ದೇಶದಲ್ಲಿ ಮತ್ತೆ ಕೊರೊನಾ ತಾಂಡವ – 5 ತಿಂಗಳಲ್ಲೇ ಮೊದಲ ಬಾರಿಗೆ 4 ಸಾವಿರ ಗಡಿ ದಾಟಿದ ಪಾಸಿಟಿವ್ ಕೇಸ್

ದೇಶದಲ್ಲಿ ಮತ್ತೆ ಕೊರೊನಾ ತಾಂಡವ – 5 ತಿಂಗಳಲ್ಲೇ ಮೊದಲ ಬಾರಿಗೆ 4 ಸಾವಿರ ಗಡಿ ದಾಟಿದ ಪಾಸಿಟಿವ್ ಕೇಸ್

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೊನಾ ಕೇಸ್ ದಿನದಿಂದ ದಿನಕ್ಕೆ  ಏರಿಕೆಯಾಗುತ್ತಿದೆ. ದೇಶದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ  4,431 ಹೊಸ ಪ್ರಕರಣಗಳು ಪತ್ತೆಯಾಗಿದೆ. ಕಳೆದ 5 ತಿಂಗಳಲ್ಲೇ ಇಷ್ಟು ಪ್ರಮಾಣದ ಪಾಸಿಟಿವ್  ಕೇಸ್ ಪತ್ತೆಯಾಗಿದೆ ಅಂತಾ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇದನ್ನೂ ಓದಿ: ಬೆಂಗಳೂರಿಗರಲ್ಲಿ ಹೆಚ್ಚಾಗುತ್ತಿದೆ ಸೈಬರ್‌ಕಾಂಡ್ರಿಯಾಸಿಸ್ ಸಮಸ್ಯೆ!  

ಕೇಂದ್ರ ಆರೋಗ್ಯ ಸಚಿವಾಲಯ ಅಂಕಿ ಅಂಶಗಳ ಪ್ರಕಾರ, ಕಳೆದ ವರ್ಷ ಸೆಪ್ಟೆಂಬರ್ 25 ರಂದು ಒಟ್ಟು 4,777 ಪ್ರಕರಣಗಳು ದಾಖಲಾಗಿದ್ದವು. ಇದಾದ ಬಳಿಕ 5 ತಿಂಗಳು 13 ದಿನಗಳ ನಂತರ ಒಂದೇ ದಿನದಲ್ಲಿ 4,435 ಮಂದಿಗೆ ಸೋಂಕು ದೃಢಪಟ್ಟಿರುವುದು ಇದೇ ಮೊದಲು. ಅಷ್ಟೇ ಅಲ್ಲದೇ ಕಳೆದ 24 ಗಂಟೆಗಳಲ್ಲಿ 15 ಮಂದಿ ಕೊವಿಡ್ ಗೆ ಬಲಿಯಾಗಿದ್ದಾರೆ.  ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ತಲಾ ನಾಲ್ವರು ಮೃತಪಟ್ಟಿದ್ದು, ಛತ್ತೀಸ್ ಗಢ, ದೆಹಲಿ, ಪುದುಚೇರಿ, ಮತ್ತು ರಾಜಸ್ಥಾನದಲ್ಲಿ ತಲಾ ಓರ್ವರು ಸಾವನ್ನಪ್ಪಿದ್ದಾರೆ ಅಂತಾ ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ದೇಶದಲ್ಲಿ ಕೊವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,33,719ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೊವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,916ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 23,091ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,41,79,712ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 1,31,086 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ  92,21,64,863 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

suddiyaana