ಇಂದಿರಾ ಕ್ಯಾಂಟಿನ್‌ನಲ್ಲಿ ಮಾಂಸಾಹಾರ ಸೇವನೆಗೂ ಅವಕಾಶ!

ಇಂದಿರಾ ಕ್ಯಾಂಟಿನ್‌ನಲ್ಲಿ ಮಾಂಸಾಹಾರ ಸೇವನೆಗೂ ಅವಕಾಶ!

ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ರಾಜ್ಯದಲ್ಲಿ ಮತ್ತೆ ಇಂದಿರಾ ಕ್ಯಾಂಟೀನ್​ಗಳಿಗೆ ಮರು ಜೀವ ಸಿಕ್ಕಂತಾಗಿದೆ. ನಿತ್ಯ ಸಾವಿರಾರು ಬಡ ಕೂಲಿ ಕಾರ್ಮಿಕರಿಗೆ, ಶ್ರಮಿಕರಿಗೆ ಕಡಿಮೆ ದರದಲ್ಲಿ ಊಟ ಸಿಗುವಂತೆ ಮಾಡಿದ್ದ ಇಂದಿರಾ ಕ್ಯಾಂಟೀನ್​ನಲ್ಲಿ ಇನ್ನುಮುಂದೆ ಮೊಟ್ಟೆ ನೀಡುವ ಬಗ್ಗೆಯೂ ಪ್ರಸ್ತಾಪವಾಗಿದೆ. ಇದೀಗ ಇಂದಿರಾ ಕ್ಯಾಂಟಿನ್‌ನಲ್ಲಿ ಮಾಂಸಾಹಾರ ಸೇವನೆಗೂ ಅವಕಾಶ ಇದೆ ಎಂದು ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ.

ಇದನ್ನೂ ಓದಿ: ಶಕ್ತಿ ಯೋಜನೆಯ ಸ್ಮಾರ್ಟ್‌ ಕಾರ್ಡ್‌ ಅರ್ಜಿ ಸಲ್ಲಿಕೆಗೆ ಡೇಟ್‌ ಫಿಕ್ಸ್‌! – ಅರ್ಜಿ ಸಲ್ಲಿಸುವ ವಿಧಾನ ಹೇಗೆ?

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಸಚಿವ ಡಾ.ಎಚ್.ಸಿ. ಮಹದೇವಪ್ಪ, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಬಡಜನರು ಹಾಗೂ ಕಾರ್ಮಿಕರಿಗಾಗಿ ಇಂದಿರಾ ಕ್ಯಾಂಟೀನ್‌ ಆರಂಭಿಸಲಾಗಿದೆ. ಇಂದಿರಾ ಕ್ಯಾಂಟೀನ್‌ನಲ್ಲಿ ಸರ್ಕಾರದಿಂದ ಸಸ್ಯಾಹಾರದ ಊಟ ಕೊಡುತ್ತೇವೆ. ಇಂದಿರಾ ಕ್ಯಾಂಟೀನ್‌ನಲ್ಲಿ ಮಾಂಸಾಹಾರ ಪೂರೈಕೆ ವಿಚಾರವಾಗಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಆದರೆ ಹೊರಗಡೆಯಿಂದ ಮಾಂಸಾಹಾರ (ಕಬಾಬ್‌, ಚಿಕನ್‌ ಸಾಂಬಾರ್ ಇತ್ಯಾದಿ..) ತಂದು ಇಂದಿರಾ ಕ್ಯಾಂಟೀನ್‌ನಲ್ಲಿ ತಿನ್ನಬಹುದು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಇನ್ನಷ್ಟು ಇಂದಿರಾ ಕ್ಯಾಂಟೀನ್ ಶುರು ಮಾಡುವ ಪ್ರಸ್ತಾಪ ಇದೆ. ಊಟ ಕೊಡಬೇಕು ಅಂತ ಇದೆ. ಆದರೆ, ಮಾಂಸಾಹಾರ ನೀಡುವ ಬಗ್ಗೆ ಸದ್ಯಕ್ಕೆ ಚಿಂತನೆ ಇಲ್ಲ ಎಂದು ಮಾಹಿತಿ ನೀಡಿದ್ದಾರೆ.

suddiyaana