ಭಾರತ-ಚೀನಾ ಗಡಿ ಸಂಘರ್ಷ – ಅಮೆರಿಕದ ಆಫರ್ ತಿರಸ್ಕರಿಸಿದ ಭಾರತ

ಭಾರತ-ಚೀನಾ ಗಡಿ ಸಂಘರ್ಷವನ್ನು ಭೀಕರ ಘರ್ಷಣೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಣ್ಣಿಸಿದ್ದು, ಸಹಾಯ ಮಾಡುವ ಇಚ್ಛೆಯನ್ನು ಚೀನಾದೊಂದಿಗಿನ ಗಡಿ ಉದ್ವಿಗ್ನ ಸಮಸ್ಯೆಗೆ ಮಧ್ಯಸ್ಥಿಕೆ ವಹಿಸುವ ಅವರ ಪ್ರಸ್ತಾಪವನ್ನು ಭಾರತ ತಿರಸ್ಕರಿಸಿದೆ.
ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಭಾರತದ ನಿಲುವನ್ನು ಪ್ರಧಾನಿ ಮೋದಿಯವರ ಅಮೆರಿಕ ಭೇಟಿ ಸಂದರ್ಭದಲ್ಲಿ ಪುನರುಚ್ಛರಿಸಿದರು. ಅವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಯ ನಂತರ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ತನ್ನ ನೆರೆಹೊರೆ ದೇಶಗಳೊಂದಿಗೆ ಸಮಸ್ಯೆಗಳನ್ನು ಪರಿಹರಿಸಲು ದೇಶವು ಯಾವಾಗಲೂ ದ್ವಿಪಕ್ಷೀಯ ಮಾತುಕತೆಯಲ್ಲಿ ತೊಡಗಿಸಿಕೊಳ್ಳುತ್ತದೆ. ಚೀನಾದ ವಿಷಯದಲ್ಲಿ ಕೂಡ ಇದೇ ರೀತಿಯ ನಿಲುವನ್ನು ಭಾರತ ಹೊಂದಿದೆ ಎಂದಿದ್ದಾರೆ.
ಗಡಿ ಸಮಸ್ಯೆ ನಿಭಾಯಿಸಲು ನಾವು ಯಾವಾಗಲೂ ದ್ವಿಪಕ್ಷೀಯ ವಿಧಾನವನ್ನು ಅಳವಡಿಸಿಕೊಂಡಿದ್ದೇವೆ. ಭಾರತ ಚೀನಾ ವಿಷಯದಲ್ಲಿ ಕೂಡ ಅದನ್ನು ಪಾಲಿಸುತ್ತದೆ. ನಾವು ಅವರೊಂದಿಗೆ ಹೊಂದಿರುವ ಯಾವುದೇ ಸಮಸ್ಯೆಗಳನ್ನು ದ್ವಿಪಕ್ಷೀಯ ಮಟ್ಟದಲ್ಲಿ ಚರ್ಚಿಸುತ್ತಿದ್ದೇವೆ ಎಂದು ಹೇಳಿದ್ದಾರೆ.