ರಿಷಭ್ ಪಂತ್ ಫಿಟ್ ಅಂಡ್ ಫೈನ್ – ಕೊನೆಗೂ ಹಸಿರು ನಿಶಾನೆ ತೋರಿಸಿದ ಎನ್ಸಿಎ!
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರಲ್ಲಿ ರಿಷಭ್ ಪಂತ್ ಕಣಕ್ಕಿಳಿಯುವುದು ಖಚಿತವಾಗಿದೆ. ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ(ಎನ್ಸಿಎ) ನಡೆದ ಫಿಟ್ನೆಸ್ ಟೆಸ್ಟ್ನಲ್ಲಿ ರಿಷಭ್ ಪಾಸ್ ಆಗಿದ್ದು, ಈ ಮೂಲಕ ಐಪಿಎಲ್ ಆಡಲು ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ. ಅದರಂತೆ ಈ ಬಾರಿ ಪಂತ್ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕಣಕ್ಕಿಳಿಯಲಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಕಾಟನ್ ಕ್ಯಾಂಡಿ, ಕೃತಕ ಬಣ್ಣ ಬಳಸಿದ ಗೋಬಿ ಮಂಚೂರಿ ನಿಷೇಧ
ಇದಕ್ಕೂ ಮುನ್ನ ರಿಷಭ್ ಪಂತ್ ಫಿಟ್ನೆಸ್ ಟೆಸ್ಟ್ನಲ್ಲಿ ವಿಫಲರಾದರೆ, ಅವರು ವಿಕೆಟ್ ಕೀಪಿಂಗ್ ಮಾಡುವುದು ಅನುಮಾನ ಎನ್ನಲಾಗಿತ್ತು. ಆದರೀಗ ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್ನಲ್ಲಿ ತಮ್ಮ ಸಾಮರ್ಥ್ಯವನ್ನು ಪಂತ್ ತೆರೆದಿಟ್ಟಿದ್ದು, ಈ ಮೂಲಕ ಐಪಿಎಲ್ ಆಡಲು NCA ಕಡೆಯಿಂದ ಪ್ರಮಾಣಪತ್ರವನ್ನು ಪಡೆದುಕೊಂಡಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರಿಷಭ್ ಪಂತ್ ಅವರ ಮರಳುವಿಕೆಯಿಂದ ನಾಯಕತ್ವ ಕೂಡ ಬದಲಾಗಲಿದೆ. ಅಂದರೆ ಕಳೆದ ಸೀಸನ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಡೇವಿಡ್ ವಾರ್ನರ್ ಮುನ್ನಡೆಸಿದ್ದರು. ಇದೀಗ ಪಂತ್ ಕಂಬ್ಯಾಕ್ನಿಂದಾಗಿ ವಾರ್ನರ್ ಉಪನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ರಿಷಭ್ ಪಂತ್ ಸಾರಥ್ಯದಲ್ಲಿ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಕಣಕ್ಕಿಳಿಯಲಿದೆ.