​ರಿಷಭ್ ಪಂತ್‌ ಫಿಟ್‌ ಅಂಡ್‌ ಫೈನ್‌ – ಕೊನೆಗೂ ಹಸಿರು ನಿಶಾನೆ ತೋರಿಸಿದ ಎನ್​ಸಿಎ!

 ​ರಿಷಭ್ ಪಂತ್‌ ಫಿಟ್‌ ಅಂಡ್‌ ಫೈನ್‌ – ಕೊನೆಗೂ ಹಸಿರು ನಿಶಾನೆ ತೋರಿಸಿದ ಎನ್​ಸಿಎ!

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರಲ್ಲಿ ರಿಷಭ್ ಪಂತ್ ಕಣಕ್ಕಿಳಿಯುವುದು ಖಚಿತವಾಗಿದೆ. ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್​ ಅಕಾಡೆಮಿಯಲ್ಲಿ(ಎನ್‌ಸಿಎ) ನಡೆದ ಫಿಟ್​ನೆಸ್ ಟೆಸ್ಟ್​ನಲ್ಲಿ ರಿಷಭ್ ಪಾಸ್ ಆಗಿದ್ದು, ಈ ಮೂಲಕ ಐಪಿಎಲ್ ಆಡಲು ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ. ಅದರಂತೆ ಈ ಬಾರಿ ಪಂತ್ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕಣಕ್ಕಿಳಿಯಲಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಕಾಟನ್ ಕ್ಯಾಂಡಿ, ಕೃತಕ ಬಣ್ಣ ಬಳಸಿದ ಗೋಬಿ ಮಂಚೂರಿ ನಿಷೇಧ

ಇದಕ್ಕೂ ಮುನ್ನ ರಿಷಭ್ ಪಂತ್ ಫಿಟ್​ನೆಸ್ ಟೆಸ್ಟ್​ನಲ್ಲಿ ವಿಫಲರಾದರೆ, ಅವರು ವಿಕೆಟ್ ಕೀಪಿಂಗ್ ಮಾಡುವುದು ಅನುಮಾನ ಎನ್ನಲಾಗಿತ್ತು. ಆದರೀಗ ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್​ನಲ್ಲಿ ತಮ್ಮ ಸಾಮರ್ಥ್ಯವನ್ನು ಪಂತ್ ತೆರೆದಿಟ್ಟಿದ್ದು, ಈ ಮೂಲಕ ಐಪಿಎಲ್​ ಆಡಲು NCA ಕಡೆಯಿಂದ ಪ್ರಮಾಣಪತ್ರವನ್ನು ಪಡೆದುಕೊಂಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರಿಷಭ್ ಪಂತ್ ಅವರ ಮರಳುವಿಕೆಯಿಂದ ನಾಯಕತ್ವ ಕೂಡ ಬದಲಾಗಲಿದೆ. ಅಂದರೆ ಕಳೆದ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಡೇವಿಡ್ ವಾರ್ನರ್ ಮುನ್ನಡೆಸಿದ್ದರು. ಇದೀಗ ಪಂತ್ ಕಂಬ್ಯಾಕ್​ನಿಂದಾಗಿ ವಾರ್ನರ್ ಉಪನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ರಿಷಭ್ ಪಂತ್ ಸಾರಥ್ಯದಲ್ಲಿ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಕಣಕ್ಕಿಳಿಯಲಿದೆ.

Shwetha M