ಇರಾನ್‌ ಮೇಲೆ ಇಸ್ರೇಲ್‌ ದಾಳಿ  – ಸಂಘರ್ಷದ ಬೆನ್ನಲ್ಲೇ ಭಾರತೀಯರಿಗೆ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದ ರಾಯಭಾರ ಕಚೇರಿ

ಇರಾನ್‌ ಮೇಲೆ ಇಸ್ರೇಲ್‌ ದಾಳಿ  – ಸಂಘರ್ಷದ ಬೆನ್ನಲ್ಲೇ ಭಾರತೀಯರಿಗೆ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದ ರಾಯಭಾರ ಕಚೇರಿ

ಉಗ್ರರನ್ನು ಸದೆಬಡಿಯಲು ಟೊಂಕ ಕಟ್ಟಿ ನಿಂತಿರುವ ಇಸ್ರೇಲ್‌, ಇರಾನ್‌ ಮೇಲೆ ಭೀಕರ ದಾಳಿ ನಡೆಸಿದೆ. ಅ. 1 ರ ರಾತ್ರಿ ಇಸ್ರೇಲ್ ನಲ್ಲಿರುವ, ಯೇಸುಕ್ರಿಸ್ತನ ಸಮಾಧಿ ಸ್ಥಳವಾದ ಜೆರುಸಲೇಂ ನಗರವನ್ನೇ ಗುರಿಯಾಗಿಸಿಕೊಂಡು ಸುಮಾರು 200ಕ್ಕೂ ಹೆಚ್ಚು ಕ್ಷಿಪಣಿಗಳ ಮೂಲಕ ದಾಳಿ ನಡೆಸಿದೆ. ಕ್ಷಿಪಣಿ ದಾಳಿ ಬಳಿಕ  ಮಧ್ಯಪ್ರಾಚ್ಯದಲ್ಲಿ ಯುದ್ಧ ಕಾರ್ಮೋಡ ಕವಿದಿದ್ದು,ಇರಾನ್‌ಗೆ ಪ್ರಯಾಣಿಸದಂತೆ ಸರ್ಕಾರವು ಭಾರತೀಯ ನಾಗರಿಕರಿಗೆ ಸಲಹೆ ನೀಡಿದೆ.

ಇದನ್ನೂ ಓದಿ: ಲಡ್ಡು ವಿವಾದ ಎಫೆಕ್ಟ್‌ – ತಿಮ್ಮಪ್ಪನ ಸನ್ನಿಧಿಯಲ್ಲಿ ಭಕ್ತರಿದ್ದೂ ಲಡ್ಡು ಕೌಂಟರ್‌ ಖಾಲಿ ಖಾಲಿ!

ಕ್ಷಿಪಣಿ ದಾಳಿ ವರದಿಯಾಗುತ್ತಿದ್ದಂತೆ ಅಧಿಕಾರಿಗಳು ಇರಾನ್‌ನಲ್ಲಿರುವ ಭಾರತೀಯರಿಗೆ ಎಚ್ಚರಿಕೆಯಿಂದ ಇರುವಂತೆ ಮತ್ತು ಟೆಹ್ರಾನ್‌ನಲ್ಲಿರುವ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಸೂಚಿಸಿದ್ದಾರೆ. ನಾವು ಪ್ರದೇಶದಲ್ಲಿ ಭದ್ರತಾ ಪರಿಸ್ಥಿತಿಯಲ್ಲಿ ಇತ್ತೀಚಿನ ಉಲ್ಬಣವನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣವನ್ನು ತಪ್ಪಿಸಲು ಭಾರತೀಯ ಪ್ರಜೆಗಳಿಗೆ ಸೂಚಿಸಲಾಗಿದೆ. ಪ್ರಸ್ತುತ ಇರಾನ್‌ನಲ್ಲಿ ನೆಲೆಸಿರುವವರು ಜಾಗರೂಕರಾಗಿರಲು ಮತ್ತು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ವಿನಂತಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆ ಮೂಲಕ ತಿಳಿಸಿದೆ.

ದಯವಿಟ್ಟು ಜಾಗರೂಕರಾಗಿರಿ, ದೇಶದೊಳಗೆ ಅನಗತ್ಯ ಪ್ರಯಾಣವನ್ನು ತಪ್ಪಿಸಿ ಮತ್ತು ಸುರಕ್ಷತಾ ಆಶ್ರಯಕ್ಕೆ ಹತ್ತಿರದಲ್ಲಿರಿ. ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ನಮ್ಮ ಎಲ್ಲಾ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಇಸ್ರೇಲಿ ಅಧಿಕಾರಿಗಳೊಂದಿಗೆ ನಿಯಮಿತ ಸಂಪರ್ಕದಲ್ಲಿದೆ ಎಂದು ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಾಹಿತಿ ನೀಡಿದೆ.

Shwetha M