ವೈಭವ್ ಸೂರ್ಯವಂಶಿಗೆ ಮತ್ತೆ ನಿರಾಸೆ – ಟಾಸ್‌ ಗೆದ್ದು ಬೌಲಿಂಗ್ ಆಯ್ದುಕೊಂಡ ಟೀಂ ಇಂಡಿಯಾ

ವೈಭವ್ ಸೂರ್ಯವಂಶಿಗೆ ಮತ್ತೆ ನಿರಾಸೆ – ಟಾಸ್‌ ಗೆದ್ದು ಬೌಲಿಂಗ್ ಆಯ್ದುಕೊಂಡ ಟೀಂ ಇಂಡಿಯಾ

ಟೀಮ್ ಇಂಡಿಯಾದಲ್ಲಿ ವೈಭವ್ ಸೂರ್ಯವಂಶಿಗೆ ಮತ್ತೆ ನಿರಾಸೆ! ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬೌಲಿಂಗ್ ಮಾಡುವ ಮೂಲಕ ಕಿವೀಸ್ ತಂಡವನ್ನು ಕಡಿಮೆ ಮೊತ್ತಕ್ಕೆ ಕಟ್ಟಿಹಾಕುವುದು ಭಾರತದ ಗುರಿಯಾಗಿದೆ.

ಭಾರತದ ಪ್ಲೇಯಿಂಗ್ ಇಲೆವೆನ್

ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಶ್‌ದೀಪ್ ಸಿಂಗ್ ಮತ್ತು ಮಯಾಂಕ್ ಯಾದವ್.

ಇನ್ನು ಎಲ್ಲರ ಗಮನ ಸೆಳೆಯುತ್ತಿರುವ ಯುವ ಆಟಗಾರ ವೈಭವ್ ಸೂರ್ಯವಂಶಿಗೆ ಈ ಪಂದ್ಯದಲ್ಲೂ ಅವಕಾಶ ಸಿಕ್ಕಿಲ್ಲ. ಮತ್ತೊಂದೆಡೆ, ಸುಮಾರು ನಾಲ್ಕು ವರ್ಷಗಳ ಬಳಿಕ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿರುವ ಭುವನೇಶ್ವರ್ ಕುಮಾರ್ ಮೇಲೆ ನಿರೀಕ್ಷೆ ಹೆಚ್ಚಿದೆ.

ನ್ಯೂಜಿಲೆಂಡ್ ಪರ ಫಿನ್ ಅಲೆನ್ ಮತ್ತು ಟಿಮ್ ಸೀಫರ್ಟ್ ಆರಂಭಿಕರಾಗಿ ಕಣಕ್ಕಿಳಿದಿದ್ದು,ಅವರ ವಿಕೆಟ್ ಬಿದ್ದಿದೆ. ನ್ಯೂಜಿಲೆಂಡ್ ಬ್ಯಾಟರ್‌ಗಳನ್ನು ಕಡಿಮೆ ಮೊತ್ತಕ್ಕೆ ಕಟ್ಟಿಹಾಕಿ, ಸರಣಿಯಲ್ಲಿ ಶುಭಾರಂಭ ಮಾಡಲು ಟೀಮ್ ಇಂಡಿಯಾ ಸಜ್ಜಾಗಿದೆ. ಆದ್ರೆ ನ್ಯೂಜಿಲೆಂಡ್ ಬ್ಯಾಟರ್ ಚೆನ್ನಾಗಿ ಆಡುತ್ತಿದ್ದಾರೆ.

Kishor KV

Leave a Reply

Your email address will not be published. Required fields are marked *