ರಾಜ್ಯಸಭೆಗೆ ಕನ್ನಡತಿ ಡಾ.ಸುಧಾಮೂರ್ತಿ ನಾಮ ನಿರ್ದೇಶನ – ಮಹಿಳಾ ದಿನಾಚರಣೆಯಂದೇ ಗಿಫ್ಟ್ ಕೊಟ್ಟ ಮೋದಿ
ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ ಹಾಗೂ ಇನ್ಫೋಸಿಸ್ ಫೌಂಡೇಷನ್‌ನ ಮಾಜಿ ಅಧ್ಯಕ್ಷೆ, ಸಮಾಜಸೇವಕಿ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಮಹಿಳಾ ದಿನಾಚರಣೆಯಂದೇ ಬಿಜೆಪಿ ಪಕ್ಷದಿಂದ ಅವರನ್ನು ರಾಜ್ಯಸಭಾ ಸದಸ್ಯರಾಗಿ ನಾಮ ನಿರ್ದೇಶನ ಮಾಡಲಾಗಿದೆ.
ಇದನ್ನೂ ಓದಿ:ರಾಜ್ಯ ರಾಜಧಾನಿಗೂ ತಟ್ಟಿದ ಬರದ ಬರೆ – ನೀರು ದುರ್ಬಳಕೆ ಮಾಡಿದ್ರೆ ಬೀಳುತ್ತೆ 5,000 ರೂ. ದಂಡ!
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಸುಧಾಮೂರ್ತಿರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ. ಸಮಾಜ ಸೇವೆ, ದಾನ, ಶಿಕ್ಷಣ ಕ್ಷೇತ್ರದಲ್ಲಿ ಸುಧಾಮೂರ್ತಿ ಕೊಡುಗೆ ಅಪಾರ, ಸ್ಫೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಸುಧಾಮೂರ್ತಿ ಅವರ ಉಪಸ್ಥಿತಿ ನಮ್ಮ ನಾರಿಶಕ್ತಿಗೆ ಸಾಕ್ಷಿ, ಸುಧಾಮೂರ್ತಿ ಅವರಿಗೆ ಪಾರ್ಲಿಮೆಂಟ್ ನಾಮನಿರ್ದೇಶಿತ ಸದಸ್ಯರಾಗಿ ಕಾರ್ಯನಿರ್ವಹಣೆಗೆ ಶುಭ ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ರಾಜ್ಯಸಭಾ ಸದಸ್ಯರಾಗಿ ನಾಮ ನಿರ್ದೇಶನಗೊಂಡ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸುಧಾಮೂರ್ತಿ ಅವರು, “ನಾನು ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಈ ವಿಚಾರ ಈಗ ತಿಳಿಯಿತು. ರಾಜಕೀಯಕ್ಕೆ ಬರಬೇಕು ಎಂದು ಕೊಂಡಿರಲಿಲ್ಲ. ಸಮಾಜಕ್ಕಾಗಿ ಸದಾ ಕೆಲಸ ಮಾಡುತ್ತೇನೆ” ಎಂದು ಹೇಳಿದರು.