ಮತ್ತೆ ಟಾಸ್ ಸೋತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಆರಂಭದಲ್ಲೇ ಬೂಮ್ರಾ ಮ್ಯಾಜಿಕ್
ಭಾರತ ತಂಡಕ್ಕೆ ರಿಷಭ್ ಪಂತ್ ರಿಟರ್ನ್

ಮತ್ತೆ ಟಾಸ್ ಸೋತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಆರಂಭದಲ್ಲೇ ಬೂಮ್ರಾ ಮ್ಯಾಜಿಕ್ಭಾರತ ತಂಡಕ್ಕೆ ರಿಷಭ್ ಪಂತ್ ರಿಟರ್ನ್

ಭಾರತ ಮತ್ತು ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ಆರಂಭವಾಗಿದೆ. 15 ವರ್ಷಗಳ ನಂತರ ಈಡನ್ ಗಾರ್ಡನ್ಸ್‌ನಲ್ಲಿ ಈ ಟೆಸ್ಟ್ ಸರಣಿ ನಡೆಯುತ್ತಿದೆ. 25 ವರ್ಷಗಳಿಂದ ಭಾರತದಲ್ಲಿ ಸರಣಿ ಗೆಲ್ಲಲು ಕಾಯುತ್ತಿದ್ದ ದಕ್ಷಿಣ ಆಫ್ರಿಕಾ ಟಾಸ್ ಗೆದ್ದು ಬ್ಯಾಟಿಂಗ್ ಮಾಡುತ್ತಿದೆ. ಆದರೆ, ಟೀಮ್ ಇಂಡಿಯಾ ಬೌಲರ್ ಜಸ್‌ಪ್ರೀತ್ ಬೂಮ್ರಾ ಮ್ಯಾಜಿಕ್‌ಗೆ ಸೌತ್ ಆಫ್ರಿಕಾದ ಆರಂಭಿಕರು ಔಟ್ ಆಗಿದ್ದಾರೆ.

ಇದನ್ನೂ ಓದಿ:LSGಗೆ ಅರ್ಜುನ್ ತೆಂಡೂಲ್ಕರ್? – ಮುಂಬೈನಲ್ಲಿ ಚಾನ್ಸ್ ಸಿಗದೆ ಸಿಟ್ಟಿಗೆದ್ರಾ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯಲ್ಲಿ ಭಾರತ ಟಾಸ್ ಸೋತಿದೆ. ಆದರೂ ಬೌಲಿಂಗ್‌ನಲ್ಲಿ ಭಾರತೀಯ ಬೌಲರ್‌ಗಳು ಪರಾಕ್ರಮ ಮೆರೆಯುತ್ತಿದ್ದಾರೆ.  ಈಗಾಗಲೇ ದಕ್ಷಿಣ ಆಫ್ರಿಕಾ ಮೂರು ವಿಕೆಟ್ ಕಳೆದುಕೊಂಡಿದೆ. ಟೀಮ್ ಇಂಡಿಯಾ ಪರ ಬೂಮ್ರಾ ಎರಡು ವಿಕೆಟ್ ಪಡೆದಿದ್ದಾರೆ. ಕುಲ್‌ದೀಪ್ ಯಾದವ್ ಒಂದು ವಿಕೆಟ್ ಪಡೆದಿದ್ದಾರೆ.

15 ವರ್ಷಗಳ ನಂತರ ಈಡನ್ ಗಾರ್ಡನ್ಸ್‌ನಲ್ಲಿ ಟೆಸ್ಟ್ ಪಂದ್ಯವನ್ನು ಆಡುತ್ತಿವೆ. ಉಭಯ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯವು 1996 ರಲ್ಲಿ ಈ ಮೈದಾನದಲ್ಲಿ ನಡೆದಿತ್ತು. ಅಂದಿನಿಂದ, 2010 ರವರೆಗೆ, ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಮೂರು ಟೆಸ್ಟ್ ಪಂದ್ಯಗಳು ಈಡನ್ ಗಾರ್ಡನ್ಸ್‌ನಲ್ಲಿ ನಡೆದಿದ್ದು, ಇದರಲ್ಲಿ ಭಾರತ 2-1 ಮುನ್ನಡೆ ಸಾಧಿಸಿದೆ. 2000 ಇಸವಿಯಿಂದ ದಕ್ಷಿಣ ಆಫ್ರಿಕಾ ಭಾರತದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದಿಲ್ಲ. ಇದರರ್ಥ ಸರಣಿ ಗೆಲುವಿಗಾಗಿ ಹರಿಣಗಳ ಕಾಯುವಿಕೆ 25 ವರ್ಷಗಳಿಂದ ಮುಂದುವರೆದಿದೆ.

ಆಫ್ರಿಕಾ ತಂಡದ ಸ್ಟಾರ್ ವೇಗದ ಕಗಿಸೊ ರಬಾಡ ಈ ಪಂದ್ಯದಲ್ಲಿ ಆಡುತ್ತಿಲ್ಲ. ಹೀಗಾಗಿ ಕಾರ್ಬಿನ್ ಬಾಷ್ ಪ್ಲೇಯಿಂಗ್-11 ರಲ್ಲಿ ಸ್ಥಾನ ಪಡೆದಿದ್ದಾರೆ. ಏತನ್ಮಧ್ಯೆ, ಭಾರತದ ಪ್ಲೇಯಿಂಗ್-11 ರಲ್ಲಿ ಎರಡು ಬದಲಾವಣೆಗಳಿವೆ. ರಿಷಭ್ ಪಂತ್ ತಂಡಕ್ಕೆ ಮರಳಿದ್ದು, ನಿತೀಶ್ ರೆಡ್ಡಿ ಬದಲಿಗೆ ಆಡಲಿದ್ದಾರೆ. ಪಂತ್ ಜೊತೆಗೆ ಅಕ್ಷರ್ ಪಟೇಲ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

Sulekha