KKR ವಿರುದ್ಧ ಮುಂಬೈಗೆ ರೋಚಕ ಗೆಲುವು – ಅತ್ಯಧಿಕ ಮೊತ್ತ ಬೆನ್ನಟ್ಟಿದ ದಾಖಲೆ ಬರೆದ ಪಾಂಡ್ಯ ಪಡೆ

ಮುಂಬೈ ಇಂಡಿಯನ್ಸ್ ಐಪಿಎಲ್ 2026 ರಲ್ಲಿ ಕೆಕೆಆರ್ ವಿರುದ್ಧ 221 ರನ್ ಬೆನ್ನಟ್ಟಿ ಐತಿಹಾಸಿಕ ಗೆಲುವು ಸಾಧಿಸಿದೆ. ರೋಹಿತ್ ಶರ್ಮಾ ಮತ್ತು ರಿಕಲ್ಟನ್ ಅರ್ಧಶತಕಗಳ ನೆರವಿನಿಂದ ಮುಂಬೈ ತಂಡ ಕೆಕೆಆರ್ ವಿರುದ್ಧ ರೋಚಕವಾಗಿ ಗೆದ್ದಿದೆ.
ಸವಾಲಿನ ಮೊತ್ತವನ್ನು ಹಿಂಬಾಲಿಸಿದ ಮುಂಬೈ ಇಂಡಿಯನ್ಸ್ ತಂಡದ ಆರಂಭ ಸೊಗಸಾಗಿತ್ತು. ಆರಂಭಿಕರಾದ ರಯಾನ್ ರಿಕಲ್ಟನ್ ಹಾಗೂ ರೋಹಿತ್ ಶರ್ಮಾ ಜೋಡಿ ಅಬ್ಬರಿಸಿತು. ಈ ಜೋಡಿ ಪವರ್ ಪ್ಲೇನಲ್ಲಿ 80 ರನ್ ಸೇರಿಸಿತು. ಮೊದಲ ವಿಕೆಟ್‌ಗೆ ಈ ಜೋಡಿ 11.5 ಓವರ್‌ಗಳಲ್ಲಿ 148 ರನ್‌ಗಳ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು. ಅನುಭವಿ ರೋಹಿತ್ ಶರ್ಮಾ 38 ಎಸೆತಗಳಲ್ಲಿ 6 ಬೌಂಡರಿ, 6 ಸಿಕ್ಸರ್ ಸಹಾಯದಿಂದ 78 ರನ್ ಸಿಡಿಸಿದರು. ಈ ವೇಳೆ ಇವರ ಸ್ಟ್ರೈಕ್ ರೇಟ್ 205 ಆಗಿತ್ತು.
ಸೂರ್ಯಕುಮಾರ್ ಯಾದವ್ 3 ಬೌಂಡರಿ ಸಹಾಯದಿಂದ 16 ರನ್ ಸಿಡಿಸಿ ಔಟ್ ಆದರು. ವಿಕೆಟ್ ಕೀಪರ್ ಬ್ಯಾಟರ್ ರಯಾನ್ ರಿಕಲ್ಟನ್ 4 ಬೌಂಡರಿ, 8 ಸಿಕ್ಸರ್ ನೆರವಿನಿಂದ 81 ರನ್ ಬಾರಿಸಿ ಇಲ್ಲದ ರನ್ ಕದಿಯಲು ಹೋಗಿ ಔಟ್ ಆದರು. ಮಧ್ಯಮ ಕ್ರಮಾಂಕದ ತಿಲಕ್ ವರ್ಮಾ 4 ಬೌಂಡರಿ ನೆರವಿನಿಂದ 20 ರನ್ ಬಾರಿಸಿದರು. ಹಾರ್ದಿಕ್ ಪಾಂಡ್ಯ ಅಜೇಯ 18 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಮಿಂಚಿದರು. ಅಂತಿಮವಾಗಿ ಮುಂಬೈ 19.1 ಓವರ್‌ಗಳಲ್ಲಿ 4 ವಿಕೆಟ್‌ಗೆ 224 ರನ್ ಸಿಡಿಸಿ ಮೊದಲ ಗೆಲುವಿನ ನಗೆ ಬೀರಿತು.
ಇದನ್ನೂ ಓದಿ: ನಮ್ಮ ಮೆಟ್ರೋ ನೀಲಿ ಮಾರ್ಗದ ಬಗ್ಗೆ ಬಿಗ್ ಅಪ್‌ಡೇಟ್! – ಬ್ಲೂ ಲೈನ್‌ಗೆ ಬರಲಿವೆ 2 ಡ್ರೈವರ್‍ಲೆಸ್ ರೈಲು
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡದ ಆರಂಭ ಭರ್ಜರಿಯಾಗಿತ್ತು. ಆರಂಭಿಕ ಫಿನ್ ಅಲೆನ್ (37) ಹಾಗೂ ನಾಯಕ ಅಜಿಂಕ್ಯ ರಹಾನೆ ಮೊದಲ ವಿಕೆಟ್‌ಗೆ 5.2 ಓವರ್‌ಗಳಲ್ಲಿ 69 ರನ್ ಸೇರಿಸಿದರು. ದುಬಾರಿ ಆಟಗಾರ ಕ್ಯಾಮರೂನ್ ಗ್ರೀನ್ 18 ರನ್ ಬಾರಿಸಿ ಔಟ್ ಆದರು. ಅಜಿಂಕ್ಯ ರಹಾನೆ 40 ಎಸೆತಗಳಲ್ಲಿ 3 ಬೌಂಡರಿ, 5 ಸಿಕ್ಸರ್ ಸಹಾಯದಿಂದ 67 ರನ್ ಬಾರಿಸಿ ಔಟ್ ಆದರು. ಮಧ್ಯಮ ಕ್ರಮಾಂಕದ ಅಂಗ್‌ಕ್ರಿಶ್ ರಘುವಂಶಿ ಅಮೋಘ ಬ್ಯಾಟಿಂಗ್ ನಡೆಸಿದರು. ಇವರು 6 ಬೌಂಡರಿ, 2 ಸಿಕ್ಸರ್ ನೆರವಿನಿಂದ 51 ರನ್ ಸಿಡಿಸಿದರು. ಭರವಸೆಯ ಆಟಗಾರ ರಿಂಕು ಸಿಂಗ್ 4 ಬೌಂಡರಿ ಸಹಾಯದಿಂದ ಅಜೇಯ 33 ರನ್ ಬಾರಿಸಿದರು. ಅಂತಿಮವಾಗಿ ಕೆಕೆಆರ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 220 ರನ್ ಸೇರಿಸಿತು.

ನೋಡಿರಿ

