ವಿಜಯಲಕ್ಷ್ಮೀಗೆ ಅಶ್ಲೀಲ ಕಮೆಂಟ್ ಕೇಸ್! – ಪೊಲೀಸರ ತನಿಖೆಗೆ ನಿರಾಸಕ್ತಿ ತೋರಿದ ದಚ್ಚು ಪತ್ನಿ!

ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಬೆನ್ನಲ್ಲೇ ಪೊಲೀಸರು ಕ್ರಮ ಕೈಕೊಂಡಿದ್ದಾರೆ. ಪ್ರಕರಣದ ಬಗ್ಗೆ ಪೊಲೀಸರು ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆದ್ರೆ ಈ ಪ್ರಕರಣದ ತನಿಖೆಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಿರಾಸಕ್ತಿ ತೋರಿಸುತ್ತಿದ್ದಾರೆ ಎಂದು ಹೇಳಲಾಗ್ತಿದೆ.
ಇದನ್ನೂ ಓದಿ: ಸೆಪ್ಟೆಂಬರ್ 22ರಿಂದ ನೂತನ ಜಿಎಸ್ಟಿ ಜಾರಿ! – ಯಾವ ವಸ್ತುಗಳ ಬೆಲೆ ಏರಿಕೆ?
ವಿಜಯಲಕ್ಷ್ಮಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಾಮೆಂಟ್ ಮಾಡಿರುವ ಪ್ರಕರಣದ ಬಗ್ಗೆ ಪೊಲೀಸರು ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದಾರೆ. ಪ್ರಕಣದ ತನಿಖೆಯನ್ನ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ಪೊಲೀಸರು ಚುರುಕುಗೊಳಿಸಿದ್ದಾರೆ. ಈ ಸಂಬಂಧ ವಿಜಯಲಕ್ಷ್ಮಿ ಅವರ ಹೇಳಿಕೆ ಪಡೆದು ನಂತರ ಅಶ್ಲೀಲ ಕಮೆಂಟ್ ಮಾಡಿದವರ ಬಗ್ಗೆ ಕಾನೂನು ಕ್ರಮ ಜರಗಿಸುವ ಪ್ಲಾನ್ ನಲ್ಲಿದ್ದಾರೆ. ಹೀಗಾಗಿ ಪ್ರಕರಣದ ಬಗ್ಗೆ ಸ್ಪಷ್ಟನೆ ಕೊಡುವಂತೆ ವಿಜಯ ಲಕ್ಷ್ಮೀ ಪೊಲೀಸರು ನೋಟಿಸ್ ಕೊಟ್ಟಿದ್ದಾರೆ. ಆದರೆ ಪ್ರಕರಣದ ಬಗ್ಗೆ ವಿಜಯಲಕ್ಷ್ಮಿ ಅವರಿಂದಲೇ ಸರಿಯಾದ ಸಹಕಾರ ಪೊಲೀಸರಿಗೆ ಸಿಗುತ್ತಿಲ್ಲ ಎಂದು ತಿಳಿದು ಬಂದಿದೆ.
ಈಗ ನನ್ನ ಮುಂದೆ ಇರುವ ದೊಡ್ಡ ಸಮಸ್ಯೆಯನ್ನ ಬಗೆಹರಿಸಿಕೊಂಡರೆ ಸಾಕಾಗಿದೆ. ಅದರ ಬಗ್ಗೆ ನಾನು ಹೆಚ್ಚು ತಲೆಕೆಡಿಸಿಕೊಂಡಿದ್ದೇನೆ. ಬೇರೆ ಯಾವುದಕ್ಕೂ ಕೂಡ ರಿಸ್ಕ್ ತೆಗೆದುಕೊಂಡು ಓಡಾಟ ಮಾಡುವುದಕ್ಕೆ ಆಗುವುದಿಲ್ಲ ಎಂಬ ಅರ್ಥದಲ್ಲಿ ಪೊಲೀಸರ ನೋಟಿಸಿಗೆ ಮೂರನೇ ವ್ಯಕ್ತಿಯಿಂದ ಮೌಖಿಕ ಉತ್ತರವನ್ನ ವಿಜಯಲಕ್ಷ್ಮಿ ಕೊಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಸೆನ್ ಠಾಣೆಯ ಸಹಕಾರದೊಂದಿಗೆ ಪೊಲೀಸರು ಅಶ್ಲೀಲವಾಗಿ ಕಮೆಂಟ್ ಮಾಡಿದ ಖಾತೆಗಳನ್ನು ಪತ್ತೆ ಮಾಡಲು ಆರಂಭಿಸಿದ್ದಾರೆ.

ನೋಡಿರಿ

