ದೇಶದಲ್ಲಿ ಒಂದೇ ದಿನ 11,109 ಹೊಸ ಕೊರೊನಾ ಕೇಸ್  – 49 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣ

ದೇಶದಲ್ಲಿ ಒಂದೇ ದಿನ 11,109 ಹೊಸ ಕೊರೊನಾ ಕೇಸ್  – 49 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣ

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ವೇಗವಾಗಿ ಹರಡುತ್ತಲೇ ಇದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 11,109 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 49,622ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇದನ್ನೂ ಓದಿ: ಉಕ್ರೇನ್ ನಿಂದ ಬಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಭಾರತದಿಂದಲೇ ಪರೀಕ್ಷೆ ಬರೆಯಲು ಅವಕಾಶ

ಭಾರತದಲ್ಲಿ ಒಂದೇ  2,21,725 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ  92,37,19,207 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ದೇಶದಲ್ಲಿ ಕೊವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,97,269ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೊವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,31,064ಕ್ಕೆ ಏರಿಕೆಯಾಗಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,42,16,583ಕ್ಕೆ ತಲುಪಿದೆ. ದೇಶದಲ್ಲಿ ಕೊವಿಡ್ ಹೆಚ್ಚಾಗುತ್ತಿದ್ದಂತೆ ಮತ್ತೆ ಮಾಸ್ಕ್​ಗಳನ್ನು ಧರಿಸುವುದು ಹಾಗೂ ಕೊವಿಡ್ ಸೂಕ್ತ ನಿಯಮಗಳನ್ನು ಪಾಲಿಸಲು ತಜ್ಞರು ಸಲಹೆ ನೀಡಿದ್ದಾರೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

suddiyaana