ಭಾರತದಲ್ಲಿ ಒಂದೇ ದಿನ 6,155 ಹೊಸ ಕೊರೊನಾ ಕೇಸ್ –  31 ಸಾವಿರ  ಗಡಿ ದಾಟಿದ ಸಕ್ರಿಯ ಪ್ರಕರಣ

ಭಾರತದಲ್ಲಿ ಒಂದೇ ದಿನ 6,155 ಹೊಸ ಕೊರೊನಾ ಕೇಸ್ –  31 ಸಾವಿರ  ಗಡಿ ದಾಟಿದ ಸಕ್ರಿಯ ಪ್ರಕರಣ

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 6,155 ಹೊಸ ಕೊವಿಡ್ ಕೇಸ್ ದಾಖಲಾಗಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ ಅಂತಾ ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಎಲಾನ್​ ಮಸ್ಕ್‌ನ ಆ ಒಂದು ನಿರ್ಧಾರವೇ ಮುಳ್ಳಾಯ್ತಾ ? – ಕ್ರಿಪ್ಟೋ ಕರೆನ್ಸಿಯ ಷೇರುಮೌಲ್ಯ ಕುಸಿತ..! ​

ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಶುಕ್ರವಾರ ಒಂದೇ ದಿನ ದೇಶದಲ್ಲಿ 6,050 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿತ್ತು. ಇಂದು 6,155 ಪಾಸಿಟಿವ್ ಕೇಸ್ ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 31,194ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,51,259ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,954ಕ್ಕೆ ಏರಿಕೆಯಾಗಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,41,89,111ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 1,09,378 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ  92,26,13,516 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಜನರಿಗೆ 220,66,22,663 ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

suddiyaana