ಡಚ್ಚರ ವಿರುದ್ಧ ಶಿವತಾಂಡವ – ಸತತ ನಾಲ್ಕು ಪಂದ್ಯಗಳನ್ನು ಗೆದ್ದು ಬೀಗಿದ ಭಾರತ
ನೆದರ್ಲ್ಯಾಂಡ್ಸ್ ವಿರುದ್ಧ ಭಾರತಕ್ಕೆ 17 ರನ್ಗಳ ಜಯ

ಟಿ20 ವಿಶ್ವಕಪ್ನಲ್ಲಿ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ಡಚ್ಚರ ವಿರುದ್ಧ ಗೆಲುವು ಸಾಧಿಸಿದೆ. ಟೀಮ್ ಇಂಡಿಯಾ ನೆದರ್ಲ್ಯಾಂಡ್ಸ್ ವಿರುದ್ಧ ಗೆಲುವು ಸಾಧಿಸಿ ಅಜೇಯವಾಗಿ ಸೂಪರ್ 8 ಪ್ರವೇಶಿಸಿದೆ.
ಇದನ್ನೂ ಓದಿ:ಭಾರತಕ್ಕೆ ಸೂಪರ್-8 ಸವಾಲ್ – SA, ZIM, WIನಲ್ಲಿ ಯಾರು ಡೇಂಜರ್?
ಗುಂಪಿನ ಕೊನೆಯ ಲೀಗ್ ಪಂದ್ಯ ಗೆಲ್ಲುವುದರ ಮೂಲಕ ಟೀಮ್ ಇಂಡಿಯಾ ತನ್ನ ಎಲ್ಲಾ 4 ಪಂದ್ಯಗಳನ್ನ ಗೆದ್ದಂತಾಗಿದೆ. ಅತ್ತ ನೆದರ್ಲ್ಯಾಂಡ್ಸ್ 4 ಪಂದ್ಯಗಳಲ್ಲಿ ಕೇವಲ 1 ಜಯ ಸಾಧಿಸಿ ಟೂರ್ನಮೆಂಟ್ನಿಂದ ಹೊರಬಿದ್ದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ ಆರಂಭಿಕರಾಗಿ ಕಣಕ್ಕಿಳಿದ ಟೀಮ್ ಇಂಡಿಯಾ ಯಂಗ್ ಗನ್ ಅಭಿಷೇಕ್ ಶರ್ಮಾ ಮತ್ತೊಮ್ಮೆ ಡಕೌಟ್ ಆದರು. ಸತತ ಮೂರನೇ ಪಂದ್ಯದಲ್ಲೂ ಸೊನ್ನೆ ಸುತ್ತಿದ ಅಭಿಷೇಕ್ ಶರ್ಮಾ ನಿರಾಶೆಯಲ್ಲಿ ಮರಳಿದರು. ಶಿವಂ ದುಬೆ 31 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು 6 ಸಿಕ್ಸರ್ ಗಳ ಸಹಿತ 66 ರನ್ ಗಳಿಸಿದರು. ಇವರಿಗೆ ಸಾಥ್ ನೀಡಿದ ತಿಲಕ್ ವರ್ಮಾ 27 ಎಸೆತಗಳಲ್ಲಿ 31 ರನ್ ಗಳಿಸಿದರು. ನಾಯಕ ಸೂರ್ಯಕುಮಾರ್ ಯಾದವ್ 28 ಎಸೆತಗಳಲ್ಲಿ 34 ರನ್ ಹೊಡೆದರು. ಹಾರ್ದಿಕ್ ಪಾಂಡ್ಯ 21 ಎಸೆತಗಳಲ್ಲಿ 30 ರನ್ ಗಳಿಸಿ 193 ರನ್ಗಳ ಸವಾಲಿನ ಮೊತ್ತ ದಾಖಲಿಸಲು ನೆರವಾದರು. ಇಶಾನ್ ಕಿಶನ್ 7 ಎಸೆತಗಳಲ್ಲಿ 18 ರನ್ ಗಳಿಗೆ ಔಟ್ ಆದರು. 6 ವಿಕೆಟ್ ಕಳೆದುಕೊಂಡು ನಷ್ಟಕ್ಕೆ 193 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ನೆದರ್ಲ್ಯಾಂಡ್ಸ್ 7 ವಿಕೆಟ್ ಕಳೆದುಕೊಂಡು 176 ರನ್ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಆರೆಂಜ್ ಆರ್ಮಿ ಟೀಮ್ ಇಂಡಿಯಾಕ್ಕೆ ಶರಣಾಯಿತು.
ಭಾರತದ ಪರ ವರುಣ್ ಚಕ್ರವರ್ತಿ 3 ಓವರ್ಗಳಲ್ಲಿ 13 ರನ್ ನೀಡಿ 3 ವಿಕೆಟ್ ಪಡೆದರೆ, ದುಬೆ 3 ಓವರ್ಗಳಲ್ಲಿ 35 ರನ್ ನೀಡಿ 2 ವಿಕೆಟ್ ಪಡೆದರು. ಹಾರ್ದಿಕ್ ಪಾಂಡ್ಯ ಹಾಗೂ ಬುಮ್ರಾ ತಲಾ 1 ವಿಕೆಟ್ ಪಡೆದರು.

ನೋಡಿರಿ

