ಭಾರತದಲ್ಲಿ ಕೊರೋನಾ ಆರ್ಭಟ – ಒಂದೇ ದಿನ 10,542 ಹೊಸ ಪಾಸಿಟಿವ್ ಕೇಸ್, 38 ಮಂದಿ ಸಾವು

ಭಾರತದಲ್ಲಿ ಕೊರೋನಾ ಆರ್ಭಟ – ಒಂದೇ ದಿನ 10,542 ಹೊಸ ಪಾಸಿಟಿವ್ ಕೇಸ್, 38 ಮಂದಿ ಸಾವು

ನವದೆಹಲಿ:  ದೇಶದಾದ್ಯಂತ ಕೊರೋನಾ ಭೀತಿ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಪಾಸಿಟಿವ್ ಕೇಸ್ ಹೆಚ್ಚಳವಾಗುತ್ತಿದ್ದು. ಕಳೆದ 24 ಗಂಟೆಗಳ ಅವಧಿಯಲ್ಲಿ 10,542 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 38 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 63,562ಕ್ಕೆ ಏರಿಕೆಯಾಗಿದೆ.

ಇನ್ನು ಕರ್ನಾಟಕದಲ್ಲೂ ಕೂಡ ಕೊರೋನಾ ಕೇಸ್ ಹೆಚ್ಚಳವಾಗುತ್ತಿದೆ. ಮಂಗಳವಾರ ಒಂದೇ ದಿನ ರಾಜ್ಯದಲ್ಲಿ 16,634 ಜನರನ್ನು ಪರೀಕ್ಷೆ ನಡೆಸಲಾಗಿದ್ದು, 379 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದಿನದ ಸೋಂಕು ಪ್ರಮಾಣದ ದರ ಶೇ. 2.27 ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,056ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: ಬಿಸಿಲ ಝಳದಿಂದ ತಪ್ಪಿಸಿಕೊಳ್ಳಲು ಮಾಸ್ಟರ್ ಪ್ಲಾನ್ – ಕಾರಿಗೆ ಸಗಣಿ ಲೇಪಿಸಿದ ವೈದ್ಯ!

ಮತ್ತೊಂದೆಡೆ ರಾಜ್ಯದಲ್ಲಿ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಒಂದೇ ದಿನದಲ್ಲಿ ಮೂವರು ಕೋವಿಡ್ ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಕರ್ನಾಟಕದಲ್ಲಿ ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 40,297ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,48,45,401ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,31,190ಕ್ಕೆ ಏರಿಕೆಯಾಗಿದೆ. ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,42,50,649ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 2,40,014 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ  92.46,17,164 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಜನರಿಗೆ 220,66,27,758 ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

suddiyaana