ವಿಶ್ವದಾದ್ಯಂತ ಯೋಗ ದಿನಾಚರಣೆ ಆಚರಣೆ – ಮೂರು ಲಕ್ಷಕ್ಕೂ ಹೆಚ್ಚು ಜನರೊಂದಿಗೆ ಯೋಗ ಮಾಡಿದ ಪ್ರಧಾನಿ ಮೋದಿ

ಇಂದು ದೇಶಾದ್ಯಂತ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ. ಭಾರತ ಮಾತ್ರವಲ್ಲದೇ, ಜಗತ್ತಿನಾದ್ಯಂತ ಸಾಮೂಹಿಕ ಯೋಗ ಕಾರ್ಯಕ್ರಮಗಳು ನಡೆಯುತ್ತಿವೆ. ಅದರಂತೆ ವಿಶಾಖಪಟ್ಟಣಂನಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ವಿಶ್ವದಾಖಲೆಯ ಯೋಗ ಕಾರ್ಯಕ್ರಮ ನಡೆಯಿತು.
ಇದನ್ನೂ ಓದಿ: ಆಂಗ್ಲರ ನಾಡಲ್ಲಿ ಟೀಮ್ ಇಂಡಿಯಾ ಆರ್ಭಟ – ಯಶಸ್ವಿ ಜೈಸ್ವಾಲ್ ಹೊಸ ಇತಿಹಾಸ
ಕಾರ್ಯಕ್ರಮಕ್ಕಾಗಿ ಆರ್.ಕೆ ಬೀಚ್‍ನಿಂದ ಭೋಗಪುರಂವರೆಗೆ 26 ಕಿಮೀ ಕಾರಿಡಾರ್ನಿ ರ್ಮಾಣ ಮಾಡಲಾಗಿತ್ತು. ಈ ಕಾರಿಡಾರ್‌ನಲ್ಲಿ 3 ಲಕ್ಷಕ್ಕೂ ಅಧಿಕ ಜನ ಯೋಗಾಸನ ಮಾಡಿದ್ದಾರೆ. ಇನ್ನೂ 25,000 ವಿದ್ಯಾರ್ಥಿಗಳಿಂದ 108 ನಿಮಿಷ ಸೂರ್ಯ ನಮಸ್ಕಾರ ಮಾಡಿ ಗಮನ ಸೆಳೆದರು. ಈ ಬಾರಿ `ಒಂದು ಭೂಮಿಗಾಗಿ, ಒಂದು ಆರೋಗ್ಯಕ್ಕಾಗಿ’ ಎಂಬ ಥೀಮ್’ನಲ್ಲಿ ಈ ಬಾರಿಯ ಯೋಗ ದಿನ ಆಚರಣೆ ಮಾಡಲಾಗುತ್ತಿದೆ.
ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸುವವರನ್ನು ಕಾರ್ಯಕ್ರಮದ ಸ್ಥಳಕ್ಕೆ ಕರೆದುಕೊಂಡು ಬರಲು 3,000 ಕ್ಕೂ ಹೆಚ್ಚು ಬಸ್‌ಗಳನ್ನು ಯೋಜಿಸಲಾಗಿದೆ.
ಯೋಗ ಕಾರ್ಯಕ್ರಮಕ್ಕೆ ಭಾರೀ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದ್ದು, 10,000 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಡೀ ಮಾರ್ಗದುದ್ದಕ್ಕೂ 1,200 ಸಿಸಿಟಿವಿ ಕ್ಯಾಮೆರಾಗಳು ಮತ್ತು ಡ್ರೋನ್ ಮೂಲಕ ಕಣ್ಗಾವಲಿಡಲಾಗಿದೆ.

ನೋಡಿರಿ

