ವಿಶ್ವಕಪ್‌ಗೂ ಮುನ್ನ ಟೀಮ್ ಇಂಡಿಯಾಕ್ಕೆ ಟಿ20 ಪಂದ್ಯ- ಆಗಸ್ಟ್‌ನಲ್ಲಿ ವೆಸ್ಟ್ಇಂಡೀಸ್ ವಿರುದ್ಧ ಕಣಕ್ಕಿಳಿಯಲಿದೆ ಭಾರತ

ವಿಶ್ವಕಪ್‌ಗೂ ಮುನ್ನ ಟೀಮ್ ಇಂಡಿಯಾಕ್ಕೆ ಟಿ20 ಪಂದ್ಯ-  ಆಗಸ್ಟ್‌ನಲ್ಲಿ ವೆಸ್ಟ್ಇಂಡೀಸ್ ವಿರುದ್ಧ ಕಣಕ್ಕಿಳಿಯಲಿದೆ ಭಾರತ

ವಿಶ್ವಕಪ್‌ ವೇಳಾಪಟ್ಟಿ ಪ್ರಕಟವಾಗುತ್ತಿದ್ದಂತೆ ಕ್ರಿಕೆಟ್ ಹಬ್ಬಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಇದರ ಮಧ್ಯೆ, ಟೀಮ್ ಇಂಡಿಯಾ ಆಗಸ್ಟ್ ತಿಂಗಳು ಒಂದರಲ್ಲೇ ಬರೋಬ್ಬರಿ ಎಂಟು ಟಿ20 ಪಂದ್ಯಗಳನ್ನು ಆಡುತ್ತಿದೆ. ಇದಕ್ಕಾಗಿ ಟೀಂ ಇಂಡಿಯಾ ಎರಡು ದೇಶಗಳಿಗೆ ಪ್ರವಾಸ ಮಾಡಲಿದೆ. ಮೊದಲನೇಯದಾಗಿ ಟೆಸ್ಟ್, ಏಕದಿನ ಹಾಗೂ ಟಿ20 ಪಂದ್ಯಗಳಿಗಾಗಿ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ಪ್ರವಾಸ ಮಾಡಲಿದೆ. ಕೆರಿಬಿಯನ್ ನಾಡಲ್ಲಿ ಭಾರತ ಐದು ಟಿ20 ಪಂದ್ಯಗಳನ್ನಾಡಲಿದೆ. ಆ ಬಳಿಕ ಐರ್ಲೆಂಡ್ ವಿರುದ್ಧ 3 ಟಿ20 ಪಂದ್ಯಗಳನ್ನು ಆಡಲಿದೆ.

ಇದನ್ನೂ ಓದಿ:  ಐಸಿಸಿ ಏಕದಿನ ವಿಶ್ವಕಪ್ 2023 ವೇಳಾಪಟ್ಟಿ ಪ್ರಕಟ – ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಕ್ರಿಕೆಟ್ ಹಬ್ಬ

ಮೊದಲ ಟಿ20 ಪಂದ್ಯ ವೆಸ್ಟ್ ಇಂಡೀಸ್ ಹಾಗೂ ಭಾರತ ನಡುವೆ ಆಗಸ್ಟ್ 3 ರಂದು ನಡೆಯಲಿದೆ. ಈ ಪಂದ್ಯಕ್ಕೆ ಬ್ರಿಯಾನ್ ಲಾರಾ ಕ್ರೀಡಾಂಗಣ ಆತಿಥ್ಯವಹಿಸಲಿದೆ. ಎರಡನೇ ಟಿ20 ಪಂದ್ಯ ಆಗಸ್ಟ್ 6 ರಂದು ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೂರನೇ ಟಿ20 ಪಂದ್ಯ ಆಗಸ್ಟ್ 8 ರಂದು ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ನಾಲ್ಕನೇ ಟಿ20 ಪಂದ್ಯ ಆಗಸ್ಟ್ 12 ರಂದು ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿದೆ. ಐದನೇ ಟಿ20 ಪಂದ್ಯ ಆಗಸ್ಟ್ 13 ರಂದು ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿದೆ. ಆ ಬಳಿಕ 3 ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್ ಪ್ರವಾಸ ಮಾಡಲಿರುವ ಭಾರತ ತನ್ನ ಮೊದಲ ಪಂದ್ಯವನ್ನು ಆಗಸ್ಟ್ 18 ರಂದು ಮಲ್ಹೈಡ್, ಡುಬ್ಲಿನ್ನಲ್ಲಿ ಆಡಲಿದೆ. ಹಾಗೆಯೇ 2ನೇ ಟಿ20 ಪಂದ್ಯ ಆಗಸ್ಟ್ 20 ರಂದು ನಡೆದರೆ, 3ನೇ ಟಿ20 ಪಂದ್ಯ ಆಗಸ್ಟ್ 23 ರಂದು ಡುಬ್ಲಿನ್‌ನಲ್ಲಿ ನಡೆಯಲಿದೆ.

suddiyaana