3ನೇ ಟಿ20 ಪಂದ್ಯದಲ್ಲಿ ಆಸೀಸ್ ವಿರುದ್ಧ ಗೆದ್ದ ಭಾರತ ಮಹಿಳಾ ತಂಡ

ಆಸ್ಟ್ರೇಲಿಯಾ ವಿರುದ್ಧ ನಡೆದಿದ್ದ 3ನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ ಗೆಲುವು ಸಾಧಿಸಿದೆ. ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆದಿದ್ದ ಮೂರನೇ ಮತ್ತು ಅಂತಿಮ ಪಂದ್ಯದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ಗನಲ್ಲಿ ಅದ್ಭುತ ಪ್ರದರ್ಶನ ನೀಡಿದ ಭಾರತ 17 ರನ್ಗಳಿಂದ ಗೆಲುವು ಸಾಧಿಸಿತು. ಇದರೊಂದಿಗೆ ಆಸ್ಟ್ರೇಲಿಯಾ ನೆಲದಲ್ಲಿ 10 ವರ್ಷಗಳ ಬಳಿಕ ಮೊದಲ ಬಾರಿಗೆ ದ್ವಿಪಕ್ಷಿಯ ಸರಣಿಯನ್ನು ಗೆದ್ದುಕೊಂಡಿತು. ಇದಕ್ಕೂ ಮೊದಲು ಭಾರತ ಇಲ್ಲಿ 2016ರಲ್ಲಿ ಆಡಿದ್ದ ಟಿ20 ಸರಣಿಯಲ್ಲಿ 2-1 ರಿಂದ ಗೆಲುವು ಸಾಧಿಸಿತ್ತು.
ಈ ಪಂದ್ಯದಲ್ಲಿ ಸ್ಮೃತಿ ಮತ್ತು ಜೆಮಿಮಾ ಅವರ ಅರ್ಧಶತಕಗಳ ಬಲದಿಂದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಆಸ್ಟ್ರೇಲಿಯಾ 9 ವಿಕೆಟ್ಗಳಿಗೆ 159 ರನ್ಗಳಿಗೆ ಸೀಮಿತವಾಯಿತು. ಅತ್ಯುತ್ತಮ ಪ್ರದರ್ಶನಕ್ಕಾಗಿ ಸ್ಮೃತಿ ಮಂಧಾನ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಯಿತು. ಇದೀಗ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ODI ಸರಣಿ ನಡೆಯಲಿದೆ.
ಈ ಪಂದ್ಯದಲ್ಲಿ, ಟಾಸ್ ಗೆದ್ದ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಮ್ ಇಂಡಿಯಾ 19 ರನ್ಗಳಿಗೆ ಶೆಫಾಲಿ ವರ್ಮಾ ಅವರ ವಿಕೆಟ್ ಕಳೆದುಕೊಂಡಿತು. ಬಿಳಿಕ ಸ್ಮೃತಿ ಮಂಧಾನ ಮತ್ತು ಜೆಮಿಮಾ ರೊಡ್ರಿಗಸ್ ತಂಡದ ಇನ್ನಿಂಗ್ಸ್ ಸುಧಾರಿಸಿದರು. ಈ ಪಂದ್ಯದಲ್ಲಿ, ಸ್ಮೃತಿ ಮಂಧಾನ 55 ಎಸೆತಗಳಲ್ಲಿ 8 ಬೌಂಡರಿ ಮತ್ತು 3 ಸಿಕ್ಸರ್ಗಳೊಂದಿಗೆ 82 ರನ್ಗಳ ಅದ್ಭುತ ಇನ್ನಿಂಗ್ಸ್ ಗಳಿಸಿದರೆ, ಜೆಮಿಮಾ ರೊಡ್ರಿಗಸ್ 46 ಎಸೆತಗಳಲ್ಲಿ 59 ರನ್ ಗಳಿಸಿದರು. ಈ ಇಬ್ಬರು 121ರನ್ ಗಳ ಜೊತೆಯಾಟವಾಡಿದರು. ರಿಚಾ ಘೋಷ್ ಸಹ 18 ರನ್ ಗಳಿಸಿದರು. ಇದರಿಂದಾಗಿ ತಂಡವು ಸವಾಲಿನ ಹಂತವನ್ನು ತಲುಪಲು ಸಾಧ್ಯವಾಯಿತು. ಆಸ್ಟ್ರೇಲಿಯಾ ಮಹಿಳಾ ತಂಡದ ಪರ ಬೌಲಿಂಗ್ನಲ್ಲಿ, ಅನ್ನಾಬೆಲ್ಲೆ ಸದರ್ಲ್ಯಾಂಡ್ 2 ವಿಕೆಟ್ಗಳನ್ನು ಪಡೆದರೆ, ಸೋಫಿ ಮೊಲಿನ್ಯೂಕ್ಸ್ ಮತ್ತು ಕಿಮ್ ಗಾರ್ತ್ ತಲಾ 1 ವಿಕೆಟ್ ಪಡೆದರು.

ನೋಡಿರಿ

