ದೇಶದಲ್ಲಿ ಹೆಚ್ಚಾಯ್ತು ಕೊರೊನಾ ಭೀತಿ – ಒಂದೇ ದಿನ 10 ಸಾವಿರ ಗಡಿದಾಟಿದ ಕೊವಿಡ್ ಕೇಸ್

ದೇಶದಲ್ಲಿ ಹೆಚ್ಚಾಯ್ತು ಕೊರೊನಾ ಭೀತಿ – ಒಂದೇ ದಿನ 10 ಸಾವಿರ ಗಡಿದಾಟಿದ ಕೊವಿಡ್ ಕೇಸ್

ನವದೆಹಲಿ: ದೇಶದಲ್ಲಿ ದಿನೇ ದಿನೇ ಕೊರೊನಾ ಪಾಸಿಟಿವ್ ಕೇಸ್ ಹೆಚ್ಚಾಗುತ್ತಿದೆ. ಮತ್ತೆ ಲಾಕ್  ಡೌನ್ ಆಗುತ್ತಾ ಅನ್ನೋ ಭೀತಿ ಜನರಲ್ಲಿ ಉಂಟಾಗಿದೆ. ಇದೀ ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 10,158 ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಈ ಮೂಲಕ ಕಳೆದ 8 ತಿಂಗಳಲ್ಲಿ ಇದೇ ಮೊದಲ ಬಾರಿಗೆ ದಿನವೊಂದರಲ್ಲಿ ಸೋಂಕು ಪ್ರಕರಣಗಳು ಅಧಿಕ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ಇದನ್ನೂ ಓದಿ: ಕೋವಿಡ್ ಹೆಚ್ಚಳದ ನಡುವೆ ಮತ್ತೊಂದು ಕಂಟಕ – ವಿದೇಶದಿಂದ ಬಂದವರಿಗೆ ಹಳದಿ ಜ್ವರದ ಆತಂಕ

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಸದ್ಯ ದೇಶದಲ್ಲಿ 44,998 ಸಕ್ರಿಯ ಪ್ರಕರಣಗಳಿದ್ದು, ಬುಧವಾರ 7,830 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು. ದೈನಂದಿನ ಪಾಸಿಟಿವಿಟಿ ದರ ಶೇ 4.42ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 4.02ರಷ್ಟಿದೆ. ಇದೇ ವೇಳೆ ರಾಷ್ಟ್ರೀಯ ಕೊವಿಡ್ ಚೇತರಿಕೆ ದರ ಶೇ 98.71ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದ್ದರೆ, ದೇಶದಾದ್ಯಂತ ಈವರೆಗೆ 4,42,10,127 ಮಂದಿ ಕೊವಿಡ್‌ನಿಂದ ಗುಣಮುಖರಾಗಿದ್ದಾರೆ. ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.66 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

suddiyaana