ಮಲೆನಾಡಿನ ಪ್ರಯಾಣಿಕರಿಗೆ ಶಾಕ್‌ ಕೊಟ್ಟ ಇಂಡಿಗೋ! – ಮೇ 1ರಿಂದ ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸೇವೆ ಸ್ಥಗಿತ

ಮಲೆನಾಡಿನ ಪ್ರಯಾಣಿಕರಿಗೆ ಶಾಕ್‌ ಕೊಟ್ಟ ಇಂಡಿಗೋ! – ಮೇ 1ರಿಂದ ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸೇವೆ ಸ್ಥಗಿತ

ರಾಜ್ಯದ ಜನರಿಗೆ ಶಾಕಿಂಗ್‌ ಸುದ್ದಿಯೊಂದಿದೆ. ಶಿವಮೊಗ್ಗದಿಂದ ಬೆಂಗಳೂರು, ಹುಬ್ಬಳ್ಳಿ ಅಲ್ಲದೇ ದೇಶಾದ್ಯಂತ 131 ನಗರಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಇಂಡಿಗೋ ವಿಮಾನ ಸೇವೆಯು ಏಪ್ರಿಲ್ ಅಂತ್ಯಕ್ಕೆ ಕೊನೆಯಾಗುತ್ತಿದೆ. ವಿಮಾನಯಾನ ಸಂಸ್ಥೆ ಇಂಡಿಗೋ ಏಪ್ರಿಲ್ ಅಂತ್ಯಕ್ಕೆ ತನ್ನ ಸೇವೆಯನ್ನು ಸ್ಥಗಿತಗೊಳಿಸುವ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಶ್ರೀ ಗಂಧದಗುಡಿಗೂ ಕೈಕೊಟ್ಟ ಸಂಜನಾ? – ಸೀರಿಯಲ್‌ ಬಿಡೋದಾದ್ರೆ ಒಪ್ಪಿಕೊಳ್ಳುವುದೇಕೆ?

ವಿಮಾನಯಾನ ಸಂಸ್ಥೆ ಇಂಡಿಗೋ ಶಿವಮೊಗ್ಗದಿಂದ ದೇಶದ 131 ನಗರಗಳಿಗೆ ಸಂಪರ್ಕ ಕಲ್ಪಿಸುತ್ತಿತ್ತು. ಇದೀಗ ಶಿವಮೊಗ್ಗದಲ್ಲಿ ಇಂಡಿಗೋ ತನ್ನ ಸೇವೆಯನ್ನು ಅಂತ್ಯಗೊಳಿಸುತ್ತಿದೆ. ಮಾಹಿತಿಯ ಪ್ರಕಾರ, ಇಂಡಿಗೋ ಸಂಸ್ಥೆಯು ಏಪ್ರಿಲ್ 30ರ ವರೆಗಷ್ಟೇ ಟಿಕೆಟ್ ಕಾಯ್ದಿರಿಸಲು ಅವಕಾಶ ನೀಡಿದ್ದು, ಮೇ 1ರಿಂದ ಯಾವುದೇ ಬುಕ್ಕಿಂಗ್ ಲಭ್ಯವಿಲ್ಲ. ಇದು ಅಚ್ಚರಿಗೆ ಕಾರಣವಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

ವಿಮಾನಯಾನ ಸೇವೆ ಸ್ಥಗಿತಗೊಳಿಸುತ್ತಿರುವುದೇಕೆ?

ಇತ್ತೀಚೆಗೆ ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದ ಹಿನ್ನೆಲೆ ಡಿಜಿಸಿಎ (DGCA) ವಿಮಾನಯಾನ ನಿಯಮಗಳನ್ನು ಅತ್ಯಂತ ಕಠಿಣಗೊಳಿಸಿದೆ. ಪೈಲಟ್‌ಗಳ ಕೆಲಸದ ಅವಧಿ ಮತ್ತು ವಿಮಾನಗಳ ನಿರ್ವಹಣೆಗೆ ಸಂಬಂಧಿಸಿದ ಹೊಸ ನಿಯಮಗಳಿಂದಾಗಿ ಇಂಡಿಗೋ ಸಂಸ್ಥೆಗೆ ಪೈಲಟ್‌ಗಳು ಕೊರತೆ ಎದುರಾಗಿದೆ. ಈ ತಾಂತ್ರಿಕ ಕಾರಣದಿಂದಾಗಿ ಸಂಸ್ಥೆಯು ಸಣ್ಣ ನಗರಗಳಿಗೆ ನೀಡುತ್ತಿದ್ದ ಎಟಿಆರ್ ವಿಮಾನ ಸೇವೆಗಳನ್ನು ಕಡಿತಗೊಳಿಸಲು ಮುಂದಾಗಿದೆ ಎನ್ನಲಾಗಿದೆ.

Shwetha M