ಮೊದಲ ಬಾರಿಗೆ ಸಮುದ್ರ ಆ್ಯಂಬುಲೆನ್ಸ್ ಪರಿಚಯ – ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್

ಮೊದಲ ಬಾರಿಗೆ ಸಮುದ್ರ ಆ್ಯಂಬುಲೆನ್ಸ್ ಪರಿಚಯ – ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್

ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಮೀನುಗಾರರ ರಕ್ಷಣೆಗೆ ಮಹತ್ವದ ಯೋಜನೆ ರೂಪಿಸಿದ್ದಾರೆ. ಜೊತೆಗೆ  ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ:ಬಜೆಟ್‌ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ – ಹೋಟೆಲ್ ವ್ಯಾಪಾರ ಅವಧಿ ರಾತ್ರಿ 1 ಗಂಟೆಗೆ ವಿಸ್ತರಣೆ

ಮೀನುಗಾರಿಕೆ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ 3 ಸಾವಿರ ಕೋಟಿ ಯೋಜನೆ ಘೋಷಿಸಿದ್ದಾರೆ. ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರನ್ನು ತುರ್ತು ಸಂದರ್ಭಗಳಲ್ಲಿ ರಕ್ಷಣೆಗೆ ಮಾಡುವುದಕ್ಕಾಗಿ ಅತ್ಯಾಧುನಿಕ ಸಮುದ್ರ ಆಂಬುಲೆನ್ಸ್ ಖರೀದಿಸಲಾಗುವುದು ಎಂದು ಅವರು ಘೋಷಣೆ ಮಾಡಿದ್ದಾರೆ.

ಹೊನ್ನಾವರ ಅಥವಾ ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಭದ್ರಾವತಿಯಲ್ಲಿ ಹೈಟೆಕ್ ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಣೆ ಮಾಡಿದರು. ಇದರೊಂದಿಗೆ, ಗ್ರಾಮೀಣ ಪತ್ರಕರ್ತರ ದಶಕಗಳ ಕನಸು ನನಸಾಗಿದೆ.

Sulekha