ದೇಶದಲ್ಲಿ ಹೆಚ್ಚಾಯ್ತು ಕೊರೊನಾ ಕೇಸ್ – 60 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣ

ದೇಶದಲ್ಲಿ ಹೆಚ್ಚಾಯ್ತು ಕೊರೊನಾ ಕೇಸ್ – 60 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣ

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ವೇಗವಾಗಿ ಹರಡುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 9,111 ಹೊಸ ಪಾಸಿಟಿವ್ ಕೇಸ್ ವರದಿಯಾಗಿದೆ ಅಂತಾ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇದನ್ನೂ ಓದಿ: ಕೊಡಗಿನಲ್ಲಿ ಮದುವೆ ಸಮಾರಂಭಗಳಲ್ಲಿ ಓಪನ್ ಬಾರ್‌ಗೆ ಚುನಾವಣಾ ಆಯೋಗ ಗ್ರೀನ್ ಸಿಗ್ನಲ್

ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, ಭಾನುವಾರ ಒಂದೇ ದಿನ 10 ಸಾವಿರ ಕೊವಿಡ್ ಕೇಸ್ ವರದಿಯಾಗಿದ್ದವು. ಸೋಮವಾರ 9,111 ರಂದು ಹೊಸ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಒಂದೇ ದಿನ 27 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.  ಸಕ್ರಿಯ ಪ್ರಕರಣಗಳ ಸಂಖ್ಯೆ 60, 313ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ ಕೊವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4.47 ಕೋಟಿ (4,48,27,226) ದಾಖಲಾಗಿದೆ. ದೈನಂದಿನ ಪಾಸಿಟಿವಿಟಿ ದರ ಶೇಕಡಾ 8.40 ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇಕಡಾ 4.94ರಷ್ಟಿದೆ. ಸಕ್ರಿಯ ಪ್ರಕರಣಗಳು ಈಗ ಒಟ್ಟು ಸೋಂಕಿನ ಶೇ. 0.13 ರಷ್ಟನ್ನು ಒಳಗೊಂಡಿದ್ದರೆ ರಾಷ್ಟ್ರೀಯ ಚೇತರಿಕೆ ದರ ಶೇ. 98.68 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 4,42,35,772 ಕ್ಕೆ ಏರಿದೆ ಮತ್ತು  ಸಾವಿನ ಪ್ರಮಾಣ ಶೇಕಡಾ 1.19 ರಷ್ಟಿದೆ. ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 220.66 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ ಅಂತಾ ಸಚಿವಾಲಯ ಮಾಹಿತಿ ನೀಡಿದೆ.

suddiyaana