ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ಸ್ವೀಕಾರ

ಎನ್‌ಡಿಎ ಅಭ್ಯರ್ಥಿ, ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಇಂದು ಭಾರತದ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಿದ್ದಾರೆ.
ಇದನ್ನೂ ಓದಿ: ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನಿಗೆ ನೋಟಿಸ್
ಕಳೆದ ಮಂಗಳವಾರ (ಸೆ.9) ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ 452 ಮತಗಳಿಸುವ ಮೂಲಕ ಸಿ.ಪಿ ರಾಧಾಕೃಷ್ಣನ್ ಗೆಲವು ಸಾಧಿಸಿದ್ದರು. ಇಂದು ಬೆಳಗ್ಗೆ 10ಗಂಟೆಗೆ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಿದ್ದಾರೆ.
ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್, ನಿರ್ಗಮಿತ ರಾಜ್ಯಪಾಲರಾದ ಜಗದೀಪ್ ಧನ್ಕರ್, ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಪಂಜಾಬ್ ರಾಜ್ಯಪಾಲ ಮತ್ತು ಚಂಡೀಗಢ ಆಡಳಿತಾಧಿಕಾರಿ ಗುಲಾಬ್ ಚಂದ್ ಕಟಾರಿಯಾ, ಜಾರ್ಖಂಡ್ ರಾಜ್ಯಪಾಲ ಸಂತೋಷ್ ಗಂಗ್ವಾರ್ ಮತ್ತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ನೋಡಿರಿ

