ಪಾಪಿ ಪಾಕ್‌ಗೆ ಗುನ್ನಾ! – ಭಾರತದ ಅಬ್ಬರಕ್ಕೆ ಶತ್ರು ಉಡೀಸ್!
ಆಪರೇಷನ್ ಪಾಕ್ ಹೇಗಿತ್ತು?

ಪಾಪಿ ಪಾಕ್‌ಗೆ ಗುನ್ನಾ! – ಭಾರತದ ಅಬ್ಬರಕ್ಕೆ ಶತ್ರು ಉಡೀಸ್!ಆಪರೇಷನ್ ಪಾಕ್ ಹೇಗಿತ್ತು?

ಪೂಂಚ್​ನಲ್ಲಿ ಕದನ ವಿರಾಮ ಉಲ್ಲಂಘಿಸಿದ್ದ ಪಾಕ್​ ಸೈನಿಕರಿಗೆ ಭಾರತೀಯ ಸೇನೆ ಪ್ರತ್ಯುತ್ತರ ಕೊಟ್ಟಿದೆ, ಇದರ ಪರಿಣಾಮ ಹಲವು ಪಾಕ್ ಸೈನಿಕರು ಹತರಾಗಿದ್ದಾರೆ. ಭಾರತದ ಗಡಿಯಲ್ಲಿರುವ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ತನ್ನ ದುಷ್ಕೃತ್ಯಗಳನ್ನು ನಿಲ್ಲಿಸುತ್ತಿಲ್ಲ, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯ ಮೇಲೆ ಕದನ ವಿರಾಮ ಉಲ್ಲಂಘಿಸಿ ಗುಂಡು ಹಾರಿಸಿದ್ದಾರೆ. ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆಯು ಸೂಕ್ತ ಪ್ರತ್ಯುತ್ತರ ನೀಡಿತು, ಇದರಲ್ಲಿ ಹೆಚ್ಚಿನ ಸಂಖ್ಯೆಯ ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದರು. ಭದ್ರತಾ ಅಧಿಕಾರಿಗಳು ಈ ಮಾಹಿತಿಯನ್ನು ನೀಡಿದ್ದಾರೆ.

 

ಪೂಂಚ್​ನಲ್ಲಿ ಕದನ ವಿರಾಮ ಉಲ್ಲಂಘಿಸಿದ್ದ ಪಾಕ್​ ಸೈನಿಕರನ್ನ ಭಾರತೀಯ ಸೇನೆ ಪಂಚರ್ ಮಾಡಿದೆ. ಇದರ ಪರಿಣಾಮ ಹಲವು ಪಾಕ್ ಸೈನಿಕರು ಹತರಾಗಿದ್ದಾರೆ. ಭಾರತದ ಗಡಿಯಲ್ಲಿರುವ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ತನ್ನ ದುಷ್ಕೃತ್ಯಗಳನ್ನು ನಿಲ್ಲಿಸುತ್ತಿಲ್ಲ, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯ ಮೇಲೆ ಕದನ ವಿರಾಮ ಉಲ್ಲಂಘಿಸಿ ಗುಂಡು ಹಾರಿಸಿದ್ದಾರೆ. ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆಯು ಸೂಕ್ತ ಪ್ರತ್ಯುತ್ತರ ನೀಡಿದ್ದು, ಇದರಲ್ಲಿ ಹೆಚ್ಚಿನ ಸಂಖ್ಯೆಯ ಪಾಕಿಸ್ತಾನಿ ಸೈನಿಕರು ಫಿನಿಶ್ ಆಗಿದ್ದಾರೆ.

ಪಾಕಿಸ್ತಾನದಲ್ಲಿ ಎಷ್ಟು ಸಾವು ನೋವು ಆಗಿದೆ ಅನ್ನೋದು ತಿಳಿದು  ಬಂದಿಲ್ಲ.. ಆದರೆ ಶತ್ರು ಪಡೆಗಳು ಭಾರೀ ನಷ್ಟ ಅನುಭವಿಸಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಭಾರತೀಯ ಸೇನೆಯು ಈ ಮಾಹಿತಿಯನ್ನು ದೃಢಪಡಿಸಿಲ್ಲ ಅಥವಾ ನಿರಾಕರಿಸಿಲ್ಲ. ಜಮ್ಮು ಜಿಲ್ಲೆಯ ಅಖ್ನೂರ್ ಸೆಕ್ಟರ್‌ನ ನಿಯಂತ್ರಣ ರೇಖೆಯ ಬಳಿ ಶಂಕಿತ ಉಗ್ರರು ನಡೆಸಿದ ಐಇಡಿ ಸ್ಫೋಟದಲ್ಲಿ ಕ್ಯಾಪ್ಟನ್ ಸೇರಿದಂತೆ ಇಬ್ಬರು ಭಾರತೀಯ ಸೇನಾ ಸಿಬ್ಬಂದಿ ಸಾವನ್ನಪ್ಪಿದ ಒಂದು ದಿನದ ನಂತರ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫೆಬ್ರವರಿ 25, 2021 ರಂದು ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಒಪ್ಪಂದವನ್ನು ನವೀಕರಿಸಿದ ನಂತರ ಎಲ್‌ಒಸಿಯಲ್ಲಿ ಕದನ ವಿರಾಮ ಉಲ್ಲಂಘನೆಯ ಘಟನೆಗಳು ಬಹಳ ಕಡಿಮೆ ದಾಖಲಾಗಿವೆ. ಪಾಕಿಸ್ತಾನಿ ಸೇನಾ ಅಧಿಕಾರಿಯೊಬ್ಬರು ಪಾಕ್‌ನ ಮೃತ ಸೈನಿಕರಿಗೆ ಗೌರವ ಸಲ್ಲಿಸುತ್ತಿರುವ ವೀಡಿಯೊ  ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತಿದೆ. ಆದ್ರೆ ಈ ವೀಡಿಯೊದಲ್ಲಿ ದಿನಾಂಕವನ್ನು ಉಲ್ಲೇಖಿಸಲಾಗಿಲ್ಲ. ಅಧಿಕಾರಿಗಳ ಪ್ರಕಾರ, ಕಳೆದ ವಾರದಿಂದ ಗಡಿಯುದ್ದಕ್ಕೂ ಶತ್ರುಗಳ ಚಟುವಟಿಕೆ ಹೆಚ್ಚಾಗಿದ್ದು, ಇದರಿಂದಾಗಿ ಎಲ್‌ಒಸಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಈ ವರ್ಷ ಇದು ಮೊದಲ ಕದನ ವಿರಾಮ ಉಲ್ಲಂಘನೆಯಾಗಿದ್ದು, ಐದು ದಿನಗಳಲ್ಲಿ ನಾಲ್ಕನೇ ಗಡಿಯಾಚೆಗಿನ ಘಟನೆಯಾಗಿದೆ. ಫೆಬ್ರವರಿ 11ರಂದು ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನ ಲಲೇಲಿಯಲ್ಲಿ ನಡೆದ ಐಇಡಿ ಸ್ಫೋಟದಲ್ಲಿ ಇಬ್ಬರು ಸೈನಿಕರು ಪ್ರಾಣ ಕಳೆದುಕೊಂಡಿದ್ದರು. ಎಂದು ಭಾರತೀಯ ಸೇನೆ ತಿಳಿಸಿದೆ. ಅಖ್ನೂರ್ ಸೆಕ್ಟರ್‌ನ ಲಲೇಲಿಯಲ್ಲಿ ಬೇಲಿ ಗಸ್ತು ತಿರುಗುತ್ತಿದ್ದಾಗ ಐಇಡಿ ಸಾಧನ ಸ್ಫೋಟ ವರದಿಯಾಗಿದ್ದು, ಇದರ ಪರಿಣಾಮವಾಗಿ ಇಬ್ಬರು ಮೃತಪಟ್ಟಿದ್ದಾರೆ.. ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಕಾಶ್ಮೀರದ ಭಟ್ಟಲ್ ಪ್ರದೇಶದ ಫಾರ್ವರ್ಡ್ ಪೋಸ್ಟ್ ಬಳಿ 3.50ರ ಸುಮಾರಿಗೆ ಪ್ರಬಲ ಸ್ಫೋಟ ಸಂಭವಿಸಿದಾಗ ಸೈನಿಕರು ಗಸ್ತು ತಿರುಗುತ್ತಿದ್ದ ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಷ್ಟರಲ್ಲಿ ಇಬ್ಬರು ಸೈನಿಕರು ಮೃತಪಟ್ಟಿದ್ದಾರೆ. ಒಟ್ನಲ್ಲಿ ಪಾಕ್ ಅಟ್ಟಹಾಸಕ್ಕೆ ಭಾರತ ಪ್ರತ್ಯತ್ತರ ಕೊಟ್ಟಿದ್ದು, ಪಾಕ್ ಸೇನೆ ಉಡೀಸ್ ಆಗಿದೆ.

Kishor KV

Leave a Reply

Your email address will not be published. Required fields are marked *