್ ತಂಡ, ಎರಡನೇ ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಈ ಪಂದ್ಯದಲ್ಲಿ ಕೇವಲ 32 ಎಸೆತಗಳಲ್ಲಿ 76 ರನ್ ಸಿಡಿಸಿ ಭಾರತದ ಗೆಲುವಿಗೆ ನೆರವು ನೀಡಿದ ಇಶಾನ್ ಕಿಶನ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಇದನ್ನೂ ಓದಿ: RCBಗೆ ಡೆಡ್ ಲೈನ್ ಕೊಟ್ಟ BCCI – ಚಿನ್ನಸ್ವಾಮಿ ಪಂದ್ಯಗಳಿಗೂ ಕಂಡೀಷನ್ಸ್!
ಸಹೀದ್ ವೀರ್ ನಾರಾಯಣ್ ಸಿಂಗ್ ಇಂಟರ್ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ನೀಡಿದ್ದ 209 ರನ್ಗಳ ಗುರಿಯನ್ನು ಚೇಸ್ ಮಾಡಿದ ಭಾರತ ತಂಡ, ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಅವರ ಅರ್ಧಶತಕಗಳ ಬಲದಿಂದ ಕೇವಲ 15.2 ಓವರ್ಗಳಿಗೆ 3 ವಿಕೆಟ್ ಕಳೆದುಕೊಂಡು 209 ರನ್ ಗಳಿಸಿ ಗೆಲುವಿನ ದಡ ಸೇರಿತು. ಆ ಮೂಲಕ ಈ ಸರಣಿಯಲ್ಲಿ ಆತಿಥೇಯರು ಸತತ ಎರಡನೇ ಗೆಲುವು ದಾಖಲಿಸಿದರು.
ಚೇಸಿಂಗ್ ಆರಂಭಿಸಿದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡದ ಮೊತ್ತ 6 ರನ್ ಇರುವಾಗಲೇ ಭಾರತ ತಂಡ, ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಅವರ ವಿಕೆಟ್ಗಳನ್ನು ಕಳೆದುಕೊಂಡಿತು. ಆದರೆ, ಮೂರನೇ ವಿಕೆಟ್ಗೆ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಸ್ಪೋಟಕ ಬ್ಯಾಟಿಂಗ್ ಮೂಲಕ ಕೇವಲ 48 ಎಸೆತಗಳಲ್ಲಿ 122 ರನ್ಗಳ ಜೊತೆಯಾಟವನ್ನು ಆಡಿ ತಂಡವನ್ನು ಗೆಲುವಿನ ಸನಿಹಕೆ ತಂದಿತು. ಕಳೆದ ಪಂದ್ಯದಲ್ಲಿ ವಿಫಲರಾಗಿದ್ದ ಇಶಾನ್ ಕಿಶನ್ ಈ ಪಂದ್ಯದಲ್ಲಿ ಕೇವಲ 32 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 11 ಬೌಂಡರಿಗಳೊಂದಿಗೆ 76 ರನ್ಗಳನ್ನು ಚಚ್ಚಿದರು.

ನೋಡಿರಿ

