ಅಂಜನಾದ್ರಿ ಬೆಟ್ಟದ 575 ಮೆಟ್ಟಿಲು ಹತ್ತಿ ಆಂಜನೇಯ ದರ್ಶನ ಪಡೆದ ಇಶಾಂತ್ ಶರ್ಮಾ

ಹಂಪಿ ಬಳಿ ಇರುವ, ರಾಮಾಯಣ ಕಾಲದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಅಂಜನಾದ್ರಿ ಬೆಟ್ಟಕ್ಕೆ ಟೀಂ ಇಂಡಿಯಾ ಕ್ರಿಕೆಟಿಗ ಇಶಾಂತ್ ಶರ್ಮಾ ಭೇಟಿ ನೀಡಿದ್ದಾರೆ. ಆಂಜನೇಯ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟಕ್ಕೆ ಶುಕ್ರವಾರ (ಜ.9) ಇಶಾಂತ್ ಶರ್ಮಾ ಭೇಟಿ ನೀಡಿ, ಹನುಮನ ದರ್ಶನ ಪಡೆದರು. ಮುಂಬರುವ ಐಪಿಎಲ್ ಟೂರ್ನಿಗೂ ಮುನ್ನ ಟೀಂ ಇಂಡಿಯಾ ಇಶಾಂತ್ ಶರ್ಮಾ ಬರೋಬ್ಬರಿ 575 ಮೆಟ್ಟಿಲುಗಳನ್ನು ಏರಿ ಹನುಮನ ದರ್ಶನ ಪಡೆದುಕೊಂಡಿದ್ದಾರೆ.
ಗೆಳೆಯನ ಜೊತೆಗೆ ಬಂದಿದ್ದ ಇಶಾಂತ್ ಶರ್ಮಾ ಅವರು 575 ಮೆಟ್ಟಿಲುಗಳನ್ನು ಏರುವ ಮೂಲಕ ಹನುಮನ ದರ್ಶನ ಪಡೆದುಕೊಂಡು ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ಬೆಟ್ಟದ ಮೇಲಿಂದ ಹಂಪಿಯ ಸೌಂದರ್ಯ ಹಾಗೂ ಬೆಟ್ಟಗಳ ಸಾಲುಗಳ ಪರಿಸರವನ್ನು ಕಣ್ತುಂಬಿಕೊಂಡು ಫೋಟೋ ಕ್ಲಿಕ್ಕಿಸಿಕೊಂಡರು. ಅಭಿಮಾನಿಗಳು ಸಹ ಇಶಾಂತ್ ಶರ್ಮಾ ಅವರ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು.
ಇದನ್ನೂ ಓದಿ:HITಮ್ಯಾನ್-KING ಗ್ರೇಟ್ ಫಾರ್ಮ್ – NZ ಸರಣಿಗೆ ಶ್ರೇಯಸ್ ಫಿಟ್ & ಫೈನ್
ಆಂಧ್ರಪ್ರದೇಶ ವಿರುದ್ಧ ದೆಹಲಿ ತಂಡಗಳ ನಡುವಿನ ವಿಜಯ್ ಹಜಾರೆ ಟೂರ್ನಿ ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಡೆಯಬೇಕಿತ್ತು. ಕೊನೆಕ್ಷಣದವರೆಗೂ ಚಿನ್ನಸ್ವಾಮಿಯಲ್ಲಿ ಪಂದ್ಯ ನಡೆಯಲಿದೆ ಎನ್ನಲಾಗುತ್ತಿತ್ತು. ಆದರೆ ಕೊನೆಗೆ ಈ ಪಂದ್ಯಗಳು ಬೆಂಗಳೂರು ವಿಮಾನ ನಿಲ್ದಾಣ ಬಳಿ ಇರುವ ಬಿಸಿಸಿಐ ನಿರ್ಮಾಣ ಮಾಡಿರುವ ಸೆಂಟರ್ ಆಫ್ ಎಕ್ಸೆಲೆನ್ಸ್ ಮೈದಾನದಲ್ಲಿ ನಡೆದಿತ್ತು.
ಕಳೆದ ವರ್ಷ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೆಗಾ ಹರಾಜಿನಲ್ಲಿ ಇಶಾಂತ್ ಶರ್ಮಾ ಅವರನ್ನು ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು 75 ಲಕ್ಷ ರುಪಾಯಿ ನೀಡಿ ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಇಶಾಂತ್ ಶರ್ಮಾ ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾಗಿದ್ದರು. ಗುಜರಾತ್ ಟೈಟಾನ್ಸ್ ಪರ ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಇಶಾಂತ್ ಶರ್ಮಾ 7 ಪಂದ್ಯಗಳನ್ನಾಡಿ 4 ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿದ್ದರು. ಇದೀಗ ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಮಿಂಚಲು ರೆಡಿಯಾಗಿದ್ದಾರೆ.
ವಿರಾಟ್ ಕೊಹ್ಲಿಯ ಆಪ್ತ ಗೆಳೆಯ ಇಶಾಂತ್ ಶರ್ಮಾ, ಒಂದು ದಶಕಗಳ ಕಾಲ ಟೀಂ ಇಂಡಿಯಾದ ಪ್ರಮುಖ ವೇಗದ ಬೌಲರ್ ಆಗಿ ಗುರುತಿಸಿಕೊಂಡಿದ್ದರು. ಆದರೆ 2021ರ ನವೆಂಬರ್‌ನಿಂದೀಚೆಗೆ ಡೆಲ್ಲಿ ಮೂಲದ ಇಶಾಂತ್ ಶರ್ಮಾ ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ. ಇದೀಗ ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡಲು ಎದುರು ನೋಡುತ್ತಿದ್ದಾರೆ

ನೋಡಿರಿ

