ಕೆನಾಡದಲ್ಲಿ ಗುಂಡಿನ ದಾಳಿಗೆ ಭಾರತೀಯ ವಿದ್ಯಾರ್ಥಿನಿ ಬಲಿ – ಆಕಸ್ಮಿಕವಾಗಿ ತಗುಲಿದ ಗುಂಡು

ಕೆನಾಡದಲ್ಲಿ ಗುಂಡಿನ ದಾಳಿಗೆ ಭಾರತೀಯ ವಿದ್ಯಾರ್ಥಿನಿ ಬಲಿ – ಆಕಸ್ಮಿಕವಾಗಿ ತಗುಲಿದ ಗುಂಡು

ಕೆನಡಾದಲ್ಲಿ  ನಡೆದ ಗುಂಡಿನ ದಾಳಿಯೊಂದರಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ  ಮೃತಪಟ್ಟಿದ್ದಾರೆ. ಅಪರಿಚಿತರ ನಡುವೆ ನಡೆದ ಗುಂಡಿನ ದಾಳಿಯ ವೇಳೆ ಅಕಸ್ಮಾತಾಗಿ ಗುಂಡು ತಗುಲಿ, ಭಾರತೀಯ ವಿದ್ಯಾರ್ಥಿನಿ ಹರ್​ಸಿಮ್ರತ್ ರಾಂಧಾವಾ ಅನ್ಯಾಯವಾಗಿ ಮೃತಪಟ್ಟಿದ್ದಾರೆ. ಒಂಟೋರಿಯೋದ ಹ್ಯಾಮಿಲ್ಟನ್​​ನಲ್ಲಿರುವ ಮೊಹಾಕ್ ಕಾಲೇಜಿನಲ್ಲಿ ಅಧ್ಯಯನ ನಡೆಸುತ್ತಿದ್ದ ಹರ್​ಸಿಮ್ರತ್ ರಾಂಧಾವಾ ಬಸ್ಸು ನಿಲ್ದಾಣದಲ್ಲಿ ಕಾಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

ಭಾರತೀಯ ವಿದ್ಯಾರ್ಥಿನಿಯ ಸಾವಿನಿಂದ ಬಹಳ ದುಃಖವಾಗಿದೆ ಎಂದು ಟೊರೆಂಟೊದಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿದೆ.

ಸ್ಥಳಿಯ ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಗುಂಡಿನ ದಾಳಿ ಪ್ರಕರಣದಲ್ಲಿ ಭಾರತೀಯ ವಿದ್ಯಾರ್ಥಿನಿ ಅಮಾಯಕಳಾಗಿದ್ದಾಳೆ. ಎರಡು ವಾಹನಗಳ ಸವಾರರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾಳೆ. ವಿದ್ಯಾರ್ಥಿನಿ ಸಾವಿನ ಮತ್ತು ಗುಂಡಿನ ದಾಳಿಯ ಸಂಬಂಧ ತನಿಖೆ ನಡೆಸಲಾಗುತ್ತಿದೆ. ನಾವು ವಿಧ್ಯಾರ್ಥಿನಿಯ ಕುಟುಂಬದವರೊಂದಿಗೆ ಸಂಪರ್ಕದಲ್ಲಿದ್ದೇವೆ. ಅವರಿಗೆ ಎಲ್ಲ ರೀತಿಯ ನೆರವು ನೀಡಲಾಗುವುದು. ಈ ಕಷ್ಟದ ಸಮಯದಲ್ಲಿ ಅವರ ಜೊತೆಗೆ ನಾವಿದ್ದೇವೆ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ.

 

Kishor KV

Leave a Reply

Your email address will not be published. Required fields are marked *