ಭಾರತ ಮತ್ತು ನ್ಯೂಝಿಲೆಂಡ್ ಟೆಸ್ಟ್ ಪಂದ್ಯಕ್ಕೆ ಅಡ್ಡಿಯಾದ ವರುಣ – ಮೊದಲ ಟೆಸ್ಟ್ ಪಂದ್ಯ ನಡೆಯಲ್ವಾ?
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣಾರ್ಭಟ ಜೋರಾಗಿದೆ. ನಿರಂತರವಾಗಿ ಮಳೆ ಸುರಿಯುತ್ತಲೇ ಇದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬೆಳಿಗ್ಗೆ 9.30 ರಿಂದ ಶುರುವಾಗಬೇಕಿದ್ದ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಬೆಳಿಗ್ಗೆ 9 ಗಂಟೆಗೆ ನಡೆಯಬೇಕಿದ್ದ ಟಾಸ್ ಪ್ರಕ್ರಿಯೆಯನ್ನು ಮುಂದೂಡಲಾಗಿದೆ.
ಇದನ್ನೂ ಓದಿ: ಇಂಡಿಯಾ ಮೈತ್ರಿ ಕೂಟ ಛಿದ್ರಛಿದ್ರ? -ಮೈತ್ರಿ ಪಕ್ಷಗಳ ನಿರ್ಧಾರ..‘ಕೈ’ಗೆ ಶಾಕ್
ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಪಂದ್ಯಕ್ಕೆ ಅಡ್ಡಿಯಾಗಿದೆ. ಹೀಗಾಗಿ ಟಾಸ್ ಪ್ರಕ್ರಿಯೆಯನ್ನು ಮುಂದೂಡಲಾಗಿದೆ. ಮಳೆ ನಿಲ್ಲುವ ಸೂಚನೆ ಸಿಕ್ಕ ಬಳಿಕವಷ್ಟೇ ಟಾಸ್ ನಡೆಯಲಿದೆ. ಆದರೆ ಬುಧವಾರ ಬೆಂಗಳೂರಿನಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, ಹೀಗಾಗಿ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟ ನಡೆಯುವುದು ಅನುಮಾನ.
ಇನ್ನು ಎರಡನೇ ದಿನದಾಟದ ವೇಳೆಯು ಶೇ. 80 ರಷ್ಟು ಮಳೆಯಾಗಲಿದೆ ಎಂದು ವೆದರ್.ಕಾಮ್ ವರದಿ ಹೇಳಿದೆ. ಹೀಗಾಗಿ ಮೊದಲೆರಡು ದಿನದಾಟಗಳು ನಡೆಯುವುದು ಅನುಮಾನ ಎನ್ನಬಹುದು.
ಮೂರನೇ ಮತ್ತು ನಾಲ್ಕನೇ ದಿನದಾಟಗಳಲ್ಲಿ ಶೇ.60 ರಷ್ಟು ಮಳೆಯಾಗುವ ಸಾಧ್ಯತೆಯಿರುವುದರಿಂದ ಪೂರ್ಣ ಆಟವನ್ನು ನಿರೀಕ್ಷಿಸುವಂತಿಲ್ಲ. ಅಲ್ಲದೆ ಐದನೇ ದಿನದಾಟದಂದು ಶೇ.70 ರಷ್ಡು ಮಳೆಯಾಗಲಿದೆ ವೆದರ್.ಕಾಮ್ ವರದಿಯಲ್ಲಿ ತಿಳಿಸಲಾಗಿದೆ.
ಹೀಗಾಗಿ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯ ನಡೆಯುವ ಸಾಧ್ಯತೆಯಿಲ್ಲ. ಇದಾಗ್ಯೂ ಪಂದ್ಯ ಆರಂಭವಾದರೂ ಮಳೆ ಅಡ್ಡಿಪಡಿಸುವುದು ಬಹುತೇಕ ಖಚಿತ ಎಂದೇ ಹೇಳಬಹುದು.
ಎರಡನೇ ಟೆಸ್ಟ್ ಪಂದ್ಯ ಯಾವಾಗ?
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯವು ಅಕ್ಟೋಬರ್ 24 ರಿಂದ ಶುರುವಾಗಲಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಅಕ್ಟೋಬರ್ 28 ರವರೆಗೆ ಜರುಗಲಿದೆ. ಇನ್ನು ಮೂರನೇ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಜರುಗಲಿದ್ದು, ಈ ಪಂದ್ಯವು ನವೆಂಬರ್ 1 ರಿಂದ ನವೆಂಬರ್ 5 ರವರೆಗೆ ನಡೆಯಲಿದೆ.