ಒಂದು ಮದುವೆ.. ಇಬ್ಬರು ಆತ್ಮಹ*ತ್ಯೆ! – ಮುಂದೆ ನಿಂತು ಮದುವೆ ಮಾಡಿಸಿದ್ದೇ ಮುಳುವಾಯ್ತಾ?

ಒಂದು ಮದುವೆ.. ಇಬ್ಬರು ಆತ್ಮಹ*ತ್ಯೆ! – ಮುಂದೆ ನಿಂತು ಮದುವೆ ಮಾಡಿಸಿದ್ದೇ ಮುಳುವಾಯ್ತಾ?

ಮದುವೆ ಎಂಬುದು ಕೇವಲ ಇಬ್ಬರು ವ್ಯಕ್ತಿಗಳಲ್ಲ.. ಎರಡು ಮನಸ್ಸುಗಳು, ಕುಟುಂಬಗಳು ಹಾಗೂ ಜೀವನಗಳನ್ನು ಜೋಡಿಸುವ ಪವಿತ್ರ ಮತ್ತು ಸುಂದರ ಬಂಧ. ಮದುವೆಯಾದ ಮೇಲೆ ಕೆಲವರ ಜೀವನ ಸುಂದವಾಗಿದ್ರೆ, ಇನ್ನೂ ಕೆಲವು ಮದುವೆಗಳು ನರಕದ ಕೂಪವಾಗಿರುತ್ತವೆ. ಇದೀಗ ಇಂತಹದ್ದೇ ಘಟನೆ ನಡೆದಿದೆ. ಮದುವೆಯಾದ ಎರಡೇ ತಿಂಗಳಿಗೆ ನವವಿವಾಹಿತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈತನ ಸಾವಿನ ಸುದ್ದಿ ಕೇಳಿ ಮತ್ತೊಬ್ಬ ಕೂಡ ಪ್ರಾಣ ಕಳೆದುಕೊಂಡಿದ್ದಾನೆ.

ಇದನ್ನೂ ಓದಿ: ಕೋಗಿಲು ನಿವಾಸಿಗಳು ಲಕ್ಷ, ಲಕ್ಷ ಕೊಟ್ಟು ಮನೆ ಖರೀದಿಸಿದ್ರಾ? – ಆರೋಪಿಗಳ ಖಾತೆಯಲ್ಲಿ ಕೋಟಿ-ಕೋಟಿ ವ್ಯವಹಾರ!

ಈ ಘಟನೆ ಘಟನೆ ದಾವಣಗೆರೆ ಜಿಲ್ಲೆಯ ಗುಮ್ಮನೂರಲ್ಲಿ ನಡೆದಿದೆ. ಹರೀಶ್‌ ಎಂಬಾತ ಖಾಸಗಿ ಕಂಪನಿಯಲ್ಲಿ ಎಚ್‌ಆರ್ ಆಗಿ ಕೆಲಸ ಮಾಡುತ್ತಿದ್ದರು. ಕಳೆದ ಎರಡು ತಿಂಗಳ ಹಿಂದೆ ರುದ್ರೇಶ್ ಎನ್ನುವವರು ಹರೀಶ್‌, ಸರಸ್ವತಿ ಎಂಬಾಕೆಯನ್ನು ಮದುವೆಯಾಗಿದ್ದರು. ರುದ್ರೇಶ್‌ ಸರಸ್ವತಿಯ ಸೋದರ ಮಾವ. ಆದ್ರೆ ಮದುವೆಯಾದ ಎರಡೇ ತಿಂಗಳಿಗೆ ಹರೀಶ್‌ ಪತ್ನಿ ಬೇರೆ ವ್ಯಕ್ತಿ ಜೊತೆ ಓಡಿ ಹೋಗಿದ್ದಾಳೆ. ಇದ್ರಿಂದ ಮನನೊಂದ ಹರೀಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಅವರಿಗೆ ಮದುವೆ ಮಾಡಿಸಿದ ಸರಸ್ವತಿ ಸೋದರ ಮಾವ ರುದ್ರೇಶ್ ಕೂಡಾ ವಿಷ ಸೇವಿಸಿ ಆತ್ಮ*ಹತ್ಯೆಗೆ ಯತ್ನಿಸಿದ್ದಾರೆ.

ಹರೀಶ್​​ ಡೆತ್​​ನೋಟ್​​ನಲ್ಲಿ ಏನಿದೆ?
ಪತ್ನಿ ಅನಗತ್ಯ ಕಿರುಕುಳ ನೀಡುತ್ತಿದ್ದಾಳೆ. ಬೇರೆ ಯುವಕನೊಂದಿಗೆ ಓಡಿ ಹೋಗಿ ನಾನು ಹಿಂಸೆ ನೀಡುತ್ತಿರುವೆ ಎಂದು ಆರೋಪಿಸಿದ್ದಾಳೆ. ಪತ್ನಿ ಹಾಗೂ ಸಂಬಂಧಿಕರಿಂದ ತನಗೆ ಜೀವ ಬೆದರಿಕೆ ಇತ್ತು. ಇದೇ ಕಾರಣಕ್ಕೆ ಬೇಸತ್ತು ಆತ್ಮಹತ್ಯೆ ಶರಣಾಗುತ್ತಿದ್ದೇನೆ ಎಂದು ಡೆತ್ ನೋಟ್​​ನಲ್ಲಿ ಹರೀಶ್​​ ಉಲ್ಲೇಖಿಸಿದ್ದಾರೆ. ಪತ್ನಿ ಹಾಗೂ ಆಕೆ ತಂದೆ, ತಾಯಿ, ಚಿಕ್ಕಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು. ಆಸ್ತಿಗಿಂತ ಮಾನ ಮುಖ್ಯವಾಗಿರುವ ಕಾರಣ ಈ ನಿರ್ಧಾರ ಕೈಗೊಳ್ಳುತ್ತಿದ್ದೇನೆ. ತನ್ನನ್ನು ಕ್ಷಮಿಸಿ ಎಂದು ಕುಟುಂಬ ಸದಸ್ಯರಿಗೆ ಹರೀಶ್​​ ಕ್ಷಮೆಯನ್ನೂ ಕೇಳಿದ್ದು, ಪತ್ನಿಯ ಕಡೆಯವರು ನೀಡಿದ ಹಿಂಸೆಗೆ ತನ್ನ ತಂದೆ ತಾಯಿ ಮನೆ ಬಿಡುವ ಯೋಚನೆ ಕೂಡ ಮಾಡಿದ್ದರು ಎಂದು ಆರೋಪಿಸಿದ್ದಾರೆ. ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಆನೆಕೊಂಡದ ತಮ್ಮ ಮನೆಯಲ್ಲಿ ರುದ್ರೇಶ್ ವಿಷ ಸೇವಿಸಿ ಆತ್ಮ*ಹತ್ಯೆಗೆ ಯತ್ನಿಸಿದ್ದಾರೆ. ಇನ್ನು ತೀವ್ರವಾಗಿ ಅಸ್ವಸ್ಥಗೊಂಡಿದ್ದ ರುದ್ರೇಶ್ ಅವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರುದ್ರೇಶ್ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ. ದಾವಣಗೆರೆಯ ಆರ್‌ಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ. ಇಬ್ಬರು ಯಾವ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ವಿಚಾರ ಇನ್ನೂ ಬಯಲಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Shwetha M