ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಿಗೆ ನೇಪಾಳಕ್ಕೆ ಭಾರತದ ನೆರವು – ವಿಶೇಷ ಸುರಂಗ ರಕ್ಷಣಾ ತಂಡ ಕಳುಹಿಸಲು ಸಿದ್ಧತೆ

ನೇಪಾಳದಲ್ಲಿ ಪ್ರವಾಹದ ಪ್ರಮಾಣ ಹೆಚ್ಚಾಗುತ್ತಿದ್ದಂತೆ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಿಗೆ ವಿದೇಶಿ ನೆರವು ಸ್ವೀಕರಿಸಲು ಅಲ್ಲಿನ ಸರ್ಕಾರ ಒಪ್ಪಿಕೊಂಡಿದೆ. ಆರಂಭದಲ್ಲಿ ವಿದೇಶಿ ನೆರವನ್ನು ನಿರಾಕರಿಸಿದ್ದ ನೇಪಾಳ, ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ನೆರವು ಕೋರಿದೆ. ನೇಪಾಳದ ಮನವಿಗೆ ಭಾರತ ತಕ್ಷಣ ಸ್ಪಂದಿಸಿದ್ದು, ವಿಶೇಷ ಸುರಂಗ ರಕ್ಷಣಾ ತಂಡವನ್ನು ಕಳುಹಿಸಲು ಸಿದ್ಧತೆ ನಡೆಸಿದೆ. ಮೊದಲು ಸ್ಥಳ ಪರಿಶೀಲನೆಗಾಗಿ ತಂಡವನ್ನು ಕಳುಹಿಸಲಾಗುತ್ತಿದ್ದು, ನೆಲದ ಪರಿಸ್ಥಿತಿ ಹಾಗೂ ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಉಪಕರಣಗಳ ಕುರಿತು ಮಾಹಿತಿ ಸಂಗ್ರಹಿಸಲಿದೆ.
ಇದನ್ನೂ ಓದಿ: ನೇಪಾಳದಲ್ಲಿ ಹುಡುಕಿದ್ದಷ್ಟು ಸಿಗುತ್ತಿವೆ ಹೆ*ಣಗಳು – ಸಾವಿನ ಸಂಖ್ಯೆ 584ಕ್ಕೆ ಏರಿಕೆ, 2,482ಕ್ಕೂ ಹೆಚ್ಚು ಜನ ನಾಪತ್ತೆ
ನೇಪಾಳದ ಭೋಟೆಕೋಶಿ ಹಾಗೂ ತ್ರಿಶೂಲಿ ನದಿ ಪ್ರದೇಶಗಳಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಸಾವಿನ ಸಂಖ್ಯೆ 616ಕ್ಕೆ ಏರಿಕೆಯಾಗಿದೆ. ಇನ್ನೂ ನೂರಾರು ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಪ್ರವಾಹದಿಂದ ಮನೆಗಳು, ಸೇತುವೆಗಳು, ರಸ್ತೆಗಳು ಹಾಗೂ ಜಲವಿದ್ಯುತ್ ಯೋಜನೆಗಳಿಗೆ ಭಾರೀ ಹಾನಿಯಾಗಿದೆ. ನೇಪಾಳ ಸೇನೆ ಇದುವರೆಗೆ ಸಾವಿರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ. ಜಲವಿದ್ಯುತ್ ಸುರಂಗದಲ್ಲಿ ಸಿಲುಕಿದ್ದ 191 ಕಾರ್ಮಿಕರನ್ನು ರಕ್ಷಿಸಲಾಗಿದೆ. 16 ಹೆಲಿಕಾಪ್ಟರ್ಗಳ ಮೂಲಕ ನಿರಂತರ ರಕ್ಷಣಾ ಕಾರ್ಯ ನಡೆಯುತ್ತಿದೆ. ಭಾರತ ಸೇರಿದಂತೆ ಹಲವು ದೇಶಗಳು ನೆರವು ನೀಡಲು ಮುಂದಾಗಿವೆ.

ನೋಡಿರಿ

