ಭಾರತದ ಬೌಲಿಂಗ್‌ ದಾಳಿಗೆ ತತ್ತರಿಸಿದ ಸೌತ್‌ ಆಫ್ರಿಕಾ – ಭಾರತಕ್ಕೆ 7 ವಿಕೆಟ್‌ಗಳ ಅಮೋಘ ಜಯ

ಭಾರತದ ಬೌಲಿಂಗ್‌ ದಾಳಿಗೆ ತತ್ತರಿಸಿದ ಸೌತ್‌ ಆಫ್ರಿಕಾ – ಭಾರತಕ್ಕೆ 7 ವಿಕೆಟ್‌ಗಳ ಅಮೋಘ ಜಯ

ಭಾರತ ಹಾಗೂ ಸೌತ್‌ ಆಫ್ರಿಕಾ ನಡುವಿನ T20I ಸರಣಿಯ ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ 5 ಪಂದ್ಯಗಳ ಟಿ20 ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.

ಇದನ್ನೂ ಓದಿ: ಹಾರಾಡುವ ಹಕ್ಕಿಗೆ ಎಷ್ಟು ಕಷ್ಟ.. ಸರ್ಕಾರಿ ಶಾಲೆ ಹುಡ್ಗಿಗೆ ದುಬಾರಿ ಗಿಫ್ಟ್!- ವೈರಲ್ ಗರ್ಲ್ ಪೂಜಾ DKD ಸಾಹಸ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಭಾರತ, ದ.ಆಫ್ರಿಕಾ ಪಡೆಯನ್ನು 117ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್ ಮತ್ತು ಕುಲ್ದೀಪ್ ಸಿಂಗ್ ತಲಾ 2 ವಿಕೆಟ್ ಉರುಳಿಸಿದರು. ದ.ಆಫ್ರಿಕಾ ನಾಯಕ ಮಾಕ್ರಮ್ (61 ರನ್) ಹೊರತುಪಡಿಸಿ ಉಳಿದ ಬ್ಯಾಟರ್‌ಗಳ ಬ್ಯಾಟ್‌ ಸೌಂಡ್‌ ಮಾಡಿರಲಿಲ್ಲ. ಪ್ರಮುಖ ಬ್ಯಾಟರ್ ಕ್ವಿಂಟನ್ ಡಿ ಕಾಕ್ ಕೇವಲ 1 ರನ್ ಗಳಿಸಿ ಪೆವಿಲಿಯನ್ ಸೇರಿದರು. ದಕ್ಷಿಣ ಆಪ್ರಿಕಾ ತಂಡ ನಿಗದಿತ 20 ಓವರ್‌ಗಳಲ್ಲಿ 117 ರನ್‌ಗಳಿಗೆ ಆಲೌಟ್‌ ಆಯಿತು. 118 ರನ್‌ಗಳ ಅಲ್ಪ ಗುರಿ ಬೆನ್ನಟ್ಟಿದ ಭಾರತ 15.5 ಓವರ್‌ಗಳಲ್ಲೇ 3 ವಿಕೆಟ್‌ ನಷ್ಟಕ್ಕೆ 120 ರನ್‌ ಗಳಿಸಿ ಗೆಲುವು ಸಾಧಿಸಿತು.

ಸಣ್ಣ ಮೊತ್ತ ಬೆನ್ನಟ್ಟಿದ ಭಾರತಕ್ಕೆ ಆರಂಭಿಕರಾದ ಶುಭಮನ್‌ ಗಿಲ್‌ ಮತ್ತು ಅಭಿಷೇಕ್‌ ಶರ್ಮ ಉತ್ತಮ ಆರಂಭ ಒದಗಿಸಿದರು. ಬಿರುಸಿನ ಬ್ಯಾಟಿಂಗ್‌ ನಡೆಸಿದ ಈ ಜೋಡಿ ಮೊದಲ ವಿಕೆಟ್‌ಗೆ 60ರನ್‌ ಗಳಿಸಿದರು. ಗಿಲ್‌ ಆಟ ನಿಧಾನಗತಿಯಿಂದ ಕೂಡಿತ್ತು. 28 ಎಸೆತಕ್ಕೆ 28 ರನ್‌ ಗಳಿಸಿದರು. ಅಭಿಷೇಕ್‌ 18 ಎಸೆತಗಳಲ್ಲಿ ತಲಾ ಮೂರು ಸಿಕ್ಸರ್‌ ಮತ್ತು ಬೌಂಡರಿ ಸಿಡಿಸಿ 35 ರನ್‌ ಚಚ್ಚಿದರು. ಈ ಪಂದ್ಯಕ್ಕೆ 90 ನಿಮಿಷಗಳ ಕಾಲ ನೆಟ್ಸ್‌ನಲ್ಲಿ ಬ್ಯಾಟಿಂಗ್‌ ಅಭ್ಯಾಸ ನಡೆಸಿದರೂ ಸೂರ್ಯಕುಮಾರ್‌ ಬ್ಯಾಟಿಂಗ್‌ ಲಯ ಕಂಡುಕೊಳ್ಳುವಲ್ಲಿ ವಿಫಲರಾದರು. 12ರನ್‌ ಗಳಿಸಿ ವಿಕೆಟ್‌ ಕೈಚೆಲ್ಲಿದರು. ಎದುರಿಸಿದ್ದು 11 ಎಸೆತ. ಅಂತಿಮವಾಗಿ ತಿಲಕ್‌ ವರ್ಮ 25*, ಶಿವಂ ದುಬೆ ಅಜೇಯ 10 ರನ್‌ ಬಾರಿಸಿ ಗೆಲುವಿನ ದಡ ಸೇರಿಸಿದರು.

Shwetha M