ಮೂರೇ ದಿನದಲ್ಲೇ ಗೆದ್ದ ಭಾರತ – ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ ಮತ್ತು 300 ರನ್‌ಗಳ ಜಯ

ಮೂರೇ ದಿನದಲ್ಲೇ ಗೆದ್ದ ಭಾರತ –  ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ ಮತ್ತು 300 ರನ್‌ಗಳ ಜಯ

ನ್ಯೂ ಚಂಡೀಗಢದ ಮುಲ್ಲನ್‌ಪುರದಲ್ಲಿ ನಡೆದ ಭಾರತ vs ಅಫ್ಘಾನಿಸ್ತಾನ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಮೂರೇ ದಿನದೊಳಗೆ ಭಾರತ ಭರ್ಜರಿ ಇನ್ನಿಂಗ್ಸ್ ಜಯ ಗಳಿಸಿದೆ.

ಇದನ್ನೂ ಓದಿ:ಅಫ್ಘಾನ್ಗೆ ಭಾರತ ಫಾಲೋಆನ್ ಅಸ್ತ್ರ – ಡೆಬ್ಯೂ ಮ್ಯಾಚ್ನಲ್ಲೇ ಸುತಾರ್ 6 ವಿಕೆಟ್

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯದಲ್ಲಿ ಭಾರತದ ಗೆದ್ದು ಬೀಗಿದೆ.  ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ 564 ರನ್ ಗಳಿಸಿತು. ಅಫ್ಘಾನಿಸ್ತಾನ ತಂಡವು ಎರಡೂ ಇನ್ನಿಂಗ್ಸ್‌ಗಳಲ್ಲಿ ಭಾರತದ ಮುನ್ನಡೆ ಸಾಧಿಸಿದೆ. ಇಲ್ಲಿ ಗಿಲ್ ನಾಯಕತ್ವದ ಭಾರತೀಯ ಪಡೆ ನಿರೀಕ್ಷಿಸಿದಂತೆ ಏಕಪಕ್ಷೀಯ ಗೆಲುವು ಸಾಧಿಸಿದೆ.

564 ರನ್​ಗಳಿಸಿ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಇದಾದ ಬಳಿಕ ಬ್ಯಾಟಿಂಗ್‌ ಆರಂಭಿಸಿದ ಅಫ್ಘಾನಿಸ್ತಾನ 152 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿತು. ಹೀಗಾಗಿ ಮೊದಲ ಇನ್ನಿಂಗ್ಸ್​ನಲ್ಲಿ 412 ರನ್​ಗಳ ಮುನ್ನಡೆ ಸಾಧಿಸಿದ್ದ ಭಾರತ ಫಾಲೋ ಆನ್ ಹೇರಿತು. ಮತ್ತೆ ಬ್ಯಾಟಿಂಗ್‌ಗೆ ಬಂದ ಅಫ್ಘಾನ್, ಕುಲ್ದೀಪ್ ಯಾದವ್ ಹಾಗೂ ವಾಷಿಂಗ್ಟನ್ ಸುಂದರ್ ಬೌಲಿಂಗ್ ದಾಳಿಗೆ ತತ್ತರಿಸಿತು. ಕುಲ್ದೀಪ್ ಯಾದವ್ ಮೂರು ವಿಕೆಟ್ ಪಡೆದ್ರೆ, ವಾಷಿಂಗ್ಟನ್ ಸುಂದರ್ ನಾಲ್ಕು ವಿಕೆಟ್ ಪಡೆದು ಮಿಂಚಿದ್ರು. ಮಾನವ್ ಸುತಾರ್ ಹಾಗೂ ಸಿರಾಜ್ ತಲಾ ಒಂದು ವಿಕೆಟ್ ಪಡೆಯುವ ಮೂಲಕ ಅಫ್ಘಾನ್ ಎರಡನೇ ಇನ್ನಿಂಗ್ಸ್‌ನಲ್ಲೂ ಸರ್ವಪತನ ಕಂಡಿದೆ.

Sulekha