ಜಿಂಬಾಬ್ವೆ ಪ್ರವಾಸಕ್ಕೂ ಸೂರ್ಯವಂಶಿಗೆ ಚಾನ್ಸ್ – ಸಂಜು ಸ್ಯಾಮ್ಸನ್‌ಗೆ BCCI ಬಿಗ್ ಶಾಕ್

ಜಿಂಬಾಬ್ವೆ ಪ್ರವಾಸಕ್ಕೂ ಸೂರ್ಯವಂಶಿಗೆ ಚಾನ್ಸ್ –  ಸಂಜು ಸ್ಯಾಮ್ಸನ್‌ಗೆ BCCI ಬಿಗ್ ಶಾಕ್

ಬಿಸಿಸಿಐ  ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ 15 ಆಟಗಾರರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಇದರಲ್ಲೂ 15 ವರ್ಷದ ವೈಭವ್ ಸೂರ್ಯವಂಶಿ ಅವರು ಸ್ಥಾನ ಪಡೆದಿದ್ದು, ಸಂಜು ಸ್ಯಾಮ್ಸನ್ ಅವರನ್ನು ಕೈಬಿಡಲಾಗಿದೆ.   ಜುಲೈ 23ರಿಂದ ಆರಂಭ ಆಗಲಿರುವ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಸೋಮವಾರ ಈ ತಂಡವನ್ನು ಅಧಿಕೃತವಾಗಿ ಪ್ರಕಟಿಸಿದ್ದು, ಹಲವು ಅಚ್ಚರಿಯ ನಿರ್ಧಾರಗಳನ್ನು ತೆಗೆದುಕೊಂಡಿದೆ.

15 ವರ್ಷದ ಬಾಲಕ ವೈಭವ್ ಸೂರ್ಯವಂಶಿ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರೆ, ಅನುಭವಿ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರಿಗೆ ಆಯ್ಕೆ ಸಮಿತಿ ಶಾಕ್ ನೀಡಿದೆ.  ಇಂಗ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ತಮ್ಮ ಚೊಚ್ಚಲ ಪಂದ್ಯದಲ್ಲಿ ಬೃಹತ್ ಮೊತ್ತ ಕಲೆಹಾಕಲು ವೈಭವ್ ವಿಫಲರಾಗಿದ್ದು, ಆದರೂ ಕೇವಲ 15ನೇ ವಯಸ್ಸಿಗೆ ಭಾರತ ತಂಡವನ್ನು ಪ್ರತಿನಿಧಿಸಿ ಅತಿ ಕಿರಿಯ ಆಟಗಾರ ಎಂಬ ಐತಿಹಾಸಿಕ ದಾಖಲೆ ಬರೆದಿದ್ದಾರೆ. ಇವರ ಈ ಅಸಾಧಾರಣ ಸಾಧನೆ ಇಡೀ ಕ್ರಿಕೆಟ್ ಜಗತ್ತನ್ನೇ ಅಚ್ಚರಿಗೊಳಿಸಿದೆ. ಈ ಬಾಲಕನಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬಿಸಿಸಿಐ ಇವರನ್ನು ಜಿಂಬಾಬ್ವೆ ಪ್ರವಾಸಕ್ಕೂ ಆಯ್ಕೆ ಮಾಡಿದೆ .

ಇದನ್ನೂ ಓದಿ:4 IPL ಟೀಂ ನಾಯಕರಿಗೆ ಕೊಕ್ – DCಗೆ ರಾಹುಲ್.. KKRಗೆ ಹಾರ್ದಿಕ್?

ಸಂಜು ಸ್ಯಾಮ್ಸನ್‌ಗೆ  ಅದೃಷ್ಟ ಕೈ ಕೊಟ್ಟಿದೆ. ಸಂಜು ಸ್ಯಾಮ್ಸನ್ ಅವರನ್ನು ಜಿಂಬಾಬ್ವೆ ಸರಣಿಯಿಂದ ಸಂಪೂರ್ಣವಾಗಿ ಹೊರಗಿಡಲಾಗಿದೆ. ಇಂಗ್ಲೆಂಡ್ ವಿರುದ್ಧದ ಪ್ರಸ್ತುತ ಟಿ20 ಸರಣಿಯಲ್ಲೂ ಯುವ ಆಟಗಾರ ವೈಭವ್‌ಗೆ ಅವಕಾಶ ನೀಡುವ ಸಲುವಾಗಿ ಸಂಜು ಅವರನ್ನು ಪ್ಲೇಯಿಂಗ್ 11ನಿಂದ ಕೈಬಿಡಲಾಗಿತ್ತು. ಈಗ ಜಿಂಬಾಬ್ವೆ ಪ್ರವಾಸದ 15ರ ಬಳಗದಲ್ಲೂ ಅವರ ಹೆಸರಿಲ್ಲದಿರುವುದು ಅಭಿಮಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿದೆ.

ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಯಾರಿಗೆಲ್ಲಾ ಚಾನ್ಸ್‌?

ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್). ಶಿವಂ ದುಬೆ, ಸೂರ್ಯಾಂಶ್ ಶೆಡ್ಗೆ, ರಿಂಕು ಸಿಂಗ್, ಹರ್ಷ್ ದುಬೆ, ವರುಣ್ ಚಕ್ರವ್ರತಿ, ಪ್ರಿನ್ಸ್‌ ಯಾದವ್,‌ ಯಶ್ ಠಾಕೂರ್, ಅಶೋಕ್ ಶರ್ಮಾ, ಮಯಂಕ್ ಯಾದವ್, ಪ್ರಭ್‌ಸಿಮ್ರನ್ ಸಿಂಗ್.

Kishor KV

Leave a Reply

Your email address will not be published. Required fields are marked *