ಕೋಟಿ ಕೋಟಿ ಭಾರತೀಯರ ಕನಸು ಭಗ್ನ – ವಿಶ್ವಕಪ್ ಸಮರದಲ್ಲಿ ಸೋತ ಭಾರತ, ಗೆದ್ದ ಆಸ್ಟ್ರೇಲಿಯಾ

ಕೋಟಿ ಕೋಟಿ ಭಾರತೀಯರ ಕನಸು ಭಗ್ನ – ವಿಶ್ವಕಪ್ ಸಮರದಲ್ಲಿ ಸೋತ ಭಾರತ, ಗೆದ್ದ ಆಸ್ಟ್ರೇಲಿಯಾ

ನೂರು ಕೋಟಿ ಭಾರತೀಯರ ಪ್ರಾರ್ಥನೆ ಫಲಿಸಲೇ ಇಲ್ಲ. ಮೂರನೇ ಬಾರಿ ವಿಶ್ವಕಪ್ ಗೆಲ್ಲುವ ಭಾರತದ ಕನಸು ಭಗ್ನಗೊಂಡಿದೆ. ಆಸ್ಟ್ರೇಲಿಯಾ 6ನೇ ಬಾರಿ ವಿಶ್ವಕಪ್ ಗೆದ್ದು ಸಂಭ್ರಮಿಸಿದೆ.

ಇದನ್ನೂ ಓದಿ: ವಿಶ್ವಕಪ್ ಫೈನಲ್‌ಗೆ ಈ ರೀತಿ ಪಿಚ್ ಬೇಕಿತ್ತಾ? –ಬ್ಯಾಟ್ ಬೀಸಲು ಒದ್ದಾಡಿದ ಭಾರತದ ದಿಗ್ಗಜ ಬ್ಯಾಟರ್‌ಗಳು

ವಿಶ್ವಕಪ್ 2023ರ ಫೈನಲ್‌ನಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ ತಂಡವು ಭರ್ಜರಿಯಾಗಿ ಗೆಲ್ಲುವ ಮೂಲಕ ಅಮೋಘ 6ನೇ ಬಾರಿಗೆ ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕಿದೆ. ಈ ಮೂಲಕ ಕೋಟಿ ಭಾರತೀಯ ಅಭಿಮಾನಿಗಳ ವಿಶ್ವಕಪ್ ಕನಸು ನನಸಾಗಲೇ ಇಲ್ಲ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗೆ 10 ವಿಕೆಟ್ ನಷ್ಟಕ್ಕೆ 240 ರನ್ ಗಳಿಸುವ ಮೂಲಕ 241 ರನ್ ಟಾರ್ಗೆಟ್ ನೀಡಿತು. ಈ ಮೊತ್ತ ಬೆನ್ನಟ್ಟಿದ ಆಸೀಸ್ ಆರಂಭದಿಂದಲೇ ಅಬ್ಬರಿಸಲು ಆರಂಭಿಸಿದರು. ಅಂತಿಮವಾಗಿ ಆಸೀಸ್ ಪರ ಟ್ರಾವಿಸ್ ಹೆಡ್ ದಾಖಲೆಯ ಶತಕ ಸಿಡುಸುವ ಮೂಲಕ ಕಾಂಗರೂಗಳ ಮಡಿಲಿಗೆ 6ನೇ ಬಾರಿಗೆ ವಿಶ್ವಕಪ್ ಸೇರಿಸುವಲ್ಲಿ ಯಶಸ್ವಿಯಾದರು.

ಆಸ್ಟ್ರೇಲಿಯಾ ತಂಡ ಅಂತಿಮವಾಗಿ 43  ಓವರ್‌ಗೆ 4 ವಿಕೆಟ್ ನಷ್ಟಕ್ಕೆ 241 ರನ್ ಗಳಿಸುವ ಮೂಲಕ ಬರೋಬ್ಬರಿ 6 ವಿಕೆಟ್‌ಗಳ ಜಯ ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ 50 ಓವರ್‌ಗಳಲ್ಲಿ 240 ರನ್‌ಗಳಿಗೆ ಆಲೌಟ್ ಆಯ್ತು. ಸುಲಭ ಸವಾಲನ್ನು ಪಡೆದ ಆಸ್ಟ್ರೇಲಿಯಾ ಆರಂಭದಲ್ಲಿ ವಿಕೆಟ್ ಕಳೆದುಕೊಂಡರೂ ಟ್ರಾವಿಸ್ ಹೆಡ್ ಶತಕ ಮತ್ತು ಲಬುಶೇನ್ ಅವರ ಸಮಯೋಚಿತ ಅರ್ಧಶತಕದಿಂದ ಇನ್ನೂ 42 ಎಸೆತ ಬಾಕಿ ಇರುವಂತೆಯೇ 241 ರನ್ ಹೊಡೆಯುವ ಮೂಲಕ ವಿಶ್ವಕಪ್‌ಗೆ ಮುತ್ತಿಕ್ಕಿತು.

Sulekha