ರಜತ್‌ ಕಿಶನ್ ರೀಲ್ಸ್‌ ಕಿತಾಪತಿ! – ಮತ್ತೆ ಅರೆಸ್ಟ್‌ ಆಗ್ತಾರಾ ಬಿಗ್‌ಬಾಸ್‌ ಮಾಜಿ ಸ್ಪರ್ಧಿ?

ರಜತ್‌ ಕಿಶನ್ ರೀಲ್ಸ್‌ ಕಿತಾಪತಿ! – ಮತ್ತೆ ಅರೆಸ್ಟ್‌ ಆಗ್ತಾರಾ ಬಿಗ್‌ಬಾಸ್‌ ಮಾಜಿ ಸ್ಪರ್ಧಿ?

ಸದಾ ವಿವಾದಗಳಿಂದಲೇ ಸದ್ದು ಮಾಡ್ತಿರುವ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ರಜತ್‌ ಕಿಶನ್‌ಗೆ ಮತ್ತೆ ಕಾನೂನು ಸಂಕಷ್ಟ ಶುರುವಾಗಿದೆ. ಇತ್ತೀಚೆಗೆ ಪೆಟ್ರೋಲ್ ಬಾಂಬ್ ಮಾದರಿಯ ವಸ್ತು ಬ್ಲಾಸ್ಟ್ ಆಗುವ ದೃಶ್ಯ ಹೊಂದಿರುವ ರೀಲ್ಸ್​​ ಮಾಡಿರುವ ರಜತ್‌ ವಿರುದ್ದ ದೂರು ದಾಖಲಾಗಿದೆ. ಬುಜ್ಜಿ ವಿರುದ್ಧ ಕನಕಪುರದ ಕಗ್ಗಲೀಪುರ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಡಿವೈಡರ್ ಹಾರಿ SUV ಕಾರಿಗೆಗೆ ಪಿಕಪ್ ಡಿಕ್ಕಿ – 15 ಮಂದಿ ಸ್ಥಳದಲ್ಲೇ ಸಾವು.. 30ಕ್ಕೂ ಹೆಚು ಮಂದಿಗೆ ಗಾಯ!

ರಜತ್ ಕೆಲ ದಿನಗಳ ಹಿಂದಷ್ಟೆ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಒಂದನ್ನು ಅಪ್​ಲೋಡ್ ಮಾಡಿದ್ದರು. ಬೈಕ್​​ನಲ್ಲಿ ಸ್ಟೈಲ್ ಆಗಿ ಬರುವ ರಜತ್ ಹಿಂದೆ ಪೆಟ್ರೋಲ್ ಬಾಂಬ್ ಬ್ಲಾಸ್ಟ್ ಆಗುವ ದೃಶ್ಯ ಆ ರೀಲ್ಸ್​​ನಲ್ಲಿತ್ತು. ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗ್ತಿದ್ದಂತೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ತಮ್ಮ ರೀಲ್ಸ್​​ಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ರೀಲ್ಸ್ ಡಿಲೀಟ್ ಮಾಡಿದ್ದ ರಜತ್, ನಿನ್ನೆಯೇ ಈ ಬಗ್ಗೆ ಕ್ಷಮೆ ಕೇಳಿ ವಿಡಿಯೋ ಒಂದನ್ನು ಸಹ ಅಪ್​ಲೋಡ್ ಮಾಡಿದ್ದರು. ಸುರಕ್ಷತಾ ಕ್ರಮಗಳನ್ನು ಬಳಸಿಯೇ ಆ ಬ್ಲಾಸ್ಟ್ ಮಾಡಿದ್ದಾಗಿ, ಹಾಗೂ ಸ್ಥಳೀಯರ ಅನುಮತಿ ಪಡೆದೇ ಬ್ಲಾಸ್ಟ್ ಮಾಡಿದ್ದಾಗಿ ಹೇಳಿದ್ದರು. ಅಲ್ಲದೇ, ರಜತ್‌ ತನ್ನ ರೀಲ್ಸ್‌ನಲ್ಲಿ ರಸ್ತೆ ಸುರಕ್ಷತಾ ಕ್ರಮಗಳನ್ನ ಪಾಲಿಸಿ. ವಾಹನ ಚಲಾಯಿಸುವಾಗ ತಪ್ಪದೆ ಹೆಲ್ಮೆಟ್ ಧರಿಸಿ. ಧೂಮಪಾನ ಆರೋಗ್ಯಕ್ಕೆ ಹಾನಿಕರ. ಈ ವಿಡಿಯೋ ಧೂಮಪಾನವನ್ನ ಪ್ರಮೋಟ್ ಮಾಡುವುದಿಲ್ಲ ಎಂಬ ಡಿಸ್‌ಕ್ಲೈಮರ್‌ನ ತಮ್ಮ ರೀಲ್ಸ್‌ ಜೊತೆಗೆ ಹಾಕಿದ್ದರು. ಇದೀಗ ರಜತ್‌ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರು ದಕ್ಷಿಣ ತಾಲ್ಲೂಕು, ಕನಕಪುರ ರಸ್ತೆಯ ವಡೇರಹಳ್ಳಿಯ ಸಾರ್​ವಜನಿಕ ರಸ್ತೆಯಲ್ಲಿ ರಜತ್ ಹಾಗೂ ತಂಡ ರೀಲ್ಸ್ ಶೂಟ್ ಮಾಡಿದ್ದರು. ಪೆಟ್ರೋಲ್ ಬಾಂಬ್ ಬಳಸಿ ಬ್ಲಾಸ್ಟ್ ಸಹ ಮಾಡಲಾಗಿತ್ತು. ಕಗ್ಗಲಿಪುರ ಪೊಲೀಸರು ಈ ಘಟನೆಗೆ ಸಂಬಂಧಿಸದಂತೆ ರಜತ್ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಡಿವೈಎಸ್​​ಪಿ ಶ್ರೀನಿವಾಸ್, ರಜತ್ ಅವರು ಸಾರ್ವಜನಿಕ ಶಾಂತಿಗೆ ಭಂಗ, ಅನುಚಿತ ವರ್ತನೆ, ರಸ್ತೆ ನಿಯಮ ಉಲ್ಲಂಘನೆ, ಸಾರ್ವಜನಿಕ ಆಸ್ತಿಗೆ ನಷ್ಟ ಮಾಡಿದ್ದಾರೆ. ರಜತ್ ಅವರಿಗೆ ನೊಟೀಸ್ ನೀಡಿ, ವಿಚಾರಣೆ ಮಾಡಲಾಗುವುದು ಎಂದಿದ್ದಾರೆ.

ಈ ಹಿಂದೆ ಬಾಯ್ಸ್ ವರ್ಸಸ್ ಗರ್ಲ್ಸ್’ ಶೋ ಶೂಟಿಂಗ್ ಮಧ್ಯೆ ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ರಜತ್ ಹಾಗೂ ವಿನಯ್ ವಿರುದ್ಧ ಕೇಸ್‌ ದಾಖಲಾಗಿ, ಇಬ್ಬರೂ ಪರಪ್ಪನ ಅಗ್ರಹಾರ ಜೈಲು ಹಫಗಿ ಬಂದಿದ್ದರು. ಇದಾದ ಬಳಿಕ ಮೈಸೂರಿನ ಪಾರಂಪರಿಕ ಕಟ್ಟಡದ ಮುಂದೆ ಫೋಟೋಶೂಟ್ ಮಾಡಿಸಿ ರಜತ್ ಸಂಕಷ್ಟಕ್ಕೆ ಸಿಲುಕಿದ್ದರು. ಇದೀಗ ಮತ್ತೆ ಇನ್ನೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ.

Shwetha M