ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ ಕೆನಡಾ ದೇಶದವರಿಗೆ ವೀಸಾ ಸೇವೆಗಳನ್ನು ಮರು ಆರಂಭಿಸಿದ ಭಾರತ
ನವದೆಹಲಿ: ಭಾರತ ಮತ್ತು ಕೆನಡಾ ನಡುವಿನ ಮುಸುಕಿನ ಗುದ್ದಾಟ ಮುಂದುವರಿದಿದೆ. ಎರಡು ದೇಶಗಳ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆಯೇ ಭಾರತವು ವೀಸಾ ಸೇವೆಗಳನ್ನು ಪುನರಾಂಭಿಸಿದೆ ಎಂದು ವರದಿಯಾಗಿದೆ.
ಕೆನಡಾದಲ್ಲಿರುವ ಭಾರತದ ಹೈಕಮಿಷನ್ ಈ ಬಗ್ಗೆ ಮಾಹಿತಿ ನೀಡಿದ್ದು, ಭಾರತವು ಕೆನಡಾದಲ್ಲಿ ವೀಸಾ ಸೇವೆಗಳನ್ನು ಪುನರಾರಂಭಿಸಿದೆ. ಪ್ರವೇಶ ಸೇರಿದಂತೆ ವ್ಯಾಪಾರ, ವೈದ್ಯಕೀಯ ವೀಸಾ ಮತ್ತು ಕಾನ್ಫರೆನ್ಸ್ ವೀಸಾ ಸೇವೆಯನ್ನು ಪುನರಾರಂಭಿಸಲಿದೆ ಎಂದು ತಿಳಿಸಿದೆ.
ಇದನ್ನೂ ಓದಿ: ಭಾರತೀಯರಲ್ಲಿ ಹೆಚ್ಚಾಯ್ತು ವಿದೇಶ ಪ್ರೇಮ! – ವಿದೇಶಿ ಪೌರತ್ವ ಪಡೆದವರ ಪೈಕಿ ಭಾರತೀಯರೇ ಹೆಚ್ಚು!
ಜೂನ್‌ನಲ್ಲಿ ಬ್ರಿಟಿಷ್ ಕೊಲಂಬಿಯಾದಲ್ಲಿ ಭಾರತೀಯ ಏಜೆಂಟ್‌ಗಳು ಮತ್ತು ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಡುವೆ ಸಂಭಾವ್ಯ ಸಂಪರ್ಕವಿದೆ ಎಂದು ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್ 18 ರಂದು ಆರೋಪಿಸಿದ ನಂತರ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿದ್ದವು.
ಭಾರತ ಆರೋಪಗಳನ್ನು ಬಲವಾಗಿ ತಳ್ಳಿ ಹಾಕಿದ ಕೆಲವು ದಿನಗಳ ನಂತರ ಕೆನಡಾದ ನಾಗರಿಕರಿಗೆ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸುವುದಾಗಿ ಘೋಷಿಸಿತ್ತು. ಇದೀಗ ಮತ್ತೆ ಭಾರತವು ಕೆನಡಾದಲ್ಲಿ ವೀಸಾ ಸೇವೆಗಳನ್ನು ಪುನರಾರಂಭಿಸಿದೆ.