ವಿಶ್ವಕಪ್ 2023 ಟೂರ್ನಿಯಲ್ಲಿ ಭಾರತ ಶುಭಾರಂಭ – ಕಿಂಗ್ ಕೊಹ್ಲಿ ಜೊತೆ ಕನ್ನಡಿಗ ಕೆ.ಎಲ್ ರಾಹುಲ್ ಜೊತೆಯಾಟದ ಮೆರುಗು

ವಿಶ್ವಕಪ್ 2023 ಟೂರ್ನಿಯಲ್ಲಿ ಭಾರತ ಶುಭಾರಂಭ – ಕಿಂಗ್ ಕೊಹ್ಲಿ ಜೊತೆ ಕನ್ನಡಿಗ ಕೆ.ಎಲ್ ರಾಹುಲ್ ಜೊತೆಯಾಟದ ಮೆರುಗು

ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯಲ್ಲಿ ಭಾರತ ಭರ್ಜರಿ ಶುಭಾರಂಭ ಮಾಡಿದೆ. ಭಾನುವಾರ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಕೆಎಲ್ ರಾಹುಲ್ ಸಿಡಿಸಿದ ಅಜೇಯ 97 ರನ್ ಹಾಗೂ ವಿರಾಟ್ ಕೊಹ್ಲಿಯ ಅಬ್ಬರದ 85 ರನ್‌ಗಳ ಸಹಾಯದಿಂದ ಟೀಮ್ ಇಂಡಿಯಾ ವಿಶ್ವಕಪ್‌ನ ಮೊದಲ ಪಂದ್ಯದಲ್ಲೇ ಜಯ ಸಾಧಿಸಿದೆ.

ಇದನ್ನೂ ಓದಿ: ಬ್ಯಾಟಿಂಗ್‌ನಲ್ಲಿ ಪ್ಲಾಫ್ ಶೋ, ಸಹಆಟಗಾರನಿಗೆ ಕಪಾಳಮೋಕ್ಷ – ಪಾಕ್ ಕ್ಯಾಪ್ಟನ್ ಬಾಬರ್ ಆಝಂ ಯಡವಟ್ಟು

ಟೀಮ್ ಇಂಡಿಯಾ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ಕೆ.ಎಲ್ ರಾಹುಲ್ ಅವರ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನದಿಂದ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್‌ಗಳ ಅಮೋಘ ಜಯ ಸಾಧಿಸಿದೆ. ಈ ಮೂಲಕ ವಿಶ್ವಕಪ್ ಟೂರ್ನಿಯಲ್ಲಿ ಶುಭಾರಂಭ ಕಂಡಿದೆ. ಆಸೀಸ್ ನೀಡಿದ 200 ರನ್‌ಗಳ ಗುರಿ ಬೆನ್ನತ್ತಿದ್ದ ಭಾರತ 41.2 ಓವರ್‌ಗಳಲ್ಲೇ 4 ವಿಕೆಟ್ ನಷ್ಟಕ್ಕೆ 201 ರನ್ ಬಾರಿಸಿ ಗೆಲುವು ಸಾಧಿಸಿದೆ. ಆದರೆ, ಟೀಮ್ ಇಂಡಿಯಾಗೆ ಮೊದಲ ಎರಡು ಓವರ್‌ನಲ್ಲಿ ತೀವ್ರ ಸಂಕಷ್ಟ ಎದುರಾಗಿತ್ತು. 2ನೇ ಓವರ್‌ನಲ್ಲೇ ಕೇವಲ 2 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಟೀಮ್ ಇಂಡಿಯಾ ಪರದಾಡಿತ್ತು. ಆದರೆ, ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್ ಜೋಡಿ ತಮ್ಮ ತಂಡವನ್ನು ಗೆಲುವಿನ ದಡ ಸೇರಿಸಿದರು.

ವಿರಾಟ್ ಕೊಹ್ಲಿ 116 ಎಸೆತಗಳಲ್ಲಿ 6 ಬೌಂಡರಿಯೊಂದಿಗೆ 85 ರನ್ ಹೊಡೆದು ಶತಕ ವಂಚಿರಾದರು. ಇನ್ನೂ ಕೊನೆಯವರೆಗೂ ಹೋರಾಡಿದ ಕೆ.ಎಲ್ ರಾಹುಲ್ 115 ಎಸೆತಗಳಲ್ಲಿ 97 ರನ್ (8 ಬೌಂಡರಿ, 2 ಸಿಕ್ಸರ್) ಗಳಿಸಿ ಶತಕ ವಂಚಿತರಾದರು. ಅದು ಕೂಡಾ ಕೆ.ಎಲ್ ರಾಹುಲ್ ಸೆಂಚುರಿ ಗ್ಯಾರಂಟಿ ಎಂದು ಅಭಿಮಾನಿಗಳು ಕಾಯುತ್ತಲೇ ಇದ್ದರು. ಶತಕ ವಂಚಿತನಾದರೂ, ಗೆಲುವಿನ ರನ್ ಹೊಡೆದ ಖುಷಿ ಕನ್ನಡಿಗನ ಮುಖದಲ್ಲಿತ್ತು. ಇದು ಅಭಿಮಾನಿಗಳ ಪಾಲಿಗೂ ಸಾರ್ಥಕ ಕ್ಷಣವಾಗಿತ್ತು.

ಆಸೀಸ್ ವಿರುದ್ಧ ಸ್ಮರಣೀಯ ಇನ್ನಿಂಗ್ಸ್ ಆಡಿದ ಕೊಹ್ಲಿಯನ್ನು ತಂಡದ ಇತರರ ಆಟಗಾರರು ಚಪ್ಪಾಳೆ ಮೂಲಕ ಸ್ವಾಗತಿಸಿದರೆ, ಇತ್ತ ಟೀಂ ಇಂಡಿಯಾವನ್ನು ಸಂಕಷ್ಟದಿಂದ ಪಾರು ಮಾಡಿದ ಸಂತೃಪ್ತಿ ವಿರಾಟ್​ಗೆ ಇತ್ತು. ಆದರೆ ಟೀಂ ಇಂಡಿಯಾವನ್ನು ಗೆಲುವಿನ ದಡ ಸೇರಿಸಿ ಅಜೇಯರಾಗಿ ಮರಳಲು ಸಾಧ್ಯವಾಗಲಿಲ್ಲ ಎಂಬ ವಿಷಾದ ವಿರಾಟ್ ಮುಖದಲ್ಲಿ ಕಾಣುತ್ತಿತ್ತು. ಹೀಗಾಗಿ ಡ್ರೆಸ್ಸಿಂಗ್ ರೂಮ್ ತಲುಪಿದ ವಿರಾಟ್ ತಮ್ಮ ತಲೆಯನ್ನು ಚಚ್ಚಿಕೊಳ್ಳುವ ಮೂಲಕ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಇದೀಗ ವಿರಾಟ್ ಅವರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

Sulekha