ಏಷ್ಯನ್ ಗೇಮ್ಸ್‌ನಲ್ಲಿ 100 ಪದಕ ಗೆದ್ದು ಇತಿಹಾಸ ಬರೆದ ಭಾರತ – ಕ್ರೀಡಾಪಟುಗಳ ಸಾಧನೆಗೆ ಪ್ರಧಾನಿ ಮೋದಿ ಶ್ಲಾಘನೆ

ಏಷ್ಯನ್ ಗೇಮ್ಸ್‌ನಲ್ಲಿ 100 ಪದಕ ಗೆದ್ದು ಇತಿಹಾಸ ಬರೆದ ಭಾರತ – ಕ್ರೀಡಾಪಟುಗಳ ಸಾಧನೆಗೆ ಪ್ರಧಾನಿ ಮೋದಿ ಶ್ಲಾಘನೆ

ಏಷ್ಯನ್ ಗೇಮ್ಸ್ 2023ರಲ್ಲಿ ಭಾರತ ಇತಿಹಾಸ ಸೃಷ್ಟಿಸಿದೆ. ಏಷ್ಯನ್ ಗೇಮ್ಸ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಪದಕಗಳ ಬೇಟೆಯಲ್ಲಿ ಭಾರತ ಸೆಂಚುರಿ ಬಾರಿಸಿದೆ. ಕ್ರೀಡಾಕೂಟ ಆರಂಭವಾದ ದಿನದಿಂದ ಇಲ್ಲಿಯವರೆಗೆ ಭಾರತದ ಕ್ರೀಡಾಪಟುಗಳು ವಿವಿಧ ವಿಭಾಗಗಳಲ್ಲಿ 100 ಪದಕಗಳನ್ನು ಜಯಿಸಿದ್ದಾರೆ. ಪದಕಗಳ ಶತಕ ಬಾರಿಸಿದ ಭಾರತೀಯ ಸ್ಪರ್ಧಿಗಳ ಸಾಧನೆಯನ್ನು ಪ್ರಧಾನಿ ಮೋದಿಯವರು ತಮ್ಮ ಟ್ವಿಟರ್ ಖಾತೆಯಲ್ಲಿ ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧ ಶತಕ ಸಿಡಿಸಿದ ಬೆಂಗಳೂರು ಮೂಲದ ಹುಡುಗ – ವಿಶ್ವಕಪ್ ಮೊದಲ ಪಂದ್ಯದಲ್ಲಿ ಸ್ಟಾರ್ ಆದ ರಚಿನ್ ರವೀಂದ್ರ

ಭಾರತದ ಹೆಮ್ಮೆಯ ಕ್ರೀಡಾಪಟುಗಳು ಇದುವರೆಗೆ 25 ಚಿನ್ನ, 35 ಬೆಳ್ಳಿ, 40 ಕಂಚಿನ ಪದಕ ಸೇರಿದಂತೆ ಒಟ್ಟು 100 ಪದಕಗಳನ್ನು ಏಷ್ಯನ್ ಗೇಮ್ಸ್‌ನಲ್ಲಿ ಗೆದ್ದಿದ್ದಾರೆ. ಕ್ರೀಡಾಕೂಟದ 14ನೇ ದಿನದಂದು ಭಾರತದ ಮಹಿಳಾ ಕಬ್ಬಡಿ ತಂಡ ಚಿನ್ನ ಗೆಲ್ಲುವ ಮೂಲಕ ಪದಕಗಳ ಶತಕವನ್ನು ಪೂರೈಸಿತು. ಭಾರತೀಯ ಸ್ಪರ್ಧಿಗಳ ಸಾಧನೆಯನ್ನು ಪ್ರಧಾನಿ ಮೋದಿಯವರು ತಮ್ಮ ಟ್ವಿಟರ್ ಖಾತೆಯಲ್ಲಿ ಶ್ಲಾಘಿಸಿದ್ದಾರೆ. ಭಾರತದ ಈ ಸಾಧನೆಯನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಶ್ಲಾಘಿಸಿರುವ ಮೋದಿ, ‘ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮಹತ್ವದ ಸಾಧನೆ ಮಾಡಿದೆ. ನಾವು 100 ಪದಕಗಳ ಗಮನಾರ್ಹ ಮೈಲಿಗಲ್ಲನ್ನು ತಲುಪಿರುವುದು ಭಾತೀಯರು ರೋಮಾಂಚನಗೊಳ್ಳುವಂತೆ ಮಾಡಿದೆ. ಭಾರತದ ಈ ಐತಿಹಾಸಿಕ ಮೈಲಿಗಲ್ಲಿಗೆ ಕಾರಣರಾದ ನಮ್ಮ ಅಸಾಧಾರಣ ಕ್ರೀಡಾಪಟುಗಳಿಗೆ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅಕ್ಟೋಬರ್ 10 ರಂದು ನಮ್ಮ ಏಷ್ಯನ್ ಗೇಮ್ಸ್ ತಂಡ ಮತ್ತು ನಮ್ಮ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಲು ನಾನು ಎದುರು ನೋಡುತ್ತಿದ್ದೇನೆ ಎಂದು ತಮ್ಮ ಟ್ವೀಟ್‌ನಲ್ಲಿ ಬರದುಕೊಂಡಿದ್ದಾರೆ.

ಭಾರತದ ಕ್ರೀಡಾ ಪ್ರಾಧಿಕಾರವು ಈ ಐತಿಹಾಸಿಕ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸಿದೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಭಾರತದ ಕ್ರೀಡಾ ಪ್ರಾಧಿಕಾರವು ಏಷ್ಯನ್ ಗೇಮ್ಸ್ನಲ್ಲಿ ಭಾರತವು ತನ್ನ 100 ಪದಕವನ್ನು ಪಡೆಯುತ್ತಿದ್ದಂತೆ ಇತಿಹಾಸವನ್ನು ನಿರ್ಮಿಸಲಾಗಿದೆ. ಟೀಮ್ ಇಂಡಿಯಾ ಸಾಧನೆಯಲ್ಲಿ ತೊಡಗಿಸಿಕೊಂಡಿರುವ ನಮ್ಮ ಕ್ರೀಡಾಪಟುಗಳ ಕನಸುಗಳ ಶಕ್ತಿ, ಸಮರ್ಪಣೆ ಮತ್ತು ತಂಡದ ಕೆಲಸಗಳಿಗೆ ಇದು ಸಾಕ್ಷಿಯಾಗಿದೆ. ಈ ಸಾಧನೆಯು ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಲಿ. ಕಠಿಣ ಪರಿಶ್ರಮ ಮತ್ತು ಉತ್ಸಾಹದಿಂದ ಏನು ಸಾಧ್ಯ ಎಂಬುದನ್ನು ಇದು ತೋರಿಸುತ್ತದೆ ಎಂದು ಬರೆದುಕೊಂಡಿದೆ.

ಇಂಡೋನೇಷ್ಯಾದಲ್ಲಿ ಕಳೆದ ಆವೃತ್ತಿಯಲ್ಲಿ ಭಾರತ 70 ಪದಕಗಳನ್ನು ಗೆದ್ದಿತ್ತು. ಅಲ್ಲಿ ದೇಶದ ಕ್ರೀಡಾಪಟುಗಳು 16 ಚಿನ್ನ, 23 ಬೆಳ್ಳಿ ಮತ್ತು 31 ಕಂಚಿನ ಪದಕಗಳನ್ನು ಗೆದ್ದಿದ್ದರು.

Sulekha