14ನೇ ಪಂದ್ಯಕ್ಕೆ RCBಗೆ ಹೊಸ ಬೌಲರ್ ಎಂಟ್ರಿ – ಪ್ಲೇಯಿಂಗ್ 11ನಲ್ಲಿ ಸಿಗುತ್ತಾ ಚಾನ್ಸ್‌?

14ನೇ ಪಂದ್ಯಕ್ಕೆ RCBಗೆ ಹೊಸ ಬೌಲರ್ ಎಂಟ್ರಿ – ಪ್ಲೇಯಿಂಗ್ 11ನಲ್ಲಿ ಸಿಗುತ್ತಾ ಚಾನ್ಸ್‌?

ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 13 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಳೂರು ತಂಡಕ್ಕೆ ಇನ್ನುಳಿದಿರುವುದು ಒಂದು ಲೀಗ್ ಮ್ಯಾಚ್ ಮಾತ್ರ. ಈ ಪಂದ್ಯಕ್ಕೂ ಮುನ್ನ ಆರ್​ಸಿಬಿ ಪಡೆಗೆ ಇಂಗ್ಲೆಂಡ್ ವೇಗಿ ಎಂಟ್ರಿ ಕೊಟ್ಟಿದ್ದಾರೆ.  ಇಂಗ್ಲೆಂಡ್ ತಂಡದ 38 ವರ್ಷದ ಅನುಭವಿ ವೇಗಿ ರಿಚರ್ಡ್ ಗ್ಲೀಸನ್ ಅವರನ್ನು ಇತ್ತೀಚೆಗೆ ಆರ್​ಸಿಬಿ ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಆರ್​ಸಿಬಿ ತಂಡದಲ್ಲಿದ್ದ ಶ್ರೀಲಂಕಾ ವೇಗಿ ನುವಾನ್ ತುಷಾರ ಗಾಯದ ಕಾರಣ ಹೊರಗುಳಿದಿದ್ದು, ಅವರ ಬದಲಿಗೆ ಗ್ಲೀಸನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು.

ಅದರಂತೆ ಇದೀಗ ರಿಚರ್ಡ್ ಗ್ಲೀಸನ್ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಅಲ್ಲದೆ ಜೇಕಬ್ ಡಫಿ ಜೊತೆಗೂಡಿ ಬೌಲಿಂಗ್ ಅಭ್ಯಾಸದಲ್ಲೂ ನಿರತರಾಗಿದ್ದಾರೆ. ಇದಾಗ್ಯೂ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಗ್ಲೀಸನ್​ಗೆ ಚಾನ್ಸ್ ಸಿಗುವ ಸಾಧ್ಯತೆಯಿಲ್ಲ.    ಏಕೆಂದರೆ ಜೇಕಬ್ ಬೆಥೆಲ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್ ಹಾಗೂ ಜೋಶ್ ಹೇಝಲ್​ವುಡ್ ಕಣಕ್ಕಿಳಿಯುತ್ತಿರುವ ಕಾರಣ ಕಿವೀಸ್ ವೇಗಿ ಜೇಕಬ್ ಡಫಿ ಬೆಂಚ್ ಕಾಯುತ್ತಿದ್ದಾರೆ. ಒಂದು ವೇಳೆ ಆಡುವ ಬಳಗದಲ್ಲಿ ಬದಲಾವಣೆ ಮಾಡಿದರೆ, ಡಫಿಗೆ ಚಾನ್ಸ್​ ಸಿಗುವ ಸಾಧ್ಯತೆ ಹೆಚ್ಚು.

ಇದನ್ನೂ ಓದಿ: ಅತ್ತೆ ಅಂತ್ಯಕ್ರಿಯೆಗೆ ಹೋದವನ ಬದುಕು ಅಂತ್ಯ – ಸರಯು ನದಿಯಲ್ಲಿ ಸ್ನಾನಕ್ಕೆ ಇಳಿದಾಗ ಮೊಸಳೆ ಅಟ್ಯಾಕ್

ಇದಾಗ್ಯೂ ಕೆಲವೇ ಪಂದ್ಯಗಳು ಮಾತ್ರ ಬಾಕಿ ಇರುವಾಗ ಗ್ಲೀಸನ್​ ಅವರನ್ನು ಆಯ್ಕೆ ಮಾಡಿಕೊಂಡಿರುವುದು ಯಾಕೆ ಎಂಬ ಪ್ರಶ್ನೆ ಮೂಡುವುದು ಸಹಜ. ಇದಕ್ಕೆ ಉತ್ತರ ಬ್ಯಾಕಪ್ ಪ್ಲೇಯರ್. ಅಂದರೆ ಜೋಶ್ ಹೇಝಲ್​ವುಡ್ ಫಿಟ್​ನೆಸ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅತ್ತ ಡಫಿ ಕೂಡ ಸಂಪೂರ್ಣ ಫಿಟ್​ ಆಗಿಲ್ಲ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ

ಒಂದು ವೇಳೆ ಈ ಇಬ್ಬರು ಪ್ರಮುಖ ವೇಗಿಗಳು ಗಾಯಗೊಂಡರೆ ಕಣಕ್ಕಿಳಿಸಲು ಬ್ಯಾಕಪ್ ಆಗಿ ರಿಚರ್ಡ್ ಗ್ಲೀಸನ್ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿ ಗ್ಲೀಸನ್ ಅವರನ್ನೇ ಯಾಕೆ ಆಯ್ಕೆ ಮಾಡಿಕೊಂಡರು? ಎಂಬ ಪ್ರಶ್ನೆಗೆ ಅವರು ಇತ್ತೀಚಿನ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ನೀಡಿದ  ಅದ್ಭುತ ಪ್ರದರ್ಶನ ಎಂಬ ಉತ್ತರ ಸಿಗುತ್ತಿದೆ.

ಇತ್ತೀಚೆಗೆ ಮುಕ್ತಾಯಗೊಂಡ ಪಿಎಸ್​ಎಲ್​​​ (PSL 2026) ಟೂರ್ನಿಯಲ್ಲಿ ಇಸ್ಲಾಮಾಬಾದ್ ಯುನೈಟೆಡ್ ಪರ ಆಡಿದ್ದ ಗ್ಲೀಸನ್ ಕೇವಲ 7.14 ಎಕಾನಮಿ ರೇಟ್​ನಲ್ಲಿ ಮಾತ್ರ ರನ್ ಬಿಟ್ಟು ಕೊಟ್ಟಿದ್ದರು. ಅಲ್ಲದೆ ಆರ್​ಸಿಬಿ ತಂಡದ ಹೆಡ್ ಕೋಚ್ ಆ್ಯಂಡಿ ಫ್ಲವರ್ ಅವರಿಗೆ ರಿಚರ್ಡ್​ ಗ್ಲೀಸನ್ ಅವರ ಬೌಲಿಂಗ್ ಶೈಲಿಯ ಬಗ್ಗೆ ಚೆನ್ನಾಗಿ ತಿಳಿದಿದೆ. 38ರ ಹರೆಯದಲ್ಲೂ ಗ್ಲೀಸನ್ 140+ ಕಿಮೀ ವೇಗದಲ್ಲಿ ಬೌಲಿಂಗ್ ಮಾಡಬಲ್ಲರು

Kishor KV

Leave a Reply

Your email address will not be published. Required fields are marked *