ಇಂದು RCB VS DC ಬಿಗ್ ಫೈಟ್ – ಚಿನ್ನಸ್ವಾಮಿ ಕಡೆ ಹೋಗುವ ವಾಹನ ಸವಾರರೇ ಎಚ್ಚರ!

ಲಿಕಾನ್ ಸಿಟಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಐಪಿಎಲ್ ಪಂದ್ಯಾವಳಿಯ ರೋಚಕ ಹಣಾಹಣಿ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಪಂದ್ಯದ ಯಶಸ್ವಿ ನಿರ್ವಹಣೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಬೆಂಗಳೂರು ಸಂಚಾರಿ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ.
ಪಂದ್ಯದ ಭದ್ರತೆಗಾಗಿ ಸುಮಾರು 2000 ಪೊಲೀಸರನ್ನು ನಿಯೋಜಿಸಲಾಗಿದೆ. ಕ್ರೀಡಾಂಗಣದ ಸುತ್ತಮುತ್ತ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದ್ದು, ವಿಶೇಷವಾಗಿ ಬ್ಲ್ಯಾಕ್ ಟಿಕೆಟ್ ಮಾರಾಟ ಜಾಲವನ್ನು ಭೇದಿಸಲು 7 ವಿಶೇಷ ತಂಡಗಳನ್ನು ರಚಿಸಲಾಗಿದೆ. ಟಿಕೆಟ್ ಇಲ್ಲದವರು ಕ್ರೀಡಾಂಗಣದ ಬಳಿ ಗುಂಪು ಸೇರುವುದನ್ನು ನಿಷೇಧಿಸಲಾಗಿದ್ದು, ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಪ್ರೇಕ್ಷಕರು ತಮ್ಮ ಮೊಬೈಲ್ ಫೋನ್, ಪರ್ಸ್ ಮತ್ತು ಚಿನ್ನಾಭರಣಗಳ ಬಗ್ಗೆ ಜಾಗರೂಕರಾಗಿರಲು ಸೂಚಿಸಲಾಗಿದೆ.
ವಾಹನ ನಿಲುಗಡೆ ನಿಷೇಧಿತ ರಸ್ತೆ
ಕ್ವೀನ್ಸ್ ರಸ್ತೆ, ಎಂ.ಜಿ. ರಸ್ತೆ (ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ), ಕಬ್ಬನ್ ರಸ್ತೆ, ರಾಜಭವನ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ಲಾವೆಲ್ಲೆ ರಸ್ತೆ, ವಿಟ್ಟಲ್ ಮಲ್ಯ ರಸ್ತೆ ಮತ್ತು ಕಬ್ಬನ್ ಪಾರ್ಕ್ ಒಳಗಿನ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ವಾಹನ ಎಲ್ಲೆಲ್ಲಿ ನಿಲ್ಲಿಸಬೇಕು?
- ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ
- ಸೆಂಟ್ ಜೋಸೆಫ್ ಯುರೋಪಿಯನ್ ಶಾಲಾ ಮೈದಾನ
- ಫ್ರೀಡಂ ಪಾರ್ಕ್ (MLCP ಪಾರ್ಕಿಂಗ್)
- ಕಂಠೀರವ ಕ್ರೀಡಾಂಗಣ (ಹೊಸದಾಗಿ ಸೇರ್ಪಡೆ)
- ಯು.ಬಿ. ಸಿಟಿ ಮತ್ತು ಗರುಡ ಮಾಲ್ ಪಾರ್ಕಿಂಗ್
- ಶಿವಾಜಿನಗರ ಬಸ್ ನಿಲ್ದಾಣ (1ನೇ ಮಹಡಿ)

ನೋಡಿರಿ

