ದೇವೇಗೌಡ, ಬಿಎಸ್‌ವೈ ಕಾಲಿಗೆ ನಮಸ್ಕರಿಸಿದ ಡಿಕೆಶಿ – ಪದಗ್ರಹಣಕ್ಕೆ ಸಿದ್ದು ಸೇರಿ ಮಾಜಿ ಸಿಎಂಗಳಿಗೆ ಆಹ್ವಾನ

ದೇವೇಗೌಡ, ಬಿಎಸ್‌ವೈ ಕಾಲಿಗೆ ನಮಸ್ಕರಿಸಿದ ಡಿಕೆಶಿ – ಪದಗ್ರಹಣಕ್ಕೆ ಸಿದ್ದು ಸೇರಿ ಮಾಜಿ ಸಿಎಂಗಳಿಗೆ ಆಹ್ವಾನ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಬೆಳಗ್ಗೆಯಿಂದಲೇ ಡಿ.ಕೆ ಶಿವಕುಮಾರ್ ಮಾಜಿ ಸಿಎಂಗಳ ಮನೆಗೆ ತೆರಳಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಜೊತೆಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.

ಇದನ್ನೂ ಓದಿ:ಪರಮೇಶ್ವರ್‌ಗೆ ಡಿಸಿಎಂ ಸ್ಥಾನ – ಸಚಿವರಾಗಿ ಯತೀಂದ್ರ ಸಿದ್ದರಾಮಯ್ಯ, ಯು.ಟಿ ಖಾದರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ

ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಖುದ್ದಾಗಿ ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಜೊತೆಗೆ  ಪದಗ್ರಹಣ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಡಿ.ಕೆ ಶಿವಕುಮಾರ್ ಮೊದಲು ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಪರಮೇಶ್ವರ್​​ ಕೂಡಾ ಡಿ.ಕೆ ಶಿವಕುಮಾರ್ ಅವರ ಜೊತೆ ಉಪಸ್ಥಿತರಿದ್ದರು.

ಬೆಂಗಳೂರಿನ ಡಾಲರ್ಸ್​ ಕಾಲೋನಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್​​. ಯಡಿಯೂರಪ್ಪ ಅವರ ಮನೆಗೂ ಡಿಕೆಶಿ ಭೇಟಿ ನೀಡಿದರು. ಈ ವೇಳೆ ಮನೆಯಿಂದ ಹೊರಬಂದು ನಿಯೋಜಿತ ಸಿಎಂರನ್ನು ಬಿಎಸ್​ವೈ ಆಲಂಗಿಸಿ ಸ್ವಾಗತಿಸಿದ್ದಾರೆ. ಬಳಿಕ ಮನೆಯ ದೇವರ ಕೋಣೆಗೆ ತೆರಳಿ ಡಿಕೆಶಿ ನಮಸ್ಕರಿಸಿದ್ದು, ಈ ವೇಳೆ ಶಾಲು ಹೊದಿಸಿ ಶಿವಕುಮಾರ್​​ ಅವರನ್ನು ಯಡಿಯೂರಪ್ಪ ಅಭಿನಂದಿಸಿದ್ದಾರೆ.

ಇನ್ನು ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸಕ್ಕೂ ತೆರಳಿ ಅವರನ್ನು ಕಾರ್ಯಕ್ರಮಕ್ಕೆ ಡಿಕೆಶಿ ಆಹ್ವಾನಿಸಿದ್ದಾರೆ. ಈ ವೇಳೆ ದೇವೇಗೌಡರ ಕಾಲಿಗೆ ಬಿದ್ದು ಡಿ.ಕೆ ಶಿವಕುಮಾರ್ ಆಶೀರ್ವಾದ ಪಡೆದರು. ಇದೇ ವೇಳೆ ಹೆಚ್​ಡಿ ದೇವೇಗೌಡರು ಡಿಕೆಶಿಯವರನ್ನು ಅಭಿನಂದಿಸಿದ್ದಾರೆ. ಇದೇ ವೇಳೆ ಡಿ.ಕೆ ಶಿವಕುಮಾರ್ ಮಾಜಿ ಮುಖ್ಯಮಂತ್ರಿಗಳನ್ನು ಪದಗ್ರಹಣ ಕಾರ್ಯಕ್ರಮಕ್ಕೂ ಆಹ್ವಾನಿಸಿದರು.

Sulekha